ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತೆಳ್ಳನೂರಿನ ತೋಟದ ಮನೆಯಲ್ಲಿ ಅಕ್ರಮವಾಗಿ ಜಿಂಕೆ ಕೊಂಬು ಸಂಗ್ರಹಿಸಿಟ್ಟವನ ಬಂಧನ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಡಿಸೆಂಬರ್ 06: ತೋಟದ ಮನೆಯಲ್ಲಿ ಅಕ್ರಮವಾಗಿ ಜಿಂಕೆ ಕೊಂಬುಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ತೆಳ್ಳನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಪ್ರಕಾಶ್(45) ಎಂಬಾತನೇ ಜಿಂಕೆ ಕೊಂಬುಗಳನ್ನು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಆರೋಪಿ.

ಈತ ಮನೆಯಲ್ಲಿ ಜಿಂಕೆಕೊಂಬುಗಳನ್ನು ಸಂಗ್ರಹಿಸಿಟ್ಟಿದ್ದನು ಎನ್ನಲಾಗಿದೆ. ಜಿಂಕೆಗಳನ್ನು ಬೇಟೆಯಾಡಿ ಅದರ ಮಾಂಸವನ್ನು ಸೇವಿಸಿದ ಬಳಿಕ ಕೊಂಬುಗಳನ್ನು ಸಂಗ್ರಹಿಸಿಟ್ಟಿದ್ದನು.

ಪೊಲೀಸ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ಆರೋಪಿಗೆ ನ್ಯಾಯಾಂಗ ಬಂಧನಪೊಲೀಸ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ಆರೋಪಿಗೆ ನ್ಯಾಯಾಂಗ ಬಂಧನ

ಈತ ಮನೆಯಲ್ಲಿ ಜಿಂಕೆಗಳ ಕೊಂಬುಗಳು ಸಂಗ್ರಹಿಸಿಟ್ಟಿರುವ ಕುರಿತು ಪೊಲೀಸರಿಗೆ ಮಾಹಿತಿ ಇರಲಿಲ್ಲವಾದರೂ ಹನೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮೋಹಿತ್ ಸಹದೇವ್ ರವರ ತಂಡ ಎಂದಿನಂತೆ ಗಾಂಜಾ ಪ್ರಕರಣಗಳನ್ನು ಪತ್ತೆಹಚ್ಚಲು ತೆಳ್ಳನೂರು ಬಳಿ ಕಾಡಂಚಿನ ಚಪ್ಪರದ ಹಳ್ಳಿ ತೋಟಗಳಲ್ಲಿ ಪರಿಶೀಲನೆ ನಡೆಸಿದೆ.

Deer horn was stored illegally at garden of Thellanuru

ಈ ವೇಳೆ ಪ್ರಕಾಶ್ ಎಂಬಾತನ ಮನೆಯಲ್ಲಿಯೂ ಪರಿಶೀಲನೆ ನಡೆಸಿದ್ದಾರೆ. ಆಗ 15 ಜಿಂಕೆಯ ಕೊಂಬುಗಳು ಪತ್ತೆಯಾಗಿವೆ. ಕೂಡಲೇ ಕೊಂಬುಗಳನ್ನು ವಶಕ್ಕೆ ಪಡೆದು, ಪ್ರಕಾಶ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಅರಣ್ಯದಲ್ಲಿ ಜಿಂಕೆಗಳನ್ನು ಬೇಟೆಯಾಡಿ ಕೊಂಬುಗಳನ್ನು ತಂದು ಶೇಖರಣೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ: 4 ಮಂದಿ ಖದೀಮರು ಪೊಲೀಸ್ ಬಲೆಗೆಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ: 4 ಮಂದಿ ಖದೀಮರು ಪೊಲೀಸ್ ಬಲೆಗೆ

ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

English summary
Deer horn was stored illegally at garden of Thellanuru in Chamarajanagar. Person who has been illegally stored has now been arrested.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X