Get Updates
Get notified of breaking news, exclusive insights, and must-see stories!

Chamrajanagar Lok Sabha Constituency: ಮತದಾರರ ರಾಯಭಾರಿಗಳಾಗಿ ಬಿಗ್ ಬಾಸ್ ಸೀಸನ್‌ 10 ವಿನ್ನರ್ ಸೇರಿದಂತೆ ಮೂವರು ಆಯ್ಕೆ

ಚಾಮರಾಜನಗರ, ಮಾರ್ಚ್‌, 17: ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆ ಆಗಿದ್ದು, ದೇಶದೆಲ್ಲೆಡೆ ಪ್ರಚಾರ ಆರಂಭವಾಗಿದೆ. ಇನ್ನು "ದೇಶದ ಗರ್ವ" ಎಂಬ ವಿಶೇಷ ಧ್ಯೇಯವಾಕ್ಯದೊಂದಿಗೆ ಜಿಲ್ಲಾ ಸ್ವೀಪ್ ಸಮಿತಿಯನ್ನು ರಚಿಸಲಾಗಿದೆ. ಹಾಗಾದರೆ ಮತದಾನ ಜಾಗೃತಿ ಮೂಡಿಸಲು ರಾಯಭಾರಿಗಳಾಗಿ ಯಾರನ್ನೂ ನೇಮಿಸಲಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಮತದಾನದ ಜಾಗೃತಿ ಮೂಡಿಸಲು ಈ ಬಾರಿ ಮೂವರು ರಾಯಭಾರಿಗಳನ್ನು ನೇ‌ಮಕ ಮಾಡಲಾಗಿದ್ದು, ಯೂತ್ ಐಕಾನ್‌ಗಳಾಗಿ 10ನೇ ಸೀಸನ್‌ ಬಿಗ್‌ಬಾಸ್‌ ವಿನ್ನರ್‌, ಚಲನಚಿತ್ರ ನಟರಾದ ಕಾರ್ತಿಕ್ ಮಹೇಶ್ ಹಾಗೂ ಚಲನಚಿತ್ರ ನಟ, ನಿರ್ದೇಶಕರಾದ ನಾಗಭೂಷಣ್, ತೃತೀಯ ಲಿಂಗಿಗಳ ರಾಯಭಾರಿಯಾಗಿ ಸಮತಾ ಸೊಸೈಟಿಯ ಅಧ್ಯಕ್ಷರಾದ ದೀಪಾ ಬುದ್ದೆ ಅವರನ್ನು ಈ ಬಾರಿ ನೇಮಕ ಮಾಡಲಾಗಿದೆ.

Chamrajanagar Lok Sabha Constituency Bigg Boss season 10 winner as voter ambassador

ಏಪ್ರಿಲ್‌ 26ರಂದು ಚಾಮರಾಜನಗರ ಕ್ಷೇತ್ರಕ್ಕೆ ಚುನಾವಣೆ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಗೆ ವೇಳಾ ಪಟ್ಟಿ ಪ್ರಕಟಿಸಲಾಗಿದ್ದು, ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಚುನಾವಣಾ ಪ್ರಕ್ರಿಯೆಗೆ ಜಿಲ್ಲಾಡಳಿತದಿಂದ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.

ಚಾಮರಾಜ‌ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ ಲೋಕಸಭಾ ಚುನಾವಣೆ ಸಂಬಂಧ ಕೈಗೊಂಡಿರುವ ಸಿದ್ದತೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ವಿವರ ನೀಡಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಾರ್ಚ್ 28ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 4ರಂದು ಕೊನೆಯ ದಿನವಾಗಿದೆ.

ಇನ್ನು ಏಪ್ರಿಲ್ 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 8ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕಡೆಯ ದಿನವಾಗಿದೆ. ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣಾ ಪ್ರಕ್ರಿಯೆ ಜೂನ್ 6ರಂದು ಪೂರ್ಣಗೊಳ್ಳಲಿದೆ. ಚುನಾವಣೆ ನೀತಿ ಸಂಹಿತೆಯು ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಜೂನ್ 6ರ ಚುನಾವಣಾ ಪ್ರಕ್ರಿಯೆಯು ಮುಕ್ತಾಯಗೊಳ್ಳುವವರೆಗೂ ಜಾರಿಯಲ್ಲಿರುತ್ತದೆ ಎಂದರು.

ಚಾಮರಾಜನಗರ ಲೋಕಸಭಾ ಕ್ಷೇತ್ರ (ಪ.ಜಾ) ವ್ಯಾಪ್ತಿಗೆ ಹನೂರು, ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ, ಹೆಚ್.ಡಿ.ಕೋಟೆ, ನಂಜನಗೂಡು, ವರುಣ, ಟಿ.ನರಸೀಪುರ ವಿಧಾನಸಭಾ ಕ್ಷೇತ್ರಗಳು ಒಳಪಡಲಿವೆ. 22-01-2024ರಂದು ಹೊರಡಿಸಿರುವ ಅಂತಿಮ ಮತದಾರರ ಪಟ್ಟಿಯ ಪ್ರಕಾರ ಒಟ್ಟು 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 8,69,389 ಪುರುಷರು, 8,88,113 ಮಹಿಳೆಯರು, ಇತರೆ 114 ಮತದಾರರು ಸೇರಿದಂತೆ ಒಟ್ಟು 17,57,616 ಮತದಾರರು ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದ್ದಾರೆ‌ ಎಂದು ವಿವರಿಸಿದರು.

ಒಟ್ಟು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಉಪಯೋಗಿಸಲಾಗುತ್ತಿದ್ದು, 1,177 ಬ್ಯಾಲೆಟ್ ಯೂನಿಟ್, 1,177 ಕಂಟ್ರೋಲ್ ಯೂನಿಟ್ ಹಾಗೂ 1276 ವಿ.ವಿ. ಪ್ಯಾಟ್ಸ್‍ಗಳನ್ನು ಬಳಸಲಾಗುತ್ತಿದೆ.

ಜಿಲ್ಲಾ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆಗಾಗಿ ಫ್ಲೈಯಿಂಗ್ ಸ್ಕ್ವಾಡ್ (ಎಫ್.ಎಸ್.ಟಿ) 12 ತಂಡಗಳು ಮೂರು ಪಾಳಿಗಳಲ್ಲಿ, ಸ್ಟ್ಯಾಟಿಕ್ ಸರ್ವೈಲೆನ್ಸ್ (ಎಸ್.ಎಸ್.ಟಿ) 13 ತಂಡಗಳು ಮೂರು ಪಾಳಿಗಳಲ್ಲಿ, 97 ಸೆಕ್ಟರ್ ಅಧಿಕಾರಿಗಳು ನಿಯೋಜನೆಯಾಗಿದ್ದಾರೆ. ವೀಡಿಯೋ ಸರ್ವೈಲೆನ್ಸ್ 10 ತಂಡಗಳು, ವಿಡಿಯೋ ವೀವಿಂಗ್ 4 ತಂಡಗಳನ್ನು ಹಾಗೂ ಅಭ್ಯರ್ಥಿಗಳ ಚುನಾವಣಾ ವೆಚ್ಚ ಪರಿಶೀಲನೆಗಾಗಿ ಅಧಿಕಾರಿಗಳ ತಂಡ ನೇಮಕ ಮಾಡಲಾಗಿದೆ. 8 ಅಂತರರಾಜ್ಯ ಚೆಕ್‍ಪೋಸ್ಟ್ ಮತ್ತು 5 ಅಂತರ್ ಜಿಲ್ಲಾ ಚೆಕ್‍ಪೋಸ್ಟ್‌ಗಳನ್ನು ತೆರೆಯಲು ಕ್ರಮವಹಿಸಲಾಗಿದೆ.

ಮತದಾರರ ಪಟ್ಟಿಗೆ ಹಾಗೂ ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ತಿಳಿಸಲು ಜಿಲ್ಲಾಧಿಕಾರಿಗಳ ಕಚೇರಿಯ ಕೊಠಡಿ ಸಂಖ್ಯೆ 104/1ರಲ್ಲಿ ಮತದಾರರ ಸಹಾಯವಾಣಿ 1950 (ಟೋಲ್ ಫ್ರೀ) ಸ್ಥಾಪಿಸಲಾಗಿದೆ. ಈ ಸಹಾಯವಾಣಿಯು 24x7 ಅವಧಿಯಲ್ಲಿ ಕಾರ್ಯ ನಿರ್ವಹಿಸಲಿದ್ದು, ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ: 1950ಕ್ಕೆ ಕರೆ ಮಾಡಿ ಮತದಾರರ ಪಟ್ಟಿ, ಮತದಾನ ಮತ್ತು ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+