ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಲರ್ಟ್ ಆದ ಗಡಿ ಜಿಲ್ಲೆ ಚಾಮರಾಜನಗರ; ಕೊರೊನಾ ಬಗ್ಗೆ ನಿಗಾ

|
Google Oneindia Kannada News

ಚಾಮರಾಜನಗರ, ಮಾರ್ಚ್ 13: ಕೇರಳ ಮತ್ತು ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಂತಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಗಡಿ ಭಾಗದ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣಾ ಕೇಂದ್ರಗಳು ಸೇರಿದಂತೆ ಚಿಕಿತ್ಸೆಗಾಗಿ ಪ್ರತ್ಯೇಕ ವಾರ್ಡ್ ಗಳನ್ನು ತೆರೆಯಲಾಗಿದೆ.

ಜಿಲ್ಲೆಯಲ್ಲಿ ಕೊರೊನಾ ಕುರಿತಂತೆ ಯಾವುದೇ ವರದಿ ಬಂದಿಲ್ಲ. ಅಲ್ಲದೆ ಈ ಸಂಬಂಧ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಜಿಲ್ಲೆಯ ಜನತೆ ಯಾವುದೇ ಅತಂಕ ಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಜನತೆಗೆ ಧೈರ್ಯ ತುಂಬಿದ್ದಾರೆ.

 ಅಂತರರಾಜ್ಯ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ

ಅಂತರರಾಜ್ಯ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ

ಅಂತರರಾಜ್ಯ ಚೆಕ್ ಪೋಸ್ಟ್‌ಗಳಲ್ಲಿ ವಿಶೇಷ ಗಮನ ಹರಿಸಲಾಗಿದೆ. ತೀವ್ರ ಜ್ವರ, ಕೆಮ್ಮು, ಶೀತದಿಂದ ಬಳಲುತ್ತಿರುವ ಲಕ್ಷಣವಿದ್ದಲ್ಲಿ ತಪಾಸಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಸೋಂಕು ಹರಡದಂತೆ ತಡೆಯಲು ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಕೊರೊನಾ ಶಂಕೆ ಇದ್ದವರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವಾರ್ಡ್ ‌ಗಳನ್ನು ತೆರೆಯಲಾಗಿದೆ. ನಗರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ 10 ಹಾಸಿಗೆಯ, ಗುಂಡ್ಲುಪೇಟೆ, ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಗಳಲ್ಲಿ ತಲಾ ಐದು ಹಾಸಿಗೆಗಳ, ಯಳಂದೂರು, ಹನೂರುಗಳಲ್ಲಿ ತಲಾ ಎರಡು ಹಾಸಿಗೆಗಳ ವಾರ್ಡ್ ‌ಗಳನ್ನು ತೆರೆಯಲಾಗಿದೆ. ಅಲ್ಲದೆ, ನಗರದ ಜೆ.ಎಎಸ್.ಎಸ್ ಮತ್ತು ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯಲ್ಲಿಯೂ ಚಿಕಿತ್ಸೆಗೆ ವ್ಯವಸ್ಥೆ ಮಾಡಿರುವ ಬಗ್ಗೆ ಅವರು ವಿವರಿಸಿದ್ದಾರೆ.

ಕೊರೊನಾ; ಕರ್ನಾಟಕ ಬಂದ್; ಏನಿರುತ್ತೆ, ಏನಿರಲ್ಲ?ಕೊರೊನಾ; ಕರ್ನಾಟಕ ಬಂದ್; ಏನಿರುತ್ತೆ, ಏನಿರಲ್ಲ?

 ಸಭೆ, ಕಾರ್ಯಕ್ರಮ ಮುಂದಕ್ಕೆ

ಸಭೆ, ಕಾರ್ಯಕ್ರಮ ಮುಂದಕ್ಕೆ

ಗಡಿಭಾಗದಲ್ಲಿರುವ ಮೂಲೆಹೊಳೆ, ಪುಣಜನೂರು, ಮಹದೇಶ್ವರಬೆಟ್ಟ ಸೇರಿದಂತೆ ಇತರೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಹೆಚ್ಚು ಜನರು ಸೇರುವ ಸಭೆ, ಸಮ್ಮೇಳನ ಕಾರ್ಯಕ್ರಮ ಮುಂದಕ್ಕೆ ಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಜನರ ಆರೋಗ್ಯದ ಕಾಳಜಿಯಿಂದ ಈ ಚಿಂತನೆ ನಡೆದಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

 ಯುಗಾದಿ ಜಾತ್ರಾಮಹೋತ್ಸವಕ್ಕೆ ಅಗತ್ಯ ಕ್ರಮ

ಯುಗಾದಿ ಜಾತ್ರಾಮಹೋತ್ಸವಕ್ಕೆ ಅಗತ್ಯ ಕ್ರಮ

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಯುಗಾದಿ ಜಾತ್ರಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಗತ್ಯ ವೈದ್ಯಕೀಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲಿಗೆ ಬರುವ ಭಕ್ತಾಧಿಗಳ ತಪಾಸಣೆಗಾಗಿ ಕೌದಹಳ್ಳಿ, ಪಾಲಾರ ಬಳಿ ಶಿಬಿರ ತೆರೆಯಲಾಗುವುದು. ವಿಶೇಷವಾಗಿ ತಮಿಳುನಾಡಿನಿಂದಲೂ ಹೆಚ್ಚು ಸಂಖ್ಯೆಯಲ್ಲಿ ಭಕ್ತಾಧಿಗಳು ಬರುವುದರಿಂದ ಅಲ್ಲಿಯೇ ತಪಾಸಣೆ ನಡೆಸಲು ಕೋರಲಾಗುವುದು.

ಕೊರೊನಾ ಎದುರಿಸಲು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಸನ್ನದ್ಧ: ಸಿಇಒಕೊರೊನಾ ಎದುರಿಸಲು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಸನ್ನದ್ಧ: ಸಿಇಒ

 ಮಾಸ್ಕ್ ಗೆ ಕೊರತೆಯಿಲ್ಲ

ಮಾಸ್ಕ್ ಗೆ ಕೊರತೆಯಿಲ್ಲ

ಮಾಸ್ಕ್ ದಾಸ್ತಾನು ಪ್ರಮಾಣದಲ್ಲಿ ಯಾವುದೇ ಗೊಂದಲ, ಕೊರತೆಯಿಲ್ಲ. ಮಾಸ್ಕ್ ಸಾಕಷ್ಟಿದೆ. ಅಗತ್ಯವಿದ್ದಲ್ಲಿ ಆರೋಗ್ಯ ಇಲಾಖೆಯಿಂದ ತರಿಸಿಕೊಳ್ಳಲಾಗುವುದು. ಸಾರ್ವಜನಿಕರು ಅವಶ್ಯವಿದ್ದಲ್ಲಿ ಮಾಸ್ಕ್ ಬಳಸಬಹುದು. ಈ ವಿಷಯದಲ್ಲಿ ಯಾವುದೇ ಅನಗತ್ಯ ಆತಂಕ ಬೇಡ ಎಂದಿದ್ದಾರೆ ಜಿಲ್ಲಾಧಿಕಾರಿ. ಕೇರಳದಲ್ಲಿ ಕಾಣಿಸಿರುವ ಹಕ್ಕಿಜ್ವರ ಪ್ರಕರಣ ಹಿನ್ನೆಲೆಯಲ್ಲಿ ಗಡಿ ಭಾಗದ ಚೆಕ್‌ಪೋಸ್ಟ್‌ಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ಕೊರೊನಾ ಆತಂಕ ಇರುವುದರಿಂದ ಜಿಲ್ಲೆಯ ಜನರು ವಿದೇಶಕ್ಕೆ ಹೋಗುವುದನ್ನು ಮುಂದೂಡಬೇಕು. ವಿದೇಶದಿಂದ ಬರುವವರನ್ನು ಸದ್ಯಕ್ಕೆ ಅಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು. ಅಕಸ್ಮಾತ್ ವಿದೇಶಗಳಿಂದ ಜಿಲ್ಲೆಗೆ ಆಗಮಿಸಿದ್ದಲ್ಲಿ ಅವರ ವಿವರವನ್ನು ಆರೋಗ್ಯ ಇಲಾಖೆಗೆ ತಿಳಿಸಬೇಕು ಎಂದು ಮನವಿ ಮಾಡಿದ್ದಾರೆ.

English summary
High alert in border of Chamarajanagar district which adjoining the states of Kerala and Tamil Nadu due to coronavirus
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X