ಹನೂರು: ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ, ಅಂಧರ ಬಾಳಿಗೆ ಬೆಳಕಾದ ಯುವಕ
ಚಾಮರಾಜನಗರ, ಜುಲೈ, 12: ಮಗ ಮೃತಪಟ್ಟ ನೋವಿನ ನಡುವೆಯೂ ಆತನ ಕಣ್ಣುಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರೆದ ಘಟನೆ ಹನೂರು ತಾಲೂಕಿನ ಕುರಟ್ಟಿಹೊಸೂರು ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿಹೊಸೂರು ಗ್ರಾಮದಲ್ಲಿ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ಪೋಷಕರು ಈತನ ಕಣ್ಣುಗಳನ್ನು ದಾನ ಮಾಡುವ ಮೂಲಕ ಅಂಧರ ಬಾಳಿಗೆ ಬೆಳಕಾಗಿದ್ದಾರೆ.

ಕುರಟ್ಟಿಹೊಸರು ಗ್ರಾಮದ ಅಂಬರೀಶ್ (27) ಎಂಬ ಯುವಕ ಕುರಟ್ಟಿಹೊಸರು ಗ್ರಾಮದಲ್ಲಿ ಬೈಕ್ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅಂಬರೀಶ್ ಮಂಗಳವಾರ (ಜುಲೈ 11) ನಿಧನ ಹೊಂದಿದ್ದು, ಈತನ ಕಣ್ಣುಗಳನ್ನು ಪಾಲಕರ ಒಪ್ಪಿಗೆಯಂತೆ ದಾನ ಮಾಡಲಾಗಿದೆ.
ತನ್ನ ಮರಣದ ಬಳಿಕ ನೇತ್ರದಾನ ಮಾಡಬೇಕು ಎಂಬುದು ಅಂಬರೀಶ್ ಅವರ ಆಸೆಯಾಗಿತ್ತಂತೆ. ಅದರಂತೆಯೇ ಮಗನ ನೇತ್ರದಾನ ಮಾಡಲಾಗಿದೆ ಎಂದು ಪಾಲಕರು ತಿಳಿಸಿದ್ದಾರೆ.
ಪೊರಕೆ ಕಡ್ಡಿ ಕೀಳಲು ಹೋದಾಗ ಆನೆ ದಾಳಿ
ಮತ್ತೊಂದೆಡೆ ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಸಮೀಪದ ಆಲದಕೆರೆ ಕಾಡಿನಲ್ಲಿ ನಡೆದಿದೆ.
ಪಿ.ಜಿ.ಪಾಳ್ಯ ಸಮೀಪದ ಮಾಳಿಗನತ್ತ ಗ್ರಾಮದ ಪ್ರಭುಸ್ವಾಮಿ (55) ಮೃತ ದುರ್ದೈವಿ. ಮಲೆ ಮಹದೇಶ್ವರ ವನ್ಯಜೀವಿಧಾಮ ಪಿ.ಜಿ. ಪಾಳ್ಯ ಅರಣ್ಯ ವಲಯಕ್ಕೆ ಸೇರಿದ ಆಲದಕೆರೆ ಬಯಲು ಅರಣ್ಯ ಪ್ರದೇಶಕ್ಕೆ ಪ್ರಭುಸ್ವಾಮಿ ಹಾಗೂ ಮಗ ಚಂದ್ರು ಇಬ್ಬರೂ ಪೊರಕೆ ಕಡ್ಡಿ ಕೀಳಲು ತೆರಳಿದ್ದರು. ಅಪ್ಪ ಒಂದು ಭಾಗದಲ್ಲಿ ಮಗ ಒಂದು ಭಾಗದಲ್ಲಿ ಪೊರಕೆ ಕಡ್ಡಿ ಕೀಳುತ್ತಿದ್ದಾಗ ಆನೆ ದಾಳಿ ಮಾಡಿದೆ. ಈ ವೇಳೆ ಪ್ರಭುಸ್ವಾಮಿ ಸ್ಥಳದಲ್ಲೇ ಅಸುನೀಗಿದ್ದಾರೆ.
ಇನ್ನು ಬಚಾವಾದ ಮಗನಿಂದ ಆನೆ ದಾಳಿ ವಿಚಾರ ಬೆಳಕಿಗೆ ಬಂದಿದೆ. ಪ್ರಭುಸ್ವಾಮಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಮಲೆಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications