ಬಿ.ರಾಚಯ್ಯ ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಶಿಲಾನ್ಯಾಸ
ಚಾಮರಾಜನಗರ, ಆಗಸ್ಟ್ 10: ಮುಖ್ಯಮಂತ್ರಿಯಾಗಿ ದಾಖಲೆಯ 12ನೇ ಬಾರಿಗೆ ಮತ್ತೆ ಚಾಮರಾಜನಗರಕ್ಕೆ ಇಂದು ಭೇಟಿ ನೀಡಿದ ಸಿದ್ದರಾಮಯ್ಯ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಿಲನ್ಯಾಸ ನೆರವೇರಿಸಿದರು.
ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಮಾಜಿ ರಾಜ್ಯಪಾಲರಾದ ದಿವಂಗತ ಬಿ.ರಾಚಯ್ಯ ಅವರ ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಶಿಲಾನ್ಯಾಸ ನೆರವೇರಿಸಿದರು.

ಇದೇ ವೇಳೆ ಚಾಮರಾಜನಗರ ಪಟ್ಟಣದಲ್ಲಿ ಬಿ.ರಾಚಯ್ಯ ಜೋಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. 35 ಕೋಟಿ ರೂಪಾಯಿ ವೆಚ್ಚದಲ್ಲಿ ಈ ರಸ್ತೆ ಮೇಲ್ದರ್ಜೆ ಕೆಲಸ ನಡೆಯಲಿದೆ. ನಂತರ ಸಾರ್ವಜನಿಕ ಸಮಾರಂಭದಲ್ಲಿ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭ ಲೋಕೋಪಯೋಗಿ ಸಚಿವ ಎಚ್.ಸಿ ಮಹದೇವಪ್ಪ, ಗುಂಡ್ಲುಪೇಟೆ ಶಾಸಕಿ ಗೀತಾ ಮಹದೇವ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications