• search
 • Live TV
ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ವಿಪಕ್ಷ ನಾಯಕ, ಕೆಪಿಸಿಸಿ ಅಧ್ಯಕ್ಷ

By ಚಾಮರಾಜನಗರ ಪ್ರತಿನಿಧಿ
|

ಚಾಮರಾಜನಗರ, ಮೇ 4: ಸೋಮವಾರ ಬೆಳಗಿನ ಜಾವ 24 ಮಂದಿ ಕೋವಿಡ್ ಸೋಂಕಿತರ ಸಾವಿಗೆ ಕಾರಣವಾಗಿದ್ದ ಚಾಮರಾಜನಗರ ಆಕ್ಸಿಜನ್ ಕೊರತೆ ದುರಂತದ ಹಿನ್ನೆಲೆಯಲ್ಲಿ ಇಂದು ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹಾಗೂ ಇತರ ಸ್ಥಳೀಯ ಮುಖಂಡರ ಜೊತೆಗೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಅಲ್ಲದೆ ಅವರು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಆಕ್ಸಿಜನ್ ಕೊರತೆಯಿಂದ ಕೊರೊನಾ ಸೋಂಕಿತರು ಸಾವಿಗೀಡಾಗಿರುವ ದುರಂತದ ಬಗ್ಗೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಕುರಿತೂ ಮಾಹಿತಿ ಪಡೆದುಕೊಂಡರು.

ಈ ಭೇಟಿಯ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಆರ್ ರವಿ, ಎಸ್ಪಿ ದಿವ್ಯಾ ಸಾರಾ ಥಾಮಸ್ ಸೇರಿದಂತೆ ವೈದ್ಯಾಧಿಕಾರಿಗಳು ಹಾಜರಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಶಾಸಕರಾದ ಪುಟ್ಟರಂಗಶೆಟ್ಟಿ, ನರೇಂದ್ರ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಆಕ್ಸಿಜನ್ ಪೂರೈಕೆ ಮಾಡಬೇಕಾದ ಸರ್ಕಾರ, ತನ್ನ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲವಾಗಿದೆ. ಇದಕ್ಕೆ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರೇ ನೇರ ಹೊಣೆ ಎಂದು ಆರೋಪಿಸಿದರಲ್ಲದೆ, ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

   ಕೈಗಾರಿಕೆಗಳಿಂದ ಆಕ್ಸಿಜನ್‌ ಪೂರೈಕೆ ಕುರಿತು ಚರ್ಚೆ, ಸಚಿವ ಜಗದೀಶ್‌ ಶೆಟ್ಟರ್ ನೇತೃತ್ವದಲ್ಲಿ ಸಭೆ | Oneindia Kannada

   ಘಟನೆಯ ಹೊಣೆ ಹೊತ್ತು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ ಮಾಡಿದ್ದಾರೆ.

   English summary
   State opposition leader Siddaramaiah and KPCC president DK Sivakumar visited the Chamarajanagar district in the wake of the tragedy shortage of oxygen.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X