ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಗೆ ಕಂಪ್ಯೂಟರ್ ಶಿಕ್ಷಣ- ಈ ವಿಶೇಷ ಯೋಜನೆ ಹಿಂದಿದೆ ಮಹತ್ವದ ಉದ್ದೇಶ
ಚಾಮರಾಜನಗರ, ನವೆಂಬರ್, 16: ಕೈದಿಗಳಿಗೂ ಕಾಲ ಬದಲಾದಂತೆ ತಾವು ಕೂಡ ಕೆಟ್ಟ ದಾರಿಯನ್ನು ಮರೆತು ಜೀವನದಲ್ಲಿ ಮತ್ತೆ ಏನಾದರೂ ಸಾಧನೆ ಮಾಡಬೇಕೆಂಬ ಆಸೆಯಿರುತ್ತದೆ. ಅದರಂತೆಯೇ ಇದೀಗ ಕಂಪ್ಯೂಟರ್ ಕಲಿಕೆ ಮೂಲಕ ವಿಚಾರಣಾ ಕೈದಿಗಳು, ಕಾರಗೃಹ ಬಂಧಿಗಳು ಭವಿಷ್ಯದಲ್ಲಿ ಬದುಕು ಬದಲಿಸಿಕೊಳ್ಳಬೇಕು ಎಂದು ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಕಂಪ್ಯೂಟರ್ ಶಿಕ್ಷಣ ಆರಂಭ ಮಾಡಲಾಗಿದೆ.
ರಾಜ್ಯದಲ್ಲೇ ಮೊದಲು ಎನ್ನಬಹುದಾದ ಕಾರಾಗೃಹ ಬಂಧಿಗಳಿಗೆ ಕಂಪ್ಯೂಟರ್ ಶಿಕ್ಷಣ ತರಬೇತಿಯನ್ನು ನೀಡುವ ವಿನೂತನ ಕಾರ್ಯಕ್ರಮ ಚಾಮರಾಜನಗರ ಕಾರಾಗೃಹದಲ್ಲಿ ಆರಂಭಗೊಂಡಿದೆ. ಈ ವಿಶೇಷ ಯೋಜನೆ ಇನ್‍ಫೋಸಿಸ್ ರೋಟರಿ ಪಂಚಶೀಲ ಸಹಯೋಗದಿಂದ ಆರಂಭಗೊಂಡಿದೆ. ಕಾರಾಗೃಹ ಬಂಧಿಗಳು ಕಾರಾಗೃಹದಲ್ಲೇ ಕಂಪ್ಯೂಟರ್ ತರಬೇತಿ ಪಡೆಯಲು ಸುಸಜ್ಜಿತ ಕೊಠಡಿಯಲ್ಲಿ 10 ಕಂಪ್ಯೂಟರ್ ಮತ್ತು ಪ್ರಿಂಟರ್‌ಗಳನ್ನು ಇನ್ಫೋಸಿಸ್ ನೀಡಿದೆ. ಜೊತೆಗೆ ತರಬೇತಿದಾರರನ್ನು ನಿಯೋಜಿಸಲಾಗಿದೆ.

ಕಂಪ್ಯೂಟರ್ ಶಿಕ್ಷಣದ ಜೊತೆಗೆ ಕಲಿಕಾರ್ಥಿಗಳಿಗೆ ಸುಲಭವಾಗಿ ಕಂಪ್ಯೂಟರ್ ಅರ್ಥೈಸುವ ಕನ್ನಡ ಕಿರುಪುಸ್ತಕಗಳನ್ನು ಇಡಲಾಗಿದೆ. ಕಂಪ್ಯೂಟರ್ ಕಲಿತ ಬಳಿಕ ಉದ್ಯೋಗ ಪಡೆದು ಬದುಕು ಬದಲಿಸಿಕೊಳ್ಳಲಿ ಎಂಬ ಮಾದರಿ ಉದ್ದೇಶ ಈ ಯೋಜನೆ ಹಿಂದಿದ್ದು, ಬುಧವಾರ ಸಂಜೆ ಈ ಕಲಿಕೆ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗಿದೆ.
ಸ್ವಂತ ಶಕ್ತಿ ಮೇಲೆ ಜೀವನ ರೂಪಿಸಿಕೊಳ್ಳಿ
ಜಿಲ್ಲಾಧಿಕಾರಿ ಶಿಲ್ಪಾನಾಗ್ ಈ ಸಂಬಂಧ ಮಾತನಾಡಿ, ಕೆಲವು ದಿನಗಳ ಹಿಂದೆ ಸಾಕ್ಷರತಾ ಕಾರ್ಯಕ್ರಮಕ್ಕಾಗಿ ಕಾರಾಗೃಹಕ್ಕೆ ಬಂದ ವೇಳೆ ಕಾರಾಗೃಹ ಬಂಧಿಗಳಿಗೂ ಕಂಪ್ಯೂಟರ್ ಶಿಕ್ಷಣ ನೀಡಬೇಕೆಂಬ ಆಲೋಚನೆ ಬಂತು. ಅಂದೇ ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಶಿಕ್ಷಣ ತರಬೇತಿಗೆ ಕ್ರಮವಹಿಸುವುದಾಗಿ ಭರವಸೆ ನೀಡಿದ್ದೆ. ಇನ್‍ಫೋಸಿಸ್ ಸೇರಿದಂತೆ ಇತರೆ ಸಂಸ್ಥೆಗಳು ನಮ್ಮ ಮನವಿಗೆ ಸ್ಪಂಧಿಸಿ ಇಲ್ಲಿನ ಬಂಧಿಗಳಿಗೆ ಅತ್ಯಾಧುನಿಕ 10 ಕಂಪ್ಯೂಟರ್, ಪ್ರಿಂಟರ್‌ಗಳನ್ನು ನೀಡಿ ತರಬೇತಿಗೆ ಅಗತ್ಯ ಸಿಬ್ಬಂದಿ ನಿಯೋಜಿಸಿದೆ.
ಕಾರಾಗೃಹದಲ್ಲಿರುವ ಸಮಯ ಸದುಪಯೋಗವಾಗಲಿ. ಇಲ್ಲಿಂದ ಹೊರಹೋದ ಮೇಲೆ ಸ್ವಂತ ಶಕ್ತಿಯ ಮೇಲೆ ಜೀವನ ರೂಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಕಂಪ್ಯೂಟರ್ ತರಬೇತಿಗೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚು ಓದಿಲ್ಲದೆ ಇರುವವರಿಗೂ ಸಹ ಕಂಪ್ಯೂಟರ್ ಕಲಿಯಲು ಅವಕಾಶವಿದೆ. ಇಲ್ಲಿ ಅನೇಕ ಬಗೆಯ ಕಂಪ್ಯೂಟರ್ ತರಬೇತಿ ನೀಡಲಾಗುತ್ತದೆ. ಈಗಿರುವ ಗ್ರಂಥಾಲಯದ ಜೊತೆ ಇ ಲೈಬ್ರರಿ ಸಹ ಆರಂಭಿಸಿದರೆ ಬಂಧಿಗಳಿಗೆ ಅವರವರ ಭಾಷೆಯಲ್ಲಿಯೇ ಓದಲು ಅನುಕೂಲ ಮಾಡಿಕೊಡಬಹುದು ಎಂದು ತಿಳಿಸಿದರು.
-
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ












Click it and Unblock the Notifications