ಸಿ.ಪಿ.ಯೋಗೇಶ್ವರ್‌ ಬಾವನವರ ಶವ ಪತ್ತೆ

ಚಾಮರಾಜನಗರ, ಡಿಸೆಂಬರ್‌, 04: ಹನೂರು ತಾಲೂಕಿನ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಸಿ.ಪಿ.ಯೋಗೇಶ್ವರ್‌ ಅವರ ಬಾವ ಮಹಾದೇವಯ್ಯ ಅವರ ಶವ ಪತ್ತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

CP Yogeshwars brother-in-law body was found in Ramapura

ಕಾರು ಪತ್ತೆಯಾದ ಸ್ಥಳದ ಸಮೀಪದಲ್ಲೇ ಕೊಲೆಯಾದ ಸ್ಥಿತಿಯಲ್ಲಿ ಮಹಾದೇವಯ್ಯ ಅವರ ಶವಪತ್ತೆಯಾಗಿದ ಎಂದು ತಿಳಿದುಬಂದಿದೆ.ಈ ಪ್ರಕರಣ ಸಂಬಂಧ ರಾಮಾಪುರ ಗ್ರಾಮದ ಅಂಗಡಿಯೊಂದರಲ್ಲಿ ಸಿಸಿ ಕ್ಯಾಮರಾ ಪರಿಶಿಲನೆ ನಡೆಸಲಾಗಿದೆ. ಈ ವೇಳೆ ಮೂವರು ನಡೆದು ಹೋಗುವ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಓರ್ವ ಪಂಚೆಯಲ್ಲಿ, ಇನ್ನಿಬ್ಬರು ಪ್ಯಾಂಟ್ ಧರಿಸಿರುವ ವ್ಯಕ್ತಿಗಳು ಟಾರ್ಚ್ ಹಿಡಿದು ನಡೆದು ಹೋಗುತ್ತಿರುವ ವಿಡಿಯೋ ಸೆರೆಯಾಗಿದೆ.

ಕಾರು ಪತ್ತೆಯಾಗಿದ್ದು ಎಲ್ಲಿ ಗೊತ್ತಾ?

ಚನ್ನಪಟ್ಟಣ ತಾಲ್ಲೂಕಿನ ಚಕ್ಕರೆ ಗ್ರಾಮದ ತೋಟದ ಮನೆಯಿಂದ ನಾಪತ್ತೆಯಾಗಿದ್ದ ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಅವರ ಬಾವ ಅವರ ಕಾರು ಹನೂರು ತಾಲೂಕಿನ ರಾಮಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಪತ್ತೆಯಾಗಿದೆ ಎಂದು ತಿಳಿದುಬಂದಿತ್ತು.

ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರ ಬಾವ ಚಕ್ಕರೆ ಗ್ರಾಮದ ಮಹದೇವಯ್ಯ ಎಂಬುವರು ಮೂರು ದಿನಗಳ ಹಿಂದೆ ಬಿಳಿ ಬಣ್ಣದ ಬ್ರಿಜಾ ಕಾರು ಸಮೇತ (ka-42 N0012) ಕಾಣೆಯಾಗಿದ್ದರು. ಈ ಸಂಬಂಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಶನಿವಾರ ಬೆಳಗ್ಗೆ ಮೊಬೈಲ್ ಟವರ್ ಲೊಕೇಶನ್‌ನಲ್ಲಿ ಪರಿಶೀಲನೆ ನಡೆಸಿದಾಗ ಮಲೆಮಾದೇಶ್ವರ ಬೆಟ್ಟದ ಸುತ್ತಮುತ್ತಲು ಇರುವುದಾಗಿ ತಿಳಿದು ಬಂದಿತ್ತು. ಇದೀಗ ರಾಮಾಪುರ ಪೊಲೀಸ್ ಠಾಣೆ ಸಮೀಪದ ರಾಮಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಅವರು ಬಳಸುತ್ತಿದ್ದ ಕಾರು ಪತ್ತೆಯಾಗಿದೆ.

ಈಗಾಗಲೇ ರಾಮಾಪುರ ಪೊಲೀಸರು ಪರಿಶೀಲನೆ ನಡೆಸಿದ್ದು, ಕೇವಲ ಕಾರು ಮಾತ್ರ ಆಸ್ಪತ್ರೆಯ ಮುಂಭಾಗ ನಿಂತಿದೆ. ಈ ವಿಚಾರವನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಚನ್ನಪಟ್ಟಣ ಪೊಲೀಸರು ಕೂಡ ಈಗ ಸ್ಥಳಕ್ಕೆ ಆಗಮಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+