ಚಾಮರಾಜನಗರ ಜಿಲ್ಲೆಗೆ ಸಿದ್ದರಾಮಯ್ಯ ಸರ್ಕಾರ ಕೊಟ್ಟಿರುವುದೇನು?

Posted By:
Subscribe to Oneindia Kannada

ಚಾಮರಾಜನಗರ, ಜನವರಿ 10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನವ ಕರ್ನಾಟಕ ನಿರ್ಮಾಣ ಯಾತ್ರೆ ಇಂದು ಚಾಮರಾಜನಗರ ಜಿಲ್ಲೆ ತಲುಪಿದೆ. ಜಿಲ್ಲೆಯಲ್ಲಿ ಮೂರು ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.

ಜಿಲ್ಲೆಯ ಪ್ರಮುಖ ರಾಜಕೀಯ ಕ್ಷೇತ್ರಳಾದ ಚಾಮರಾಜನಗರ, ಕೊಳ್ಳೆಗಾಲ, ಹನೂರು ಪಟ್ಟಣಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಶಿವಮೊಗ್ಗ ಜಿಲ್ಲೆ ಅಭಿವೃದ್ಧಿಗೆ ಸಿದ್ದರಾಮಯ್ಯ ಸರ್ಕಾರದ ಕೊಡುಗೆಗಳು

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರ ಜೊತೆಗೆ ಸ್ಥಳೀಯ ಶಾಸಕರು, ಪ್ರಮುಖ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವು ಫಲಾನುಭವಿಗಳಿಗೆ ಯೋಜನೆಗಳನ್ನು ವಿತರಿಸಲಿದ್ದಾರೆ.

ಸಂಕ್ರಾಂತಿ ವಿಶೇಷ ಪುಟ

ತಮ್ಮ ಭಾಷಣದಲ್ಲಿ ಚಾಮರಾಜನಗರ ಜಿಲ್ಲೆಗೆ ಸರ್ಕಾರ ನೀಡಿರುವ ಕೊಡುಗೆಗಳ ಪ್ರಸ್ತಾಪ ಮಾಡಲಿರುವ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ ಎಂದು ಊಹಿಸಲಾಗಿದೆ.

ಚಾಮರಾಜನಗರ ಜಿಲ್ಲೆಗೆ ಸರ್ಕಾರ ನೀಡಿರುವ ಕೊಡುಗೆಗಳ ಪಟ್ಟಿ ಇಲ್ಲಿದೆ...

6651 ಹೆಕ್ಟೇರ್‌ಗೆ ಹನಿ ನೀರಾವರಿ

6651 ಹೆಕ್ಟೇರ್‌ಗೆ ಹನಿ ನೀರಾವರಿ

ಕೃಷಿ ಚಟುವಟಿಕೆಗಳನ್ನು ಉತ್ತೇಜಿಸಿ ರೈತರಿಗೆ ಜೀವ ತುಂಬಲು 4,795 ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲಾಗಿದ್ದು 6,651 ಹೆಕ್ಟೇರ್ ಪ್ರದೇಶಕ್ಕೆ ಹನಿ ನೀರಾವರಿ ಸೌಲಭ್ಯ ಒದಗಿಸಲಾಗಿದೆ. 4 ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದ್ದು ಇದರಿಂದ 15,125 ರೈತರಿಗೆ ಪ್ರಯೋಜನವಾಗಿದೆ.

ಪಡಿತರ ಚೀಟಿಗೆ 190.04 ಕೋಟಿ ಖರ್ಚು

ಪಡಿತರ ಚೀಟಿಗೆ 190.04 ಕೋಟಿ ಖರ್ಚು

ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿದ್ದ ರೈತರಿಗೆ ಬಲ ತುಂಬುವ ದೃಷ್ಟಿಯಿಂದ ಒಟ್ಟು 74.60 ಕೋಟಿ ರೂಪಾಯಿಗಳ ಕೃಷಿ ಸಾಲವನ್ನು ಮನ್ನಾ ಮಾಡಲಾಗಿದ್ದು ಇದರಿಂದ 19,294 ರೈತರಿಗೆ ಅನುಕೂಲವಾಗಿದೆ. ರಾಜ್ಯದ ಬಡಜನರು ಹಸಿವಿನಿಂದ ಮಲಗಬಾರದು ಎಂಬ ಕಾರಣಕ್ಕಾಗಿ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಈವರೆಗೂ 7,05,578 ಜನರು ಇದರ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದು 2,58,753 ಪಡಿತರ ಚೀಟಿಗಳನ್ನು ವಿತರಿಸಲಾಗಿದ್ದು ಇದಕ್ಕಾಗಿ 190.04 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗಿದೆ.

ಹಾಸನ ಜಿಲ್ಲೆಗೆ ಸಿದ್ದರಾಮಯ್ಯ ಸರ್ಕಾರದ ಕೊಡುಗೆ

48,852 ವಿದ್ಯಾರ್ಥಿಗಳಿಗೆ ಉಚಿತ ಸೈಕಲ್

48,852 ವಿದ್ಯಾರ್ಥಿಗಳಿಗೆ ಉಚಿತ ಸೈಕಲ್

ಕ್ಷೀರ ಭಾಗ್ಯ ಯೋಜನೆಯಡಿ 4,81,673 ಮಕ್ಕಳಿಗೆ ಕೆನೆಭರಿತ ಬಿಸಿ ಹಾಲು ನೀಡಲಾಗುತ್ತಿದ್ದು ಇದಕ್ಕಾಗಿ 23.33 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗಿದ್ದು ಮಾತೃಪೂರ್ಣ ಯೋಜನೆಯಡಿಯಲ್ಲಿ 16,784 ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರವನ್ನು ನೀಡಲಾಗುತ್ತಿದೆ. ಮಕ್ಕಳ ಶಿಕ್ಷಣವನ್ನು ಉತ್ತೇಜಿಸಲಿಕ್ಕಾಗಿ 48,852 ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್‍ನ್ನು ವಿತರಣೆ ಮಾಡಲಾಗಿದ್ದು 7 ಹೊಸ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆರಂಭಿಸಲಾಗಿದೆ. ಅಷ್ಟೇ ಅಲ್ಲದೇ 3,42,318 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಲಾಗಿದೆ.

1,006 ಕೊಳವೆ ಬಾವಿ ನಿರ್ಮಾಣ

1,006 ಕೊಳವೆ ಬಾವಿ ನಿರ್ಮಾಣ

ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗಾಗಿ 5 ಹೊಸ ಹಾಸ್ಟೆಲ್ ಮತ್ತು 9 ವಸತಿ ಶಾಲೆಗಳನ್ನು ಆರಂಭಿಸಲಾಗಿದ್ದು ಈ ಸಮುದಾಯದ 1,72,460 ವಿದ್ಯಾರ್ಥಿಗಳಿಗೆ ರೂ.46.35 ಕೋಟಿ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗಾಗಿ ಗಂಗಾ ಕಲ್ಯಾಣ ಯೋಜನೆಯಡಿ 1,006 ಕೊಳವೆ ಬಾವಿ ನಿರ್ಮಾಣ, 483ಕ್ಕೆ ವಿದ್ಯುತ್ ಸಂಪರ್ಕ ಮತ್ತು 836 ಪಂಪ್‍ಸೆಟ್‍ಗಳ ವಿತರಣೆಯನ್ನು ಮಾಡಲಾಗಿದೆ.

ದಾವಣಗೆರೆ ಜಿಲ್ಲೆ ಅಭಿವೃದ್ಧಿಗೆ ಸರ್ಕಾರದ ಕೊಡುಗೆಗಳು

ಬಡವರಿಗೆ 65095 ಮನೆ ಮಂಜೂರು

ಬಡವರಿಗೆ 65095 ಮನೆ ಮಂಜೂರು

ಶುದ್ಧ ಕುಡಿಯುವ ನೀರಿನ ಪೂರೈಕೆ ದೃಷ್ಟಿಯಿಂದ 11447 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದು 2 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ವಸತಿ ರಹಿತ ಬಡ ಸಮುದಾಯಗಳಿಗೆ ವಿವಿಧ ಯೋಜನೆಗಳ ಅಡಿಯಲ್ಲಿ 65,095 ಮನೆಗಳನ್ನು ಮಂಜೂರು ಮಾಡಲಾಗಿದೆ.

511 ಗ್ರಾಮಗಳಿಗೆ ನಿರಂತರ ವಿದ್ಯುತ್

511 ಗ್ರಾಮಗಳಿಗೆ ನಿರಂತರ ವಿದ್ಯುತ್

ನರೇಗಾ ಯೋಜನೆಯಡಿಯಲ್ಲಿ 73.87 ಲಕ್ಷ ದಿನಗಳ ಉದ್ಯೋಗ ಸೃಷ್ಟಿಸಲಾಗಿದ್ದು ಇದರಿಂದ 1.25 ಲಕ್ಷ ಕುಟುಂಬಗಳಿಗೆ ಸಹಾಯವಾಗಿದೆ. ನಿರಂತರ ಜ್ಯೋತಿ ಯೋಜನೆಯಡಿಯಲ್ಲಿ 511 ಗ್ರಾಮಗಳಿಗೆ ವಿದ್ಯುತ್ ಪೂರೈಸಲಾಗುತ್ತಿದ್ದು ಇದಕ್ಕಾಗಿ 5083.96 ಲಕ್ಷ ರೂಗಳನ್ನು ವಿನಿಯೋಗಿಸಲಾಗಿದ್ದು ಭಾಗ್ಯಜ್ಯೋತಿ ಯೋಜನೆಯಡಿಯಲ್ಲಿ 1,56,192 ಜನರಿಗೆ 1829.87 ಲಕ್ಷ ರೂಪಾಯಿಗಳ ರಿಯಾಯ್ತಿಯನ್ನು ನೀಡಲಾಗಿದೆ.

ಜಿಲ್ಲಾ ವೈದ್ಯಕೀಯ ಕಾಲೇಜು ಮಂಜೂರು

ಜಿಲ್ಲಾ ವೈದ್ಯಕೀಯ ಕಾಲೇಜು ಮಂಜೂರು

ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಘಟಕ ಹಾಗೂ ಸಿಟಿ ಸ್ಕ್ಯಾನಿಂಗ್ ಸೌಲಭ್ಯ ಅಳವಡಿಕೆ ಮಾಡಲಾಗಿದ್ದು ಜಿಲ್ಲೆಯ 2 ತಾಲ್ಲೂಕುಗಳಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ 20 ಕೋಟಿ ವೆಚ್ಚದಲ್ಲಿ 2 ಆಸ್ಪತ್ರೆಗಳನ್ನು ನಿರ್ಮಿಸಲಾಗಿದೆ. ಜಿಲ್ಲೆಗೆ ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಲಾಗಿದ್ದು ಪ್ರತಿ ವರ್ಷವೂ 150 ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ.

20 ಕೆರೆಗಳಿಗೆ ನೀರು

20 ಕೆರೆಗಳಿಗೆ ನೀರು

ಒಟ್ಟು 22 ಕಂದಾಯ ಗ್ರಾಮಗಳನ್ನು ಘೋಷಿಸಲಾಗಿದ್ದು 481 ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ವಿತರಿಸಲಾಗಿದ್ದು ಬಗರ್ ಹುಕುಂ ಯೋಜನೆಯಡಿಯಲ್ಲಿ 130.30 ಹೆಕ್ಟೇರ್ ಪ್ರದೇಶವನ್ನು ಮಂಜೂರು ಮಾಡಲಾಗಿದೆ. ಅಲಂಬೂರು ಕೆರೆ ಯೋಜನೆಯಡಿಯಲ್ಲಿ ಕಬಿನಿಯಿಂದ ನೀರೆತ್ತಿ ಒಟ್ಟು 20 ಕೆರೆಗೆಳಿಗೆ ನೀರು ತುಂಬಿಸಲಾಗಿದ್ದು ಇದಕ್ಕಾಗಿ 244 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗಿದೆ.

ಮೂಲಸೌಕರ್ಯ ಅಭಿವೃದ್ಧಿಗೆ 50 ಕೋಟಿ

ಮೂಲಸೌಕರ್ಯ ಅಭಿವೃದ್ಧಿಗೆ 50 ಕೋಟಿ

ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿಗಾಗಿ 37.30 ಕೋಟಿ ರೂಗಳನ ಪ್ಯಾಕೇಜ್ ಅನ್ನು ಘೋಷಿಸಿದ್ದು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಚಾಮರಾಜ ನಗರ ಜಿಲ್ಲೆಯ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿಗಳನ್ನು ಘೋಷಿಸಲಾಗಿದ್ದು, ಈ ಅನುದಾನದಲ್ಲಿ ಅಂಬೇಡ್ಕರ್ ಕ್ರೀಡಾಂಗಣ, ಮಾರುಕಟ್ಟೆ, ಒಳಚರಂಡಿ ಹಾಗೂ ರಸ್ತೆಗಳ ನಿರ್ಮಾಣದಂತಹ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
CM Siddaramaiah is in chamarajanagar district today. He is inaugurating crores worth many development programs in the city. He is Visiting Kollegala and Hanooru.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ