ಚಾಮರಾಜನಗರ: ಭೀಕರ ಅಪಘಾತದಲ್ಲಿ ಇಬ್ಬರು ಸಾವು

ಚಾಮರಾಜನಗರ, ಆಗಸ್ಟ್ 7: ಖಾಸಗಿ ಬಸ್‍ವೊಂದು ಬೈಕ್ ಗೆ ಡಿಕ್ಕಿಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರೂ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೈಲೂರು ಸಮೀಪದ ಕಾನ್‍ಮೊಳೆ ದೊಡ್ಡಿಯ ಬಳಿ ನಡೆದಿದೆ.

ತಮಿಳುನಾಡಿನ ಕೊಯಮತ್ತೂರಿನ ಸಂಜೀವ ಮತ್ತು ಗೋವರ್ಧನ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳು. ಆಗಸ್ಟ್ 6 ರಂದು ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಹನೂರಿನಿಂದ ಸತ್ತಿಮಂಗಲಕ್ಕೆ ತೆರಳುತ್ತಿದ್ದ ಎಸ್‍ಪಿಎಸ್ ಖಾಸಗಿ ಬಸ್ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಸವಾರ ಸಂಜೀವ ಸ್ಥಳದಲ್ಲೇ ಮೃತಪಟ್ಟರು. ಹಿಂಬದಿ ಸವಾರ ಗೋವರ್ಧನ ಗಂಭೀರ ಗಾಯಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲು ಕರೆದೊಯ್ಯುತ್ತಿದ್ದ ಮಾರ್ಗ ಮಧ್ಯೆಯಲ್ಲೇ ಅವರೂ ಅಸುನೀಗಿದರು.

Chamarajanagar: Tow men died in an accident

ಘಟನೆಗೆ ಸಂಬಂಧಿಸಿದಂತೆ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+