Holiday; ಭಾರೀ ಮಳೆ ಮುಂದುವರೆದ ಹಿನ್ನೆಲೆ ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Cyclone Fengal: ಇದೀಗ ಚಳಿಗಾಲದಲ್ಲೂ ಕೂಡ ರಾಜ್ಯದ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಫೆಂಗಲ್ ಚಂಡಮಾರುತದ ಪರಿಣಾಮ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಅವಾಂತರಗಳೇ ಸೃಷ್ಟಿಯಾಗಿದ್ದು, ಮುಂಜಾಗ್ರಾತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಮಳೆ ಅಬ್ಬರಕ್ಕೆ ಮರಬಿದ್ದು ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ನಾಲ್ಕು ತಾಸು ವಾಹನ ಸಂಚಾರ ಅಸ್ತವ್ಯಸ್ತವಾದ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಅಮವಾಸ್ಯೆ ಹಿನ್ನೆಲೆ ಸಹಸ್ರಾರು ಮಂದಿ ಭಕ್ತರು ದೇಗುಲಕ್ಕೆ ಆಗಮಿಸಿ ವಾಪಾಸ್ ತೆರಳಲು ಸಂಚಾರ ನಡೆಸುತ್ತಿದ್ದರು. ಮಳೆ ಅಬ್ಬರಕ್ಕೆ ಆನೆ ತಲೆದಿಂಬ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ 4 ತಾಸು ವಾಹನಗಳು ನಿಂತಲ್ಲೇ ನಿಂತು ಸವಾರತು ಪರದಾಡಿದರು. ಬಳಿಕ, ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಕಾರ್ಯಾಚರಣೆ ನಡೆಸಿ ತೆರವು ಮಾಡಿ, ಮತ್ತೇ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಪೊನ್ನಾಚಿಯಲ್ಲಿ ಅತ್ಯಧಿಕ ಮಳೆ ದಾಖಲು: ಫೆಂಗಲ್ ಚಂಡಮಾರುತದ ಹಿನ್ನೆಲೆ ಚಾಮರಾಜನಗರ ಜಿಲ್ಲೆಗೆ ಹವಾಮಾನ ಇಲಾಖೆಯು ಇಂದು (ಡಿಸೆಂಬರ್ 02) ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲಾದ್ಯಂತ ತುಂತುರು ಮಳೆಯಾಗುತ್ತಿದ್ದು, ಇಂದು ಬಹುತೇಕ ಕಡೆ ಸಾಧಾರಣ ಮಳೆ, ಅಲ್ಲಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ.
ಸೋಮವಾರ ಬೆಳಗ್ಗೆ 7.30ರಲ್ಲಿ ರಾಜ್ಯದಲ್ಲಿ ಅತ್ಯಧಿಕ ಮಳೆ ಪ್ರಮಾಣ ಹನೂರು ತಾಲೂಕಿನ ಪೊನ್ನಾಚಿಯಲ್ಲಿ ದಾಖಲಾಗಿದ್ದು, 94 ಮಿಲಿ ಮೀಟರ್ ಮಳೆ ಸುರಿದಿದೆ ಎಂದು ತಿಳಿಸಿದೆ. ಇನ್ನು ಫೆಂಗಲ್ ಚಂಡಮಾರುತ ಹಿನ್ನೆಲೆ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಆದೇಶಿಸಿದ್ದಾರೆ.
ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜುಗಳಿಗೆ ಹೊರತು ಪಡಿಸಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇಂದಿನ ರಜೆ ಅವಧಿಯನ್ನು ಭಾನುವಾರ ತರಗತಿ ನಡೆಸಿ ಸರಿದೂಗಿಸಲಾಗುವುದೆಂದು ಅವರು ತಿಳಿಸಿದ್ದಾರೆ.
ಭಾರೀ ಮಳೆ: ಫೆಂಗಲ್ ಚಂಡಮಾರುತ ಹಿನ್ನೆಲೆ ರಾಜ್ಯದ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಕಳೆದ ಎರಡು ದಿನಗಳಿಂದ ಸತತವಾಗಿ ಬಾರಿ ಮಳೆಯಾಗುತ್ತಿರುವ ಹಿನ್ನೆಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹಾಗಾದರೆ ಏನೆಲ್ಲಾ ಅವಾತರಗಳು ಸೃಷ್ಟಿಯಾಗಿವೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕಳೆದ ಎರಡು ದಿನಗಳಿಂದ ಬೀಳುತ್ತಿರುವ ಬಾರಿ ಮಳೆಯಿಂದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ತಂಬಡಗೇರಿ ಸಮೀಪದ ಪುಟ್ಟಸ್ವಾಮಿ ಹಾಗೂ ರಾಜೇಶ್ವರಿ ಎಂಬ ದಂಪತಿಗೆ ಸೇರಿದ ಮನೆಯ ಗೋಡೆ ಕುಸಿತು ಅಪಾರ ಪ್ರಮಾಣದ ಪಾತ್ರೆ ಸಾಮಾಗ್ರಿಗಳು ನೆಲಕಚ್ಚಿದೆ. ಪಾತ್ರೆ ಸಾಮಾಗ್ರಿಗಳ ಜೊತೆಗೆ ಗೋಡೆ ಕುಸಿದಿರುವುದರಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ. ಇದಲ್ಲದೆ, ಸತತ ಮಳೆ ಆಗುತ್ತಿರುವ ಹಿನ್ನೆಲೆ ಸಂಪೂರ್ಣ ಒಂದು ಭಾಗ ಗೋಡೆ ಕುಸಿಯುವ ಭೀತಿಯಲ್ಲಿ ದಂಪತಿಗಳಿದ್ದಾರೆ.
ಸೂಕ್ತ ಪರಿಹಾರಕ್ಕೆ ಒತ್ತಾಯ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ತಂಬಡಿಗೇರಿ ನಿವಾಸಿಗಳಾದ ರಾಜೇಶ್ವರಿ ಹಾಗೂ ಪುಟ್ಟಸ್ವಾಮಿ ಬಡವರಾಗಿದ್ದು, ಇರುವ ಮನೆಯ ಗೋಡೆ ಕುಸಿದಿರುವುದರಿಂದ ಹೆದರಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ. ಸಂಬಂಧಪಟ್ಟ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ.












Click it and Unblock the Notifications