ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ ಆಕ್ಸಿಜನ್ ದುರಂತ: ಪರಿಹಾರ ನೀಡುವಂತೆ ಹೈಕೋರ್ಟ್ ಸೂಚನೆ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜುಲೈ 6: ಕಳೆದ ಮೇ 2 ರಂದು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಕಾಲಕ್ಕೆ ಆಕ್ಸಿಜನ್ ಸಿಗದೆ ಸಾವನ್ನಪ್ಪಿದ 24 ಜನರ ಪೈಕಿ 13 ಜನರಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆಯನ್ನು ನೀಡಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಂಗಳವಾರ ಮತ್ತೆ ಹೊಸ ಸೂಚನೆಯನ್ನು ಸರ್ಕಾರಕ್ಕೆ ನೀಡಿದೆ ಎಂದು ತಿಳಿದುಬಂದಿದೆ. ಸಕಾಲಕ್ಕೆ ಆಕ್ಸಿಜನ್ ಸರಬರಾಜು ಆಗದೆ ಸಾವನ್ನಪ್ಪಿದ 24 ಜನರ ಪೈಕಿ 13 ಜನರಿಗೆ 5 ಲಕ್ಷ ರೂ. ಪರಿಹಾರವನ್ನು ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಆಕ್ಸಿಜನ್ ಕೊರತೆಯಾದ ರಾತ್ರಿ 13 ಸಾವು ಸಂಭವಿಸಿದೆ. 13 ಮೃತರ ಸಂಬಂಧಿಕರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಿ, ನಂತರ ಮೃತಪಟ್ಟ 11 ಜನರಿಗೆ 2 ಲಕ್ಷ ಪರಿಹಾರ ನೀಡಲು ಸೂಚನೆ ನೀಡಿದೆ. ಆದರೆ ಈ ದುರಂತದಲ್ಲಿ ಒಟ್ಟು 36 ಜನರು ಮೃತಪಟ್ಟಿದ್ದಾರೆಂದು ಆರೋಪಿಸಲಾಗಿತ್ತು.

Chamarajanagar Oxygen Tragedy: High Court Instructs To State Govt To Provide Relief

Recommended Video

ಹಿಡಿತ ತಪ್ಪಿದ ಕುಮಾರಸ್ವಾಮಿ ಮಾತು, ರೊಚ್ಚಿಗೆದ್ದ ಸುಮಲತಾ | Oneindia Kannada

ಆಯೋಗದ ವರದಿ ನಂತರ ಹೆಚ್ಚುವರಿ ಪರಿಹಾರದ ಬಗ್ಗೆ ನಿರ್ಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ ಎಂದು ತಿಳಿದುಬಂದಿದೆ.

English summary
The High Court has instructed the state government to provide relief to 13 people out of the 24 people who died in the Chamarajanagar district hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X