• search
 • Live TV
ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇರಳ, ತಮಿಳುನಾಡಲ್ಲಿ ಕೊರೊನಾ ಸೋಂಕು ಹೆಚ್ಚಳ: ಚಾಮರಾಜನಗರದಲ್ಲಿ ಕಟ್ಟುನಿಟ್ಟಿನ ತಪಾಸಣೆ

|
Google Oneindia Kannada News

ಚಾಮರಾಜನಗರ, ಜುಲೈ 31: ಕೇರಳ ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದು ಕರ್ನಾಟಕದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಭೀತಿಯನ್ನುಂಟು ಮಾಡಿದ್ದು, ಈಗಾಗಲೇ ಕೊರೊನಾ ಸಂಕಷ್ಟದಿಂದ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದವರನ್ನು ಮತ್ತೆ ಆತಂಕಕ್ಕೆ ತಳ್ಳಿದೆ. ಹೀಗಾಗಿ ಚಾಮರಾಜನಗರ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಲು ತಯಾರಿ ನಡೆಸಿದೆ.

ಕೊರೊನಾ ಒಂದು ಮತ್ತು ಎರಡನೇ ಅಲೆಯಿಂದ ಚಾಮರಾಜನಗರ ಜಿಲ್ಲೆಯ ಜನ ಸಾಕಷ್ಟು ಸಾವು, ನೋವು ಹಾಗೂ ಸಂಕಷ್ಟಗಳನ್ನು ಅನುಭವಿಸಿರುವುದು ಕಣ್ಮುಂದೆಯೇ ಇದೆ. ಹೀಗಿರುವಾಗ ಮೂರನೇ ಅಲೆ ಬರುವ ಎಲ್ಲ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಹೊರರಾಜ್ಯಗಳಿಂದ ಚಾಮರಾಜನಗರ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಸ್ಥಳಗಳನ್ನು ಗುರುತಿಸಿ ಆರು ಚೆಕ್‌ಪೋಸ್ಟ್‌ಗಳನ್ನು ಮತ್ತೆ ಆರಂಭಿಸಿ ಅಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಕ್ರಮ ಕೈಗೊಳ್ಳಲಾಗಿದೆ.

ಕೇರಳದಲ್ಲಿ ಕೊರೊನಾ ಸ್ಫೋಟ; ದಕ್ಷಿಣ ಕನ್ನಡ ಗಡಿಭಾಗದಲ್ಲಿ ಹೈಅಲರ್ಟ್ ಕೇರಳದಲ್ಲಿ ಕೊರೊನಾ ಸ್ಫೋಟ; ದಕ್ಷಿಣ ಕನ್ನಡ ಗಡಿಭಾಗದಲ್ಲಿ ಹೈಅಲರ್ಟ್

ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾ ತಡೆಗಟ್ಟುವ ಸಲುವಾಗಿ ತೆಗೆದುಕೊಳ್ಳಬೇಕಾದ ಕಟ್ಟು ನಿಟ್ಟಿನ ಕ್ರಮಗಳ ಕುರಿತಂತೆ ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಮತ್ತು ಪೊಲೀಸ್ ಇತರೆ ಇಲಾಖೆಗಳ ಅಧಿಕಾರಿಗಳ ಜತೆ ಸಭೆ ನಡೆಸಿರುವ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಒಂದಷ್ಟು ಸೂಚನೆಗಳನ್ನು ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಂತಿರುವ ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದೆ.

ಕೊರೊನಾದಿಂದ ಸಂಕಷ್ಟಕ್ಕೀಡಾದ ಜನ

ಕೊರೊನಾದಿಂದ ಸಂಕಷ್ಟಕ್ಕೀಡಾದ ಜನ

ತಮಿಳುನಾಡು ರಾಜ್ಯದಲ್ಲಿಯೂ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ಕಂಡು ಬರುತ್ತಿದೆ. ಹೀಗಾಗಿ ಎರಡೂ ರಾಜ್ಯಗಳ ಗಡಿಗೆ ಹೊಂದಿಕೊಂಡಂತೆ ಜಿಲ್ಲೆ ಇರುವುದರಿಂದ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗ್ರತೆ ವಹಿಸುವುದು ಅಗತ್ಯವಿದ್ದು, ಎಲ್ಲ ಆರು ಅಂತರರಾಜ್ಯ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ಕಠಿಣ ತಪಾಸಣೆ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗಡಿಗಳಲ್ಲಿ ಕಂದಾಯ, ಪೊಲೀಸ್, ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಸದಾ ನಿಗಾವಹಿಸಿರಬೇಕು. ಚೆಕ್‌ಪೋಸ್ಟ್ ಹಾಗೂ ಗಡಿ ಭಾಗಗಳಲ್ಲಿ ತಪಾಸಣಾ ಕಾರ್ಯವನ್ನು ತೀವ್ರಗೊಳಿಸಬೇಕು ಕೇರಳ ಹಾಗೂ ತಮಿಳುನಾಡು ರಾಜ್ಯದಿಂದ ಜಿಲ್ಲೆಗೆ ಆಗಮಿಸುವವರನ್ನು ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡಬೇಕು.

ಅಧಿಕಾರಿಗಳು ಗಡಿಗಳತ್ತ ನಿಗಾವಹಿಸಿ!

ಅಧಿಕಾರಿಗಳು ಗಡಿಗಳತ್ತ ನಿಗಾವಹಿಸಿ!

ಸದ್ಯ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಇರುವವರನ್ನು ಮಾತ್ರ ಚಾಮರಾಜನಗರ ಜಿಲ್ಲೆಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ. ಜತೆಗೆ ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿರುವವರಿಗೆ ಮಾತ್ರ ಜಿಲ್ಲೆಗೆ ಬರಲು ಅನುಮತಿ ನೀಡಲಾಗುತ್ತಿದೆ. ಅದನ್ನು ಕಟ್ಟುನಿಟ್ಟಾಗಿ ಮುಂದುವರೆಯಬೇಕು.

ಕೇರಳ ರಾಜ್ಯಕ್ಕೆ ಹೋಗಿ ಬರುತ್ತಿರುವ ಚಾಮರಾಜನಗರ ಜಿಲ್ಲೆಯ ಸರಕು ಸಾಗಣೆ ವಾಹನ ಚಾಲಕರು ಸಹ ಹದಿನೈದು ದಿನಗಳಿಗೊಮ್ಮೆ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು. ತಮಿಳುನಾಡು ಗಡಿ ಭಾಗದ ಜಿಲ್ಲೆಯ ಚೆಕ್‌ಪೋಸ್ಟ್‌ಗಳಲ್ಲೂ ಕೂಡಲೇ ತಪಾಸಣೆ ಕಾರ್ಯ ಚುರುಕುಗೊಳಿಸಬೇಕು. ತಾಪಮಾನ ಸೇರಿದಂತೆ ಇನ್ನಿತರ ತಪಾಸಣೆ ಮಾಡಬೇಕು. ಕೋವಿಡ್ ರೋಗ ಲಕ್ಷಣಗಳು ಇರುವವರು ಕಂಡುಬಂದಲ್ಲಿ ವಾಪಸ್ ಕಳುಹಿಸಲು ಸೂಚನೆ ನೀಡಲಾಯಿತು.

ಕೋವಿಡ್ ನಿಯಮ ಕಡ್ಡಾಯ ಪಾಲನೆ

ಕೋವಿಡ್ ನಿಯಮ ಕಡ್ಡಾಯ ಪಾಲನೆ

ಇನ್ನು ನೆರೆಯ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ಆಂದೋಲನ ಮಾದರಿಯಲ್ಲಿ ಕೈಗೊಂಡು, ಅರ್ಹರೆಲ್ಲರೂ ಕೋವಿಡ್ ಲಸಿಕೆ ಪಡೆಯಲು ತಕ್ಷಣವೇ ಕ್ರಮವಹಿಸಲು ಮತ್ತು ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳು, ಪ್ರವಾಸಿ ತಾಣಗಳು, ಯಾತ್ರಾ ಕ್ಷೇತ್ರಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ನಿಯಮ ಉಲ್ಲಂಘಿಸಿ ಹೆಚ್ಚು ಜನಸಂದಣಿಯಾದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅನುಸಾರ ಕ್ರಮ ಜರುಗಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳು

ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳು

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜು, ಆರ್.ಸಿ.ಹೆಚ್ ಅಧಿಕಾರಿ ಡಾ. ವಿಶ್ವೇಶ್ವರಯ್ಯ, ಜಿಲ್ಲಾಸ್ಪತ್ರೆಯ ನೋಡಲ್ ಅಧಿಕಾರಿ ಡಾ. ಮಹೇಶ್, ಜಿಲ್ಲಾ ಸರ್ಜನ್ ಡಾ. ಶ್ರೀನಿವಾಸ್, ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ. ಸುಗುಣ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದು ಹಲವು ರೀತಿಯ ಸಲಹೆ ಸೂಚನೆಗಳನ್ನು ನೀಡಿದರು.

   ಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಶುರುವಾಯ್ತು ಢವಢವ | Oneindia Kannada

   English summary
   Strict Inspection taken In Chamarajanagar ditsrict due to coronavirus cases rised in Kerala and Tamil Nadu.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X