ಚಾಮರಾಜನಗರ; ವಾರದಲ್ಲಿ 4 ದಿನ ಸಂಪೂರ್ಣ ಲಾಕ್‌ಡೌನ್

ಚಾಮರಾಜನಗರ, ಜೂನ್ 13; ಸೋಮವಾರದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲಾಕ್‌ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದೆ. ಆದರೆ 11 ಜಿಲ್ಲೆಗಳಲ್ಲಿ ಜೂನ್ 21ರ ತನಕ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಅಧಿಕಾರ ನೀಡಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಜೂನ್ 21ರ ತನಕ ಲಾಕ್‌ಡೌನ್ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಆದೇಶ ಹೊರಡಿಸಿದ್ದಾರೆ. ಲಾಕ್‌ಡೌನ್ ವಿಸ್ತರಣೆ ಜೊತೆಗೆ ವಾರದಲ್ಲಿ 4 ದಿನ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುತ್ತದೆ.

ಜೂನ್ 17ರ ಗುರುವಾರದಿಂದ ಜೂನ್ 20ರ ಭಾನುವಾರದ ತನಕ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಜನರ ಸಂಚಾರವನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದರೆ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತದೆ.

Complete Lockdown In Chamarajanagar Weekly Four Days

ಜೂನ್ 14ರ ಸೋಮವಾರದಿಂದ 16ರ ಬುಧವಾರದ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಬೆಳಗ್ಗೆ 6 ರಿಂದ 10 ಗಂಟೆಯ ತನಕ ಜನರು ಅಗತ್ಯ ವಸ್ತುಗಳನ್ನು ಖರೀದಿ ಮಾಡಬಹುದಾಗಿದೆ. ಉಳಿದ ನಾಲ್ಕು ದಿನ ಅಗತ್ಯ ವಸ್ತು ಖರೀದಿಗೂ ಅವಕಾಶವಿಲ್ಲ.

ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿರುವ ಕಾರಣ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ಕಠಿಣ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವಕಾಶ ನೀಡಿದ್ದಾರೆ.

ನಾಲ್ಕು ದಿನದ ಸಂಪೂರ್ಣ ಲಾಕ್‌ಡೌನ್ ಅವಧಿಯಲ್ಲಿ ಆಸ್ಪತ್ರೆ, ಔಷಧಿ ಅಂಗಡಿ, ಕೃಷಿ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ನಿಯಮ ಉಲ್ಲಂಘನೆ ಮಾಡಿ ಅನಗತ್ಯವಾಗಿ ತಿರುಗಾಡಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಶನಿವಾರದ ವರದಿಯಂತೆ 176 ಹೊಸ ಕೋವಿಡ್ ಪ್ರಕರಣ ಚಾಮರಾಜನಗರದಲ್ಲಿ ದಾಖಲಾಗಿದೆ. 1463 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. 433 ಜನರು ಇದುವರೆಗೂ ಮೃತಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+