ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಲೆ ಮಹದೇಶ್ವರನ ದರ್ಶನ ಪಡೆಯಲಿರುವ ಸಿಎಂ ಬಸವರಾಜ ಬೊಮ್ಮಾಯಿ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಡಿ. 03: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 12 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಯಿಂದ ಜಿಲ್ಲಾಧಿಕಾರಿಗೆ ಪತ್ರ ಬಂದಿದೆ.

ಡಿಸೆಂಬರ್ 12 ರಂದು ಬೆಳಗ್ಗೆ 10.30 ಕ್ಕೆ ಬಸವರಾಜ ಬೊಮ್ಮಾಯಿ ಚಾಮರಾಜನಗರಕ್ಕೆ ಬರಲಿದ್ದು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮಾಡಲಿದ್ದಾರೆ.

ಬ್ರಾಹ್ಮಣರ ಮೀಸಲಾತಿಯಿಂದ ಹಿಂದುಳಿದ ವರ್ಗಗಳಿಗೆ ಅನ್ಯಾಯ-ಯತೀಂದ್ರ ಸಿದ್ದರಾಮಯ್ಯಬ್ರಾಹ್ಮಣರ ಮೀಸಲಾತಿಯಿಂದ ಹಿಂದುಳಿದ ವರ್ಗಗಳಿಗೆ ಅನ್ಯಾಯ-ಯತೀಂದ್ರ ಸಿದ್ದರಾಮಯ್ಯ

ಬಳಿಕ ಮಧ್ಯಾಹ್ನ 1 ಗಂಟೆಗೆಕ್ಕೆ ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಲಿದ್ದಾರೆ.

CM will visits Chamarajanagar on december 12

ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆಯಲಿದ್ದಾರೆ.

ಚಾಮರಾಜನಗರಕ್ಕೆ ಬಂದರೆ ಸಿಎಂ ಪಟ್ಟ ಹೋಗಲಿದೆ ಎಂಬ ಮೂಢನಂಬಿಕೆ ಬದಿಗೊತ್ತಿ ನಗರದ ಸಿಮ್ಸ್ ಕಾಲೇಜು ಉದ್ಘಾಟನೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದರು. ಈಗ ಮತ್ತೊಮ್ಮೆ ಚಾಮರಾಜನಗರಕ್ಕೆ ಬರಲಿದ್ದಾರೆ.

ಜಿಲ್ಲೆಯಲ್ಲಿ ಕೆರೆ ತುಂಬುವ ಯೋಜನೆ ಸೇರಿದಂತೆ ಹಲವನ್ನು ಘೋಷಣೆ ಮಾಡಲಾಗುವುದು ಎಂದು ಹೇಳಲಾಗಿದೆ. ಹನೂರು ಕ್ಷೇತ್ರ ಕಾಂಗ್ರೆಸ್‌ನ‌ ಭದ್ರಕೋಟೆಯಾಗಿದ್ದು ಬೊಮ್ಮಾಯಿ ಭೇಟಿಯಲ್ಲಿ ರಾಜಕೀಯ ಲೆಕ್ಕಾಚಾರವೂ ಅಡಗಿದೆ ಎಂದು ರಾಜಕೀಯ ತಜ್ಞರು ಹೇಳುತ್ತಾರೆ.

English summary
Chief Minister Basavaraja Bommai will visits Chamarajanagar on december 12, he will also visit Congress constituencies hanuru. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X