'ಬಂಡೀಪುರ ಅರಣ್ಯದಲ್ಲಿ ಫ್ಲೈ ಓವರ್ ನಿರ್ಮಿಸಲ್ಲ, ರಾತ್ರಿ ಸಂಚಾರವೂ ಇಲ್ಲ'

ಬಂಡೀಪುರ, ಅಕ್ಟೋಬರ್ 29: ಬಂಡೀಪುರ ರಾಷ್ಟ್ರೀಯ ಅರಣ್ಯದಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಿಸುವ ಕುರಿತಂತೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬಂಡೀಪುರದಲ್ಲಿ ಮೇಲ್ಸೇತುವೆ ನಿರ್ಮಿಸುವ ಯಾವುದೇ ಪ್ರಸ್ತಾವಕ್ಕೆ ರಾಜ್ಯಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಶನಿವಾರ ಪರಿಸರವಾದಿಗಳು ಹಾಗೂ ನಾಗರಿಕರು ಮದ್ದೂರು ಗೇಟ್ ನಡೆಸಿದ ಬೃಹತ್ ಹೋರಾಟದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಕೇಂದ್ರ ಸರ್ಕಾರ ಉಲ್ಲೇಖಿಸಿರುವ ಬಂಡೀಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇಲು ಸೇತುವೆ ಯೋಜನೆಗೆ ರಾಜ್ಯ ಸರ್ಕಾರ ಇಲ್ಲಿಯವರೆಗೆ ಯಾವುದೇ ಅನುಮತಿ ನೀಡಿಲ್ಲ. ಈಗಾಗಲೇ ಇದಕ್ಕೆ ವಿರೋಧಿಸಿ ಕೇಂದ್ರಕ್ಕೆ ಅಭಿಪ್ರಾಯವನ್ನು ಸಲ್ಲಿಸಿದ್ದೇವೆ.

CM clarifies no elevated corridor in Bandipura forest

ರಾತ್ರಿ ವೇಳೆ ಬಂಡೀಪುರ ಅರಣ್ಯ ಗಳ ಮೂಲಕ ಕರ್ನಾಟಕ ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ನಾವು ಈಗಾಗಲೇ ತಡೆಯನ್ನೊಡ್ಡಿದ್ದು, ಈ ನಿರ್ಧಾರ ನಿರಂತರವಾಗಿ ಮುಂದುವರೆಯುತ್ತಿದೆ. ಈ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ಹೀಗಾಗಿ ನಾಗರಿಕರು, ಪರಿಸರವಾದಿಗಳು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+