ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ಬದಲಾವಣೆಯ ಸುದ್ದಿಯ ನಡುವೆ ಮೌಢ್ಯ ಮೆಟ್ಟಿನಿಂತ ಸಿಎಂ ಯಡಿಯೂರಪ್ಪ

|
Google Oneindia Kannada News

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ, ಬುಧವಾರ (ನ 25) ಚಾಮರಾಜನಗರ ಜಿಲ್ಲೆಯ ಐತಿಹಾಸಿಕ ಮಲೆ ಮಹದೇಶ್ವರಸ್ವಾಮಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿದ್ದಾರೆ. ಇದರ ಜೊತೆಗೆ, ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಪ್ರಾಧಿಕಾರದ ಸಭೆಯಲ್ಲೂ ಬಿಎಸ್ವೈ ಭಾಗವಹಿಸಿದರು.

ಕಳೆದ ವರ್ಷವೇ ಯಡಿಯೂರಪ್ಪ ಜಿಲ್ಲೆಗೆ ಆಗಮಿಸಬೇಕಿತ್ತು. ಡಿಸೆಂಬರ್ ತಿಂಗಳಲ್ಲಿ ಸಿಎಂ ಚಾಮರಾಜನಗರ ಜಿಲ್ಲಾ ಪ್ರವಾಸ ನಿಗದಿಯಾಗಿತ್ತು. ಅವರನ್ನು ಜಿಲ್ಲೆಗೆ ಕರೆ ತರುವುದಾಗಿ ಕೂಡಾ ಉಸ್ತುವಾರಿ ಸುರೇಶ್ ಕುಮಾರ್ ಹೇಳಿದ್ದರು. ಆದರೆ, ಯಡಿಯೂರಪ್ಪನವರ ಪ್ರವಾಸ ರದ್ದಾಗಿತ್ತು.

ತನ್ನನ್ನು ಕಡೆಗಣಿಸುತ್ತಿರುವ ವರಿಷ್ಠರಿಗೆ ಭರ್ಜರಿ ಸಡ್ಡು ಹೊಡೆದ ಯಡಿಯೂರಪ್ಪ?ತನ್ನನ್ನು ಕಡೆಗಣಿಸುತ್ತಿರುವ ವರಿಷ್ಠರಿಗೆ ಭರ್ಜರಿ ಸಡ್ಡು ಹೊಡೆದ ಯಡಿಯೂರಪ್ಪ?

ಜಿಲ್ಲೆಗೆ ಬಂದರೆ ಮುಖ್ಯಮಂತ್ರಿ ಪದವಿ ಹೋಗುತ್ತದೆ ಎನ್ನುವ ಮೌಢ್ಯಕ್ಕೆ ದಶಕಗಳ ಇತಿಹಾಸವಿದೆ. ಇದರಿಂದಾಗಿ, 2008ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೂ ಒಮ್ಮೆಯೂ ಚಾಮರಾಜನಗರಕ್ಕೆ ಭೇಟಿ ಕೊಟ್ಟಿರಲಿಲ್ಲ. ಜಿಲ್ಲೆಯ ಪ್ರವಾಸ ಕೈಗೊಂಡಿಲ್ಲದಿದ್ದರೂ, ಬಿಎಸ್ವೈ ಅವರು ಸಿಎಂ ಹುದ್ದೆಯನ್ನು ಕಳೆದುಕೊಂಡಿದ್ದರು.

ಕೊನೆಗೂ ಸಂಸದ ಶ್ರೀನಿವಾಸ ಪ್ರಸಾದ್ ಸಮಾಧಾನ ಮಾಡಿದ ಯಡಿಯೂರಪ್ಪ!ಕೊನೆಗೂ ಸಂಸದ ಶ್ರೀನಿವಾಸ ಪ್ರಸಾದ್ ಸಮಾಧಾನ ಮಾಡಿದ ಯಡಿಯೂರಪ್ಪ!

ಚಾಮರಾಜನಗರ ಜಿಲ್ಲಾಡಳಿತ ಮತ್ತು ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಹನ್ನೊಂದನೇ ಸಭೆಯಲ್ಲಿ ಯಡಿಯೂರಪ್ಪ ಭಾಗವಹಿಸಿದರು. ಸಾಲೂರು ಮಠ ಮತ್ತು ಕ್ಷೇತ್ರದ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳ ಆಶೀರ್ವಾದವನ್ನು ಬಿಎಸ್ವೈ ಪಡೆದುಕೊಂಡರು. ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎನ್ನುವ ಸುದ್ದಿ ಹರಿದಾಡುತ್ತಿರುವ ಈ ಹೊತ್ತಿನಲ್ಲಿ ಬಿಎಸ್ವೈ, ಚಾಮರಾಜನಗರ ಭೇಟಿ ಆಶ್ಚರ್ಯವನ್ನು ಮೂಡಿಸಿದೆ.

ಯಡಿಯೂರಪ್ಪನವರ ಚಾಮರಾಜನಗರ ಜಿಲ್ಲೆಯ ಭೇಟಿ

ಯಡಿಯೂರಪ್ಪನವರ ಚಾಮರಾಜನಗರ ಜಿಲ್ಲೆಯ ಭೇಟಿ

ಮುಖ್ಯಮಂತ್ರಿ ಯಡಿಯೂರಪ್ಪನವರ ಚಾಮರಾಜನಗರ ಜಿಲ್ಲೆಯ ಭೇಟಿ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಲು ಕಾರಣವೇನಂದರೆ, ದೇವರು, ಪದ್ದತಿ, ಆಚಾರವಿಚಾರಗಳನ್ನು ತುಂಬಾ ಪಾಲಿಸಿಕೊಂಡು ಬರುತ್ತಿರುವ ಯಡಿಯೂರಪ್ಪನವರು, ಸದ್ಯದ ರಾಜಕೀಯ ಸನ್ನಿವೇಶದಲ್ಲಿ ಜಿಲ್ಲೆಗೆ ಭೇಟಿ ನೀಡಿರುವುದು. ಕಳೆದ ವರ್ಷವೂ ವಿವಿಧ ಕಾಮಗಾರಿಯನ್ನು ಯಡಿಯೂರಪ್ಪ ಇಲ್ಲಿಗೆ ಬಂದು ಉದ್ಘಾಟಿಸಬೇಕಿತ್ತು, ಆದರೆ ಹೋಗಿರಲಿಲ್ಲ. ಹಾಗಾಗಿ, ಸಿಎಂ ಯಡಿಯೂರಪ್ಪ ಮತ್ತದೇ ಮೂಢನಂಬಿಕೆಗೆ ಜೋತು ಬಿದ್ದರೆಂದು ವ್ಯಾಖ್ಯಾನಿಸಲಾಗಿತ್ತು.

ಮುಖ್ಯಮಂತ್ರಿ ಬದಲಾವಣೆಯ ಸುದ್ದಿ ಹರಿದಾಡುತ್ತಿರುವ ಈ ಹೊತ್ತು

ಮುಖ್ಯಮಂತ್ರಿ ಬದಲಾವಣೆಯ ಸುದ್ದಿ ಹರಿದಾಡುತ್ತಿರುವ ಈ ಹೊತ್ತು

ಹೈಕಮಾಂಡ್ ಸಹಕಾರ ಸಿಗದೇ ಇರುವುದು, ಕ್ಯಾಬಿನೆಟ್ ವಿಸ್ತರಣೆ ಗಣೇಶನ ಮದುವೆಯ ರೀತಿಯಲ್ಲಿ ಮುಂದಕ್ಕೆ ಹೋಗುತ್ತಿರುವುದು, ಮತ್ತು ಇದೆಲ್ಲಕ್ಕಿಂತ ಹೆಚ್ಚಾಗಿ ಮುಖ್ಯಮಂತ್ರಿ ಬದಲಾವಣೆಯ ಸುದ್ದಿ ಹರಿದಾಡುತ್ತಿರುವ ಈ ಹೊತ್ತಿನಲ್ಲಿ ಯಡಿಯೂರಪ್ಪ, ಮೌಢ್ಯಕ್ಕೆ ಸಡ್ಡು ಹೊಡೆದು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿರುವುದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಇದೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರದ ಅವಧಿಯಲ್ಲಿ ಏಳು ಬಾರಿ ಜಿಲ್ಲೆಗೆ ಭೇಟಿ ನೀಡಿ ದಾಖಲೆ ಬರೆದಿದ್ದರು. ಸಂಪೂರ್ಣವಾಗಿ ಐದು ವರ್ಷ ಅಧಿಕಾರವನ್ನು ಪೂರೈಸಿದ್ದರು. ಮೂಢನಂಬಿಕೆಯನ್ನು ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಲೇ ಬಂದಿರುವ ಸಿದ್ದರಾಮಯ್ಯ, "ಇಲ್ಲಿಗೆ ಬಂದರೆ, ಅಧಿಕಾರ ಹೋಗುತ್ತದೆ ಎನ್ನುವುದು ಸುಳ್ಳು ಎಂದು ಸಾಬೀತು ಮಾಡಲೆಂದೇ ಇಲ್ಲಿಗೆ ಬರುತ್ತೇನೆ" ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

Recommended Video

Diego Maradona ಅಗಲಿಕೆಗೆ ಫುಟ್ಬಾಲ್ ಜಗತ್ತು ಮರುಕ | Oneindia Kannada
ವೀರೇಂದ್ರ ಪಾಟೀಲ್ ಮುಖ್ಯಮಂತ್ರಿ ಆಗಿದ್ದ ವೇಳೆ

ವೀರೇಂದ್ರ ಪಾಟೀಲ್ ಮುಖ್ಯಮಂತ್ರಿ ಆಗಿದ್ದ ವೇಳೆ

ದೇವರಾಜ ಅರಸು, ಗುಂಡೂರಾವ್, ರಾಮಕೃಷ್ಣ ಹೆಗಡೆ, ಎಸ್.ಆರ್. ಬೊಮ್ಮಾಯಿ ಹಾಗೂ ವೀರೇಂದ್ರ ಪಾಟೀಲ್ ಮುಖ್ಯಮಂತ್ರಿ ಆಗಿದ್ದ ವೇಳೆ ಚಾಮರಾಜನಗರಕ್ಕೆ ಭೇಟಿ ನೀಡಿದ್ದರು. ಆದರೆ, ಇಲ್ಲಿಂದ ಹೋದ ಆರು ತಿಂಗಳೊಳಗೆ ಬೇರೆ ಬೇರೆ ಕಾರಣಗಳಿಂದ ಅಧಿಕಾರ ಕಳೆದುಕೊಂಡಿದ್ದರು. ಹಾಗಾಗಿ, ಇಲ್ಲಿಗೆ ಬಂದರೆ ಅಧಿಕಾರ ಹೋಗುತ್ತದೆ ಎನ್ನುವ ಮೌಢ್ಯ ಹಿಂದಿನಿಂದಲೂ ಇದೆ.

English summary
Chief Minister Yediyurappa Visited Chamarajanagar District First Time After Become CM.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X