ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಬಂಡೀಪುರ ಅರಣ್ಯದಲ್ಲಿ ಫ್ಲೈ ಓವರ್ ನಿರ್ಮಿಸಲ್ಲ, ರಾತ್ರಿ ಸಂಚಾರವೂ ಇಲ್ಲ'

|
Google Oneindia Kannada News

ಬಂಡೀಪುರ, ಅಕ್ಟೋಬರ್ 29: ಬಂಡೀಪುರ ರಾಷ್ಟ್ರೀಯ ಅರಣ್ಯದಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಿಸುವ ಕುರಿತಂತೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬಂಡೀಪುರದಲ್ಲಿ ಮೇಲ್ಸೇತುವೆ ನಿರ್ಮಿಸುವ ಯಾವುದೇ ಪ್ರಸ್ತಾವಕ್ಕೆ ರಾಜ್ಯಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಂಡೀಪುರ ಅರಣ್ಯದಲ್ಲಿ ಎಲಿವೇಟೆಡ್ ರಸ್ತೆ ವಿರೋಧಿಸಿ ಪರಿಸರವಾದಿಗಳ ಹೋರಾಟ ಬಂಡೀಪುರ ಅರಣ್ಯದಲ್ಲಿ ಎಲಿವೇಟೆಡ್ ರಸ್ತೆ ವಿರೋಧಿಸಿ ಪರಿಸರವಾದಿಗಳ ಹೋರಾಟ

ಈ ಕುರಿತು ಶನಿವಾರ ಪರಿಸರವಾದಿಗಳು ಹಾಗೂ ನಾಗರಿಕರು ಮದ್ದೂರು ಗೇಟ್ ನಡೆಸಿದ ಬೃಹತ್ ಹೋರಾಟದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಕೇಂದ್ರ ಸರ್ಕಾರ ಉಲ್ಲೇಖಿಸಿರುವ ಬಂಡೀಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇಲು ಸೇತುವೆ ಯೋಜನೆಗೆ ರಾಜ್ಯ ಸರ್ಕಾರ ಇಲ್ಲಿಯವರೆಗೆ ಯಾವುದೇ ಅನುಮತಿ ನೀಡಿಲ್ಲ. ಈಗಾಗಲೇ ಇದಕ್ಕೆ ವಿರೋಧಿಸಿ ಕೇಂದ್ರಕ್ಕೆ ಅಭಿಪ್ರಾಯವನ್ನು ಸಲ್ಲಿಸಿದ್ದೇವೆ.

ಬಂಡೀಪುರ: ಮನುಷ್ಯರ ತೆವಲಿಗೆ ವನ್ಯಪ್ರಾಣಿಗಳು ಬಲಿಯಾಗಬೇಕೇ? ಬಂಡೀಪುರ: ಮನುಷ್ಯರ ತೆವಲಿಗೆ ವನ್ಯಪ್ರಾಣಿಗಳು ಬಲಿಯಾಗಬೇಕೇ?

CM clarifies no elevated corridor in Bandipura forest

 ಬಂಡೀಪುರ ಕಾಡಂಚಿನ ರೈತರಿಗೆ ನೆಮ್ಮದಿಯ ಬದುಕೇ ಇಲ್ಲ! ಬಂಡೀಪುರ ಕಾಡಂಚಿನ ರೈತರಿಗೆ ನೆಮ್ಮದಿಯ ಬದುಕೇ ಇಲ್ಲ!

ರಾತ್ರಿ ವೇಳೆ ಬಂಡೀಪುರ ಅರಣ್ಯ ಗಳ ಮೂಲಕ ಕರ್ನಾಟಕ ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ನಾವು ಈಗಾಗಲೇ ತಡೆಯನ್ನೊಡ್ಡಿದ್ದು, ಈ ನಿರ್ಧಾರ ನಿರಂತರವಾಗಿ ಮುಂದುವರೆಯುತ್ತಿದೆ. ಈ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ಹೀಗಾಗಿ ನಾಗರಿಕರು, ಪರಿಸರವಾದಿಗಳು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.

English summary
H.D.Kumaraswamy has clarified that the state government will protect Bandipura forest and never allow for proposed fly over in the forest by the central government and there will be no compromise in banning night traffic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X