ರಾಹುಲ್‌ ಗಾಂಧಿ ಸಂಸತ್‌ ಸ್ಥಾನ ಅನರ್ಹತೆ ಖಂಡಿಸಿ ಚಾಮರಾಜನಗರದಲ್ಲಿ ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ

ಚಾಮರಾಜನಗರ, ಜುಲೈ, 12: ರಾಹುಲ್‌ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿವತಿಯವರು ಬಾಯಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನಾನಿರತರು ಬಾಯಿಗೆ ಕಪ್ಪುಪಟ್ಟಿ ಮೌನಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಶಾಸಕ ಆರ್.ನರೇಂದ್ರ ಮಾತನಾಡಿ, ಎಐಸಿಸಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ 2 ವರ್ಷ ಶಿಕ್ಷೆಯಾಗುವ ರೀತಿ ಮಾಡಿರುವುದು ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Congress silent protest condemning rahul gandhis Parliament seat disqualification in chamarajanagar

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಬಂದ ಮೇಲೆ ವಿರೋಧ ಪಕ್ಷಗಳನ್ನು ಕಡೆಗಣಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ವಿರೋಧ ಪಕ್ಷದ ಮುಖಂಡರಿಗೆ ತೊಂದರೆ ಕೊಡುವುದು ಕೂಡ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಹಾಗೆಯೇ ರಾಹುಲ್‌ ಗಾಂಧಿ ಅವರನ್ನು ಅನರ್ಹಗೊಳಿಸಿರುವ ವಿರುದ್ದ ಮೌನಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಇನ್ನೂ ಎರಡು ತಿಂಗಳು ಆಗಿಲ್ಲ. ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ಅಭಿವೃದ್ದಿ ಬಗ್ಗೆ ಮಾತಾಡಿಲ್ಲ. ಇಲ್ಲದಿರುವ ಕಾರಣ ಹುಡುಕಿ ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸ ಸಂಗತಿಯಾಗಿದೆ. ಬಿಜೆಪಿಯವರು ಸಾವಿನ ರಾಜಕೀಯವನ್ನು ಬಿಡಬೇಕು ಎಂದರು. ಇನ್ನು ಪ್ರತಿಭಟನೆ ನೇತೃತ್ವವನ್ನು ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಸರಿಯಲ್ಲ. ಬಿಜೆಪಿಯವರು ದ್ವೇಷ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ, ಮಾಜಿ ಶಾಸಕ ಎಸ್. ಜಯಣ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವು, ಆರ್.ಮಹದೇವು, ಜಿಲ್ಲಾ ಮಹಿಳಾ ಅಧ್ಯಕ್ಷೆ ಲತಾರಾಜ ಶೇಖರಜತ್ತಿ, ಬ್ಲಾಕ್ ಅಧ್ಯಕ್ಷ ಮಹಮ್ಮದ್ ಅಸ್ಗರ್, ಅರಕಲವಾಡಿ ಗುರುಸ್ವಾಮಿ, ತೋಟೇಶ್, ಜಿ.ಪಂ.ಮಾಜಿ ಸದಸ್ಯ ಯೋಗೇಶ್, ಸದಾಶಿವಮೂರ್ತಿ, ನಗರಸಭಾ ಸದಸ್ಯರಾದ ಚಿನ್ನಮ್ಮ, ಕಲಾವತಿ, ಲೀಲಮ್ಮ, ಮಹಿಳಾ ಕಾಂಗ್ರೆಸ್‌ನ ಶಕುಂತಲಾ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಮೌನ ಹೋರಾಟದ ಮೂಲಕ ಎಚ್ಚರಿಕೆ

ಹಾಗೆಯೇ ರಾಹುಲ್ ಗಾಂಧಿ ವಿಚಾರದಲ್ಲಿ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ‌ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಹುಬ್ಬಳ್ಳಿಯ ಕಿಮ್ಸ್ ಎದುರಿನ ಗಾಂಧಿ ಪ್ರತಿಮೆ ಬಳಿ ಮೌನ ಪ್ರತಿಭಟನೆ ನಡೆಸಲಾಯಿತು. ನಗರ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ ಹಾಗೂ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು.

ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ರಾಹುಲ್ ಗಾಂಧಿಯವರನ್ನು ದೋಷಿ ಎಂದು ಸಾಬೀತುಪಡಿಸಲು ಯತ್ನಿಸುತ್ತಿದೆ. ರಾಹುಲ್ ಗಾಂಧಿಯನ್ನು ಲೋಕಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಕೇಂದ್ರದ ಬಿಜೆಪಿ ಸರ್ಕಾರ ಪಿತೂರಿ ಮಾಡಿದೆ. ಕೂಡಲೇ ಷಡ್ಯಂತ್ರ ಕೈಬಿಡಬೇಕು. ಇಲ್ಲದಿದ್ದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+