ಹರದನಹಳ್ಳಿ: ಸ್ಮಾಶನ ಇಲ್ಲದ ಕಾರಣ ಕೆಸರು ಗುಂಡಿಯಲ್ಲೇ ಮೃತರ ಅಂತ್ಯಕ್ರಿಯೆ

ಚಾಮರಾಜನಗರ, ಆಗಸ್ಟ್‌, 08: ಚಾಮರಾಜನಗರದ ಸಮೀಪವಿರುವ ಹರದನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗವಿಲ್ಲದೇ ಕೆಸರು ಗುಂಡಿಯಲ್ಲೇ ಅಂತ್ಯಕ್ರಿಯೆ ನಡೆಸಿರುವ ಘಟನೆ ಇಂದು ನಡೆದಿದೆ.

ಚಾಮರಾಜನಗರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಾಗವಿದ್ದರೂ ಅಧಿಕಾರಿಗಳು ಸ್ಮಶಾನದ ಸ್ಥಳ ಗುರುತು ಮಾಡದ ಹಿನ್ನೆಲೆಯಲ್ಲಿ ಸ್ವಂತ ಜಮೀನು ಇಲ್ಲದವರು ಯಾರಾದರೂ ಮೃತಪಟ್ಟರೇ ಪಡಿಪಾಡಲು ಪಡಬೇಕಾದ ದುಸ್ಥಿತಿ ಇದೆ. ಸೋಮವಾರ (ಆಗಸ್ಟ್‌ 07) ಗ್ರಾಮದಲ್ಲಿ ಸಿದ್ದಶೆಟ್ಟಿ (76) ಎಂಬವವರು ವಯೋಸಹಜವಾಗಿ ನಿಧನರಾಗಿದ್ದು, ಸ್ವಂತ ಜಮೀನು ಇಲ್ಲದ ಹಿನ್ನೆಲೆ ಮೃತರ ಅಂತಿಮ ಸಂಸ್ಕಾರಕ್ಕೆ ಜಾಗವಿಲ್ಲದೆ ಗ್ರಾಮಸ್ಥರು ಪರದಾಡಿದ್ದಾರೆ. ನಂತರ ಸರ್ಕಾರಿ ಭೂಮಿಯೊಂದರ ಕೆಸರು ತುಂಬಿದ ಜಾಗದಲ್ಲೇ ಗುಂಡಿ ತೆಗೆದು ಅಂತ್ಯಸಂಸ್ಕಾರ ಮಾಡಲಾಗಿದೆ.

Deceased funeral in Mud pit by Haradanahalli Villagers

ಸಮಾಧಿ ಗುಂಡಿ ತೆಗೆಯುವಾಗ ಹೊರಬರುತ್ತಿದ್ದ ನೀರನ್ನು ಹೊರಹಾಕಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಇನ್ನು ಗ್ರಾಮದ ಗಿರೀಶ್ ಎಂಬವವರು ಮಾತನಾಡಿ, ಈ ಬಗ್ಗೆ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮದಲ್ಲಿ ಸರ್ಕಾರಿ ಜಾಗವಿದ್ದರೂ ಅಧಿಕಾರಿಗಳು ಸ್ಮಶಾನ ಗುರುತು ಮಾಡಿಲ್ಲ. ಇನ್ನಾದರೂ ಸರ್ಕಾರಿ ಜಾಗವನ್ನು ಸ್ಮಶಾನ ಮಾಡುವಂತೆ ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+