ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ ದುರಂತ: ರಾಹುಲ್ ಗಾಂಧಿ, ಸಿದ್ದರಾಮಯ್ಯ ಸೇರಿ ಅನೇಕರ ಸಂತಾಪ

|
Google Oneindia Kannada News

ಚಾಮರಾಜನಗರ, ಮೇ 3: ಗಡಿ ಜಿಲ್ಲೆ ಚಾಮರಾಜನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಆಮ್ಲಜನಕ ಸಿಲಿಂಡರ್ ಖಾಲಿಯಾಗಿ 22 ಜನ ಕೊರೊನಾ ರೋಗಿಗಳು ಮೃತಪಟ್ಟ ಘಟನೆ ವರದಿಯಾಗಿದೆ.

ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳು ಆಕ್ಸಿಜನ್‌ಗಾಗಿ ಮೈಸೂರನ್ನು ಅವಲಂಬಿಸಿದೆ. ಆದರೆ ಮೈಸೂರಿನಿಂದ ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಆಗದಿರುವುದರಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ರಾಹುಲ್ ಗಾಂಧಿ ಸಂತಾಪ

ರಾಹುಲ್ ಗಾಂಧಿ ಸಂತಾಪ

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮೃತರಾಗಿದ್ದಾರೆಯೇ ಅಥವಾ ಕೊಲ್ಲಲ್ಪಟ್ಟಿದ್ದಾರೆಯೇ? ಎಂದು ವ್ಯಂಗ್ಯವಾಗಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಚಾಮರಾಜನಗರ ದುರಂತಕ್ಕೆ ಕಾರಣರಾರು ಎಂಬುದನ್ನು ಹೇಳಿದ ಸಚಿವ ಸುರೇಶ್‌ ಕುಮಾರ್‌ಚಾಮರಾಜನಗರ ದುರಂತಕ್ಕೆ ಕಾರಣರಾರು ಎಂಬುದನ್ನು ಹೇಳಿದ ಸಚಿವ ಸುರೇಶ್‌ ಕುಮಾರ್‌

ಚಾಮರಾಜನಗರ ಆಮ್ಲಜನಕ ದುರಂತದಲ್ಲಿ ಮೃತರ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಂತಾಪಗಳು, ‘ವ್ಯವಸ್ಥೆ' ಎಚ್ಚೆತ್ತುಗೊಳ್ಳುವ ಮೊದಲು ಇನ್ನೂ ಅದೆಷ್ಟು ಸಂಕಟ ಅನುಭವಿಸಬೇಕಿದೆಯೋ? ಎಂದು ಟ್ವಿಟ್ಟರ್ ನಲ್ಲಿ ಸರ್ಕಾರಕ್ಕೆ ತರಾಟೆ ತೆಗೆದುಕಂಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

"ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು'' ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ ರಾಜ್ಯ

ಬಿಜೆಪಿ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿಎಂ, ಆರೋಗ್ಯ ಸಚಿವ ರಾಜೀನಾಮೆ ನೀಡಬೇಕು

ಸಿಎಂ, ಆರೋಗ್ಯ ಸಚಿವ ರಾಜೀನಾಮೆ ನೀಡಬೇಕು

ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಿಜೆಪಿಯವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದು ಕಿಡಿಕಾರಿದ್ದಾರೆ.

ಚಾಮರಾಜನಗರ ದುರಂತ: ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಸಿಎಂಚಾಮರಾಜನಗರ ದುರಂತ: ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಸಿಎಂ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಗಳನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Recommended Video

ಮಹಿಳೆಯರನ್ನ CM ಮನೆಯಿಂದ ಹೊರಹಾಕಿದ ಸಿಬ್ಬಂದಿ | Oneindia Kannada
ರಣದೀಪ್ ಸುರ್ಜೇವಾಲ ಸಂತಾಪ

ರಣದೀಪ್ ಸುರ್ಜೇವಾಲ ಸಂತಾಪ

ಇನ್ನು ಚಾಮರಾಜನಗರ ದುರಂತಕ್ಕೆ ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಕೂಡಾ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಯಡಿಯುರಪ್ಪ ಸರ್ಕಾರದ ನಿರ್ಲಕ್ಷ್ಯದಿಂದ ಈ ಕೊಲೆಯಾಗಿದೆ ಎಂದು ಆರೋಪಿಸಿದ್ದಾರೆ.

ಕೂಡಲೇ ಆರೋಗ್ಯ ಸಚಿವರು ರಾಜೀನಾಮೆ ನೀಡಬೇಕು, ಸಿಎಂ ಯಡಿಯೂರಪ್ಪ ಜೀ ಮೃತರ ಸಾವಿಗೆ ನೈತಿಕ ಹೊಣೆಗಾರಿಕೆ ಹೊರುತ್ತೀರಾ? ಎಂದು ರಣದೀಪ್ ಸುರ್ಜೇವಾಲ ಪ್ರಶ್ನಿಸಿದ್ದಾರೆ.

English summary
Congress Leader Rahul Gandhi, Former CM Siddaramaiah and many Political Leaders Offers Condolence to Victims of Chamarajanagar Oxygen Tragedy. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X