ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂತರ್ ಜಿಲ್ಲಾ ಚೆಕ್ ಪೋಸ್ಟ್ ತೆರೆದ ಚಾಮರಾಜನಗರ!

|
Google Oneindia Kannada News

ಚಾಮರಾಜನಗರ, ಆಗಸ್ಟ್ 15; ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಕೇರಳ, ಮಹಾರಾಷ್ಟ್ರ ಗಡಿಯಲ್ಲಿ ಅಂತರ ರಾಜ್ಯ ಚೆಕ್‌ಪೋಸ್ಟ್ ತೆರೆಯಲಾಗಿದೆ. ಚಾಮರಾಜನಗರ ಜಿಲ್ಲಾಡಳಿತ ಅಂತರ ಜಿಲ್ಲಾ ಚೆಕ್‌ಪೋಸ್ಟ್ ತೆರೆದಿದ್ದು, ಜಿಲ್ಲೆಗೆ ಬರುವವರನ್ನು ಪರೀಕ್ಷೆಗೆ ಒಳಪಡಿಸುತ್ತಿದೆ.

ಚಾಮರಾಜನಗರ ಜಿಲ್ಲಾಧಿಕಾರಿ ಎಂ. ಆರ್. ರವಿ ಈ ಕುರಿತು ಮಾಹಿತಿ ನೀಡಿದ್ದಾರೆ. "ಕಳೆದ 10 ದಿನಗಳ ಅವಧಿಯಲ್ಲಿ ಹೊರ ಜಿಲ್ಲೆಯಿಂದ ಬಂದವರಿಂದಲೇ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹಬ್ಬಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಅಂತರ ಜಿಲ್ಲಾ ಚೆಕ್‌ಪೋಸ್ಟ್ ತೆರೆಯಲಾಗಿದೆ" ಎಂದು ಹೇಳಿದ್ದಾರೆ.

ಚಾಮರಾಜನಗರ; ಮೊದಲ ಮಹಿಳಾ ಎಸ್ಪಿ ವರ್ಗಾವಣೆ ಚಾಮರಾಜನಗರ; ಮೊದಲ ಮಹಿಳಾ ಎಸ್ಪಿ ವರ್ಗಾವಣೆ

ಹೊರ ಜಿಲ್ಲೆಯಿಂದ ಬರುವವರಿಗೆ ಚೆಕ್‌ಪೋಸ್ಟ್‌ನಲ್ಲಿ ಆಂಟಿಜೆನ್ ಪರೀಕ್ಷೆ ಮಾಡಲಾಗುತ್ತದೆ. ಸೋಂಕಿನ ಲಕ್ಷಣಗಳು ಕಂಡುಬಂದರೆ ಅಲ್ಲಿಯೇ ಆರ್‌ಟಿಪಿಸಿಆರ್ ಪರೀಕ್ಷೆಗೆ ಮಾದರಿ ಸಂಗ್ರಹ ಮಾಡಲಾಗುತ್ತದೆ. ಸೋಂಕಿತರನ್ನು ವಾಪಸ್ ಕಳಿಸಲಾಗುತ್ತದೆ.

ಝೀಕಾ ವೈರಸ್; ಚಾಮರಾಜನಗರ ಗಡಿಯಲ್ಲಿ ಕಟ್ಟೆಚ್ಚರ ಝೀಕಾ ವೈರಸ್; ಚಾಮರಾಜನಗರ ಗಡಿಯಲ್ಲಿ ಕಟ್ಟೆಚ್ಚರ

Covid Situation Chamarajanagar Set Up Inter District Checkpoints

ಚಾಮರಾಜನಗರ ಜಿಲ್ಲಾಡಳಿತ ಕೇರಳ, ತಮಿಳುನಾಡು ಗಡಿಯಲ್ಲಿ ಈಗಾಗಲೇ 6 ಅಂತರರಾಜ್ಯ ಚೆಕ್‌ಪೋಸ್ಟ್ ಸ್ಥಾಪನೆ ಮಾಡಿದೆ. ಈಗ ಹೊಸದಾಗಿ 5 ಅಂತರ ಜಿಲ್ಲಾ ಚೆಕ್‌ಪೋಸ್ಟ್ ಸ್ಥಾಪನೆ ಮಾಡಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಚಾಮರಾಜನಗರ ಆಕ್ಸಿಜನ್ ದುರಂತ: ಪರಿಹಾರ ನೀಡುವಂತೆ ಹೈಕೋರ್ಟ್ ಸೂಚನೆಚಾಮರಾಜನಗರ ಆಕ್ಸಿಜನ್ ದುರಂತ: ಪರಿಹಾರ ನೀಡುವಂತೆ ಹೈಕೋರ್ಟ್ ಸೂಚನೆ

ಮೈಸೂರು, ಮಂಡ್ಯ ಸೇರಿದಂತೆ ಹೊರ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಗುಂಡ್ಲುಪೇಟೆ ತಾಲೂಕಿನ ಬೇಗೂರು, ಚಾಮರಾಜನಗರ ತಾಲೂಕಿನ ಹೆಗ್ಗವಾಡಿ, ಬಾಣಹಳ್ಳಿ, ಕೊಳ್ಳೇಗಾಲ ತಾಲೂಕಿನ ಟಗರಪುರ ಮತ್ತು ಸತ್ತೇಗಾಲದಲ್ಲಿ ಅಂತರಜಿಲ್ಲಾ ಚೆಕ್‌ಪೋಸ್ಟ್ ಇದೆ.

ಈ ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆಗಾಗಿ ಪೊಲೀಸ್, ಕಂದಾಯ, ಆರೋಗ್ಯ ಇಲಾಖೆ ನೌಕರರನ್ನು ನಿಯೋಜನೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ಹಲವಾರು ಜಿಲ್ಲೆಗಳ ಪ್ರವಾಸಿಗರು ಆಗಮಿಸುತ್ತಾರೆ. ಆದ್ದರಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.

ಮಲೆಮಹದೇಶ್ವರ ಬೆಟ್ಟ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನಬೆಟ್ಟ, ಬಂಡೀಪುರ, ಭರಚುಕ್ಕಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿತಾಣಗಳಿಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಯ ಪ್ರವಾಸಿಗಳು ಆಗಮಿಸುತ್ತಾರೆ. ಇವರಿಂದ ಜಿಲ್ಲೆಯಲ್ಲಿ ಕೋವಿಡ್ ಹರಡಬಾರದು ಎಂದು ಜಿಲ್ಲಾಡಳಿತ ಚೆಕ್‌ಪೋಸ್ಟ್ ಸ್ಥಾಪನೆ ಮಾಡಿದೆ.

ಕರ್ನಾಟಕ ಸರ್ಕಾರ ಈಗಾಗಲೇ ಕೇರಳ, ಮಹಾರಾಷ್ಟ್ರದ ಜೊತೆ ಗಡಿಯನ್ನು ಹಂಚಿಕೊಂಡಿರುವ 8 ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿದೆ. ಚೆಕ್‌ಪೋಸ್ಟ್‌ನಲ್ಲಿ ಪ್ರತಿ ವಾಹನ ತಪಾಸಣೆ ಮಾಡುತ್ತಿದೆ. 72 ಗಂಟೆಗಳ ಮೊದಲಿನ ಕೋವಿಡ್ ಆರ್‌ಟಿಪಿಸಿಆರ್ ಪರೀಕ್ಷೆ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ರಾಜ್ಯ ಪ್ರವೇಶ ಮಾಡಲು ಅವಕಾಶ ನೀಡುತ್ತಿದೆ.

ಎರಡೂ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ. ಭಾನುವಾರದ ವರದಿಯಂತೆ ಮಹಾರಾಷ್ಟ್ರದಲ್ಲಿ 4,797, ಕೇರಳದಲ್ಲಿ 18,582 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಆದ್ದರಿಂದ ಕರ್ನಾಟಕ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ.

ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 1,431 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ 10 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 251 ಆಗಿದೆ.

ಕರ್ನಾಟಕದಲ್ಲಿ ಬೆಂಗಳೂರು (305), ದಕ್ಷಿಣ ಕನ್ನಡ (311), ಉಡುಪಿ (177) ಹೊರತುಪಡಿಸಿದರೆ ಬೇರೆ ಯಾವುದೇ ಜಿಲ್ಲೆಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಮೂರಂಕಿಯ ಗಡಿ ದಾಟಿಲ್ಲ. ರಾಜ್ಯದ ಪಾಸಿಟಿವಿಟಿ ದರ 0.93 ಆಗಿದೆ.

ಆದರೆ ಕರ್ನಾಟಕದ ಅಕ್ಕಪಕ್ಕದ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿರುವುದು ರಾಜ್ಯಕ್ಕೆ ಆತಂಕ ತಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಜೊತೆ ಶನಿವಾರ ರಾಜ್ಯದ ಕೋವಿಡ್ ಪರಿಸ್ಥಿತಿ ಬಗ್ಗೆ ಸಭೆಯನ್ನು ನಡೆಸಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ ಲಾಕ್‌ಡೌನ್ ಜಾರಿಗೊಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಆದರೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗದಂತೆ ಕ್ರಮ ಕೈಗೊಳ್ಳಬೇಕು.

Recommended Video

ಭಾರತವನ್ನು ತಾಲಿಬಾನ್ ಹೊಗಳುತ್ತಿರೋದು ಯಾಕೆ ಗೊತ್ತಾ? | Oneindia Kannada

English summary
Chamarajanagar district administration set up inter district checkpoints after new COVID-19 cases raised.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X