• search
 • Live TV
ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಾಮರಾಜನಗರ; ಮೊದಲ ಮಹಿಳಾ ಎಸ್ಪಿ ವರ್ಗಾವಣೆ

|
Google Oneindia Kannada News

ಚಾಮರಾಜನಗರ, ಜುಲೈ 15; ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ವರ್ಗಾವಣೆಗೊಂಡಿದ್ದಾರೆ. ಐಪಿಎಸ್ ಅಧಿಕಾರಿ ಜಿ. ಸಂಗೀತಾ ನೂತನ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.

ಕರ್ನಾಟಕ ಸರ್ಕಾರ ಬುಧವಾರ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ದಿವ್ಯಾ ಸಾರಾ ಥಾಮಸ್ ವರ್ಗಾವಣೆ ಮಾಡಿರುವ ಸರ್ಕಾರ ಅವರಿಗೆ ಹೊಸ ಹುದ್ದೆಯನ್ನು ನೀಡಿಲ್ಲ.

ಉತ್ತರ ಕನ್ನಡದ ಮೊದಲ ಮಹಿಳಾ ಎಸ್ಪಿಯಾಗಿ ವರ್ತಿಕಾ ಕಟಿಯಾರ್ ನೇಮಕ ಉತ್ತರ ಕನ್ನಡದ ಮೊದಲ ಮಹಿಳಾ ಎಸ್ಪಿಯಾಗಿ ವರ್ತಿಕಾ ಕಟಿಯಾರ್ ನೇಮಕ

ಚಾಮರಾಜನಗರ ಎಸ್ಪಿಯಾಗಿ 2011ನೇ ಬ್ಯಾಚ್ ಐಪಿಎಸ್ ಅಧಿಕಾರಿ ಜಿ. ಸಂಗೀತಾ ನೇಮಕಗೊಂಡಿದ್ದಾರೆ. ಸಂಗೀತಾ ನಾಗರಿಕ ಹಕ್ಕುಗಳ ನಿರ್ದೇಶನಾಲಯದ ಎಸ್ಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

ರವಿ ಡಿ. ಚನ್ನಣ್ಣನವರ್ ಸೇರಿ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆರವಿ ಡಿ. ಚನ್ನಣ್ಣನವರ್ ಸೇರಿ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ

 Chamarajanagar SP Divya Sara Thomas Transferred

ಮೊದಲ ಮಹಿಳಾ ಎಸ್ಪಿ; ಚಾಮರಾಜನಗರ ಜಿಲ್ಲೆಯ ಮೊದಲ ಮಹಿಳಾ ಎಸ್ಪಿ ಎಂಬ ಹೆಗ್ಗಳಿಕೆ ದಿವ್ಯಾ ಸಾರಾ ಥಾಮಸ್ ಅವರದ್ದಾಗಿದೆ. 2013ನೇ ಬ್ಯಾಚ್‌ನ ಕರ್ನಾಟಕ ಕೆಡರ್‌ನ ಐಪಿಎಸ್ ಅಧಿಕಾರಿಯಾದ ಅವರು 2020ರಲ್ಲಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ದಿವ್ಯಾ ಸಾರಾ ಥಾಮಸ್ ಚಾಮರಾಜನಗರ ಎಸ್ಪಿಯಾಗಿ ನೇಮಕಗೊಳ್ಳುವ ಮೊದಲು ಬೆಂಗಳೂರಿನಲ್ಲಿ ಸಿಎಆರ್‌ಎಫ್ ಡಿಸಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. 2016ರಲ್ಲಿ ನಂಜನಗೂಡಿನಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದರು.

ಉತ್ತರ ಕನ್ನಡಕ್ಕೆ ಮೊದಲ ಮಹಿಳಾ ಎಸ್ಪಿ; ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ಶಿವಪ್ರಕಾಶ್ ದೇವರಾಜು ವರ್ಗಾವಣೆಗೊಂಡಿದ್ದಾರೆ. ವರ್ತಿಕಾ ಕಟಿಯಾರ್ ನೂತನ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.

   ಮುಸ್ಲಿಂ ಬಾಂಧವರ ಜೊತೆ ಸಮಯ ಕಳೆದ ಡಿಕೆ ಶಿವಕುಮಾರ್ | Oneindia Kannada

   ವರ್ತಿಕಾ ಕಟಿಯಾರ್ ಜಿಲ್ಲೆಯ ಮೊದಲ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಉತ್ತರ ಪ್ರದೇಶದವರಾದ ವರ್ತಿಕಾ 2010ನೇ ಬ್ಯಾಚ್‌ ಐಪಿಎಸ್ ಅಧಿಕಾರಿ. ಈ ಹಿಂದೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಎಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದರು. ಕೊಡಗು ಹಾಗೂ ಧಾರವಾಡ ಎಸ್‌ಪಿಯಾಗಿಯೂ ಕೆಲಸ ನಿರ್ವಹಣೆ ಮಾಡಿದ್ದರು.

   English summary
   First women superintendent of police of Chamarajanagar Divya Sara Thomas transferred. G. Sangeetha appointed as new SP.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X