ದಲಿತ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ, ಇಬ್ಬರ ಬಂಧನ
ಚಾಮರಾಜನಗರ, ಜೂನ್ 11: ಚಾಮರಾಜನಗರ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೊಬ್ಬರನ್ನು ಅಮಾನವೀಯವಾಗಿ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿರುವ ಘಟನೆ ತಡವಾಗಿ ವರದಿಯಾಗಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕು, ಕಬ್ಬೆಕಟ್ಟೆ ಗ್ರಾಮದಲ್ಲಿ ಜೂನ್ 3 ರಂದು ದಲಿತ ವ್ಯಕ್ತಿಯೊಬ್ಬನನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಲಾಗಿದ್ದು, ಅದರ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಚಾಮರಾಜನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಈಗಾಗಲೇ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೂ ನಾಲ್ಕು ಮಂದಿ ತಲೆಮರೆಸಿಕೊಂಡಿದ್ದಾರೆ.

ಪ್ರತಾಪ್ ಎಂಬಾತನನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿದೆ. ಆದರೆ ಈತ ಮಾನಸಿಕ ಅಸ್ವಸ್ಥನಾಗಿದ್ದಾನೆ. ಪ್ರತಾಪ್ ಅವರ ತಂದೆಯೇ ಆತನ ವೈದ್ಯಕೀಯ ವರದಿಗಳನ್ನು ಪೊಲೀಸರಿಗೆ ನೀಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಪ್ರತಾಪ್ ಪ್ರಸ್ತುತ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮಾನವೀಯವಾಗಿ ವರ್ತಿಸಿರುವವ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಾಪ್ ಅವರ ಸಹೋದರ ಸಂಬಂಧಿ ಕಾಂತರಾಜು ಅವರು ಪೊಲೀಸರಿಗೆ ದೂರು ನೀಡಿದ್ದಾರೆ.












Click it and Unblock the Notifications