20 ನಿಮಿಷ ಜಪ ಮಾಡಿದ ಸಿದ್ದರಾಮಯ್ಯ, ಏನಿದರ ಹಿಂದಿನ ರಹಸ್ಯ?

Posted By:
Subscribe to Oneindia Kannada
   ಸಿದ್ದರಾಮಯ್ಯನವರ ದೇವಸ್ಥಾನಗಳ ಭೇಟಿ ಹಿಂದಿನ ರಹಸ್ಯ ಏನು | Oneindia Kannada

   ಚಾಮರಾಜನಗರ, ಜನವರಿ 11: ಅದ್ಯಾಕೋ ಗೊತ್ತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇತ್ತೀಚೆಗೆ ಇದ್ದಕ್ಕಿದ್ದಂತಯೇ ದೇವರ ಮೇಲೆ ಪ್ರೀತಿ ಹೆಚ್ಚಾಗಿದೆ.

   ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ ನವಕರ್ನಾಟಕ ನಿರ್ಮಾಣ ಯಾತ್ರೆ ಸಂದರ್ಭದಲ್ಲಿ ಉಡುಪಿಯ ಕಟಪಾಡಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು, ಇದೀಗ ಇಂದು (ಜನವರಿ 11) ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇವಾಲಯಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮತ್ತೊಂದೆಡೆ ಅಸ್ತಿಕರಂತೆ ದೇಗುಲದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

   ಅರಮನೆ ನಗರಿಗೆ ಸಿದ್ದರಾಮಯ್ಯ ಸರ್ಕಾರದ ಕೊಡುಗೆಗಳು

   ವಿಶೇಷ ಅಂದ್ರೆ ಸಿದ್ದರಾಮಯ್ಯ ಅವರು ಇಂದು ಪೂಜೆ ಸಂದರ್ಭದಲ್ಲಿ ಮಲೆ ಮಹದೇಶ್ವರನ ಮುಂದೆ ಸುಮಾರು ಇಪ್ಪತ್ತು ನಿಮಿಷಗಳ ಕಾಲ ಪ್ರಾರ್ಥನೆ ಸಲ್ಲಿಸಿ ಅಚ್ಚರಿ ಮೂಡಿಸಿದರು.

   ಸಮಾಜವಾದದ ಹಿನ್ನಲೆಯಿಂದ ಬಂದಿರುವ ಸಿದ್ದರಾಮಯ್ಯ ಅವರು ಪದೇ-ಪದೇ ಚಾಮರಾಜನಗರಕ್ಕೆ ಭೇಟಿ ನೀಡುವ ಮೂಲಕ ಮೂಢನಂಬಿಕೆಯನ್ನು ಅಳಿಸಿ ಹಾಕಿದರೆ.

   ಚಾಮರಾಜಪೇಟೆಯಲ್ಲಿರುವ ಶ್ರೀ ಮಲೆ ಮಹದೇಶ್ವರ

   ಚಾಮರಾಜಪೇಟೆಯಲ್ಲಿರುವ ಶ್ರೀ ಮಲೆ ಮಹದೇಶ್ವರ

   ಕೇವಲ ಚಾಮರಾಜನಗರದ ಮಲೆ ಮಹದೇಶ್ವರನಿಗೆ ಮಾತ್ರವಲ್ಲದೆ ಹಾಗಾಗ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾ ಬಂದಿದ್ದಾರೆ.

   ಉಡುಪಿಯ ಕಟಪಾಡಿ ವಿಶ್ವನಾಥ ದೇವಾಲಯಕ್ಕೆ ಭೇಟಿ

   ಉಡುಪಿಯ ಕಟಪಾಡಿ ವಿಶ್ವನಾಥ ದೇವಾಲಯಕ್ಕೆ ಭೇಟಿ

   ಮುಖ್ಯಮಂತ್ರಿಯಾದ ಬಳಿಕ ಅದೇಷ್ಟೋ ಬಾರಿ ಉಡುಪಿ ಜಿಲ್ಲೆಗೆ ಹೋಗಿದ್ದರು. ಒಂದು ಬಾರಿಯಾದರೂ ಇದುವರೆಗೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿಲ್ಲ. ಆದರೆ, ಇತ್ತೀಚೆಗೆ ನವಕರ್ನಾಟಕ ನಿರ್ಮಾಣ ಯಾತ್ರೆ ಸಂದರ್ಭದಲ್ಲಿ ಉಡುಪಿಯ ಕಟಪಾಡಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು,

    ಮಲೆ ಮಹದೇಶ್ವರನ ಸನ್ನಿಧಿಯಲ್ಲಿ 20 ನಿಮಿಷ ಜಪ

   ಮಲೆ ಮಹದೇಶ್ವರನ ಸನ್ನಿಧಿಯಲ್ಲಿ 20 ನಿಮಿಷ ಜಪ

   ಸಿಎಂ ಸಿದ್ದರಾಮಯ್ಯ ಅವರು ದೇವಲಾಯಗಳಿಗೆ ಭೇಟಿ ನೀಡಿದ ವೇಳೆ ಹೆಚ್ಚಾಗಿ ಪ್ರಾರ್ಥನೆ ಸಲ್ಲಿಸಿರುವುದು ಈವರೆಗೆ ವರದಿಯಾಗಿಲ್ಲ. ಆದರೆ, ಗುರುವಾರ ಚಾಮರಾಜನಗರದ ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ಸುಮಾರು ಇಪ್ಪತ್ತು ನಿಮಿಷಗಳ ಕಾಲ ಪಾರ್ಥನೆ ಮಾಡಿ ಗಮನಸೆಳೆದರು.

   ಚುನಾವಣೆ ಗೆಲುವಿಗಾಗಿ ದೇವರ ಮೊರೆ ಹೋದ್ರಾ?

   ಚುನಾವಣೆ ಗೆಲುವಿಗಾಗಿ ದೇವರ ಮೊರೆ ಹೋದ್ರಾ?

   ಇತ್ತೀಚೆಗೆ ಸಿದ್ದರಾಮಯ್ಯ ಅವರು ಹೆಚ್ಚಾಗಿ ದೇವರ ಮೊರೆ ಹೋಗುತ್ತಿರುವುದನ್ನು ಗಮನಿಸಿದರೆ ಚುನಾವಣೆ ಗೆಲುವಿಗಾಗಿ ಅವರು ದೇವರಿಗೆ ವಿಶೇಷ ಪೂಜೆ-ಪುನಸ್ಕಾರಗಳನ್ನು ಸಲ್ಲಿಸುತ್ತಿದ್ದಾರೆಯೇ? ಎಂಬ ಪ್ರಶ್ನೆ ಉದ್ಭವಿಸಿದೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Karnataka chief minister Siddaramaiah today visited Male Mahadeshwara Temple in Kollegal, Chamarajanagar and offered special prayers in the temple

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ