• search
 • Live TV
ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

22 PDOಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ ಚಾಮರಾಜನಗರ ಡಿಸಿ

By ಚಾಮರಾಜನಗರ ಪ್ರತಿನಿಧಿ
|

ಚಾಮರಾಜನಗರ, ಏಪ್ರಿಲ್ 29: ಕೋವಿಡ್ ಸಂಬಂಧಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿದ 22 ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ (ಪಿಡಿಒ) ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ಕೋವಿಡ್-19 ಸೋಂಕಿತ ವ್ಯಕ್ತಿಗಳ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತ ವ್ಯಕ್ತಿಗಳನ್ನು ನಿಗದಿತ ಅವಧಿಯಲ್ಲಿ ಪತ್ತೆ ಹಚ್ಚುವ ಕಾರ್ಯಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಲಾಗಿತ್ತು.

ಆದರೆ, ಈ ಕಾರ್ಯದಲ್ಲಿ ಯಾವುದೇ ಸಂಪರ್ಕಿತರನ್ನು ಪತ್ತೆ ಹಚ್ಚದೆ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ತೋರಿದ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ವಿವರವನ್ನು ಕಾಂಟಾಕ್ಟ್ ಟ್ರೇಸಿಂಗ್ ತಂಡದ ನೋಡಲ್ ಅಧಿಕಾರಿಗಳು ಜಿಲ್ಲಾಧಿಕಾರಿಗೆ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಕೋವಿಡ್ ಸಂಬಂಧಿತ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿದ 22 ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ವಿಪತ್ತು ನಿರ್ವಹಣಾ ಕಾಯ್ದೆ 2005 ಸೆಕ್ಷನ್ 51 ರಿಂದ 60, ಐಪಿಸಿ ಸೆಕ್ಷನ್ 158ರ ಅಡಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮ ಪಂಚಾಯಿತಿಯ ಪಿಡಿಒ ಬಿ.ಮಹದೇವಯ್ಯ, ಚಂದಕವಾಡಿ ಗ್ರಾಮ ಪಂಚಾಯಿತಿಯ ಪಿಡಿಒ ಎಂ.ಸಿದ್ದರಾಜು, ಕೆಂಪನಪುರ ಗ್ರಾಮ ಪಂಚಾಯಿತಿಯ ಪಿಡಿಒ ಕೆ.ಎನ್.ರಾಮೇಗೌಡ, ಬಾಗಳಿ ಗ್ರಾಮ ಪಂಚಾಯಿತಿಯ ಪಿಡಿಒ ಶಿವಕುಮಾರ್, ಉಮ್ಮತ್ತೂರು ಗ್ರಾಮ ಪಂಚಾಯಿತಿಯ ಪಿಡಿಒ ಡಿ.ಭಾಗ್ಯಲಕ್ಷ್ಮಿ, ಕುದೇರು ಗ್ರಾಮ ಪಂಚಾಯಿತಿಯ ಪಿಡಿಒ ಎಂ.ಎಸ್ ಚಂದ್ರು, ಸಾಗಡೆ ಗ್ರಾಮ ಪಂಚಾಯಿತಿಯ ಪಿಡಿಒ ಕೆ.ಎನ್ ಸೋಮಶೇಖರ, ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮ ಪಂಚಾಯಿತಿಯ ಪಿಡಿಒ ಕೆ.ಜಿ.ದಯಾನಂದ.

ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿಯ ಪಿಡಿಒ ಕೆ.ರಾಜಕುಮಾರ್, ರಾಮಾಪುರ ಗ್ರಾಮ ಪಂಚಾಯಿತಿಯ ಪಿಡಿಒ ವಿ.ಮಹದೇವಸ್ವಾಮಿ, ಕಣ್ಣೂರು ಗ್ರಾಮ ಪಂಚಾಯಿತಿಯ ಪಿಡಿಒ ಬಿ.ನಾಗರಾಜು, ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಬಸವಣ್ಣ, ಗೌಡಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಶಿವಕುಮಾರ್, ಯರಗಂಬಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಬಿ.ಆದಿಶೇಷ ಮೂರ್ತಿ, ಹೊನ್ನೂರು ಗ್ರಾಮ ಪಂಚಾಯಿತಿಯ ಪಿಡಿಒ ಕೆ.ಪಿ.ಸುನೀತಾ.

   APMCಗೆ ಭೇಟಿ ನೀಡಿ ತರಕಾರಿ ಮಾರಾಟಗಾರರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ರವಿ | Oneindia Kannada

   ಗುಂಡ್ಲುಪೇಟೆ ತಾಲೂಕಿನ ಅಗತಗೌಡನಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಎಸ್. ಮಹದೇವಪ್ಪ, ಬಲಚವಾಡಿ ಗ್ರಾಮ ಪಂಚಾಯಿತಿಯ ಪಿಡಿಒ ಕೆ.ಸೋಮಶೇಖರ, ಬರಗಿ ಗ್ರಾಮ ಪಂಚಾಯಿತಿಯ ಪಿಡಿಒ ಎಚ್.ಆರ್.ಮೋಹನ್ ಕುಮಾರ್, ಬೇರಂಬಾಡಿ ಗ್ರಾಮ ಪಂಚಾಯಿತಿಯ ಪಿಡಿಒ ಡಿ.ಶೀಲ, ಹಂಗಳ ಗ್ರಾಮ ಪಂಚಾಯಿತಿಯ ಪಿಡಿಒ ಕುಮಾರಸ್ವಾಮಿ, ಕೆಲಸೂರು ಗ್ರಾಮ ಪಂಚಾಯಿತಿಯ ಪಿಡಿಒ ಆರ್.ರವಿ, ಕಬ್ಬಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಸಿ.ಎಸ್ ಉಷಾರಾಣಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

   English summary
   District Collector of Chamarajanagar, Dr MR Ravi has issued Showcause notice to 22 Grama Panchayat Development Officers (PDOs) for irresponsibility on Duty.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X