ಹನೂರು: ನಿವೃತ್ತ ಶಿಕ್ಷಕನ ಬಳಿ ₹15,000 ಲಂಚಕ್ಕೆ ಬೇಡಿಕೆ: ಬಿಇಒ, ಸಿಆರ್‌ಪಿ ಲೋಕಾಯುಕ್ತ ಬಲೆಗೆ

ಚಾಮರಾಜನಗರ, ಮಾರ್ಚ್‌, 13: ನಿವೃತ್ತ ಶಿಕ್ಷಕನ ಗಳಿಕೆ ರಜೆ(ಇಎಲ್) ಹಣವನ್ನು ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಹಾಗೂ ಸಿಆರ್‌ಪಿ ಮುನಿರಾಜು ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ (ಮಾರ್ಚ್‌ 13) ಸಂಜೆ ಬಂಧಿಸಿದ್ದಾರೆ.

ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ನಿವೃತ್ತ ಶಿಕ್ಷಕ ವಿಜಯ್ ಕುಮಾರ್ 139 ದಿನಗಳ ಗಳಿಕೆ ರಜೆಯ (ಎನ್.ಕ್ಯಾಶಮೆಂಟ್) ಹಣ ಮಂಜೂರು ಮಾಡಲು 15,000 ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ನಿವೃತ್ತ ಶಿಕ್ಷಕ ವಿಜಯ್ ಕುಮಾರ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ಕೊಟ್ಟಿದ್ದರು.

Demand for 15 000 bribe Lokayukta raid on BEO CRP in Hanur

ಬುಧವಾರ ಹನೂರು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಿವೃತ್ತ ಶಿಕ್ಷಕ ವಿಜಯ್ ಕುಮಾರ್ ಲಂಚದ ಹಣ ನೀಡುತ್ತಿದ್ದಾಗ ಲೋಕಾಯುಕ್ತ ಇನ್ಸ್‌ಪೆಕ್ಟರ್ ಲೋಹಿತ್ ಕುಮಾರ್ ಹಾಗೂ ತಂಡ ಲಂಚ ಪಡೆಯುತ್ತಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಹಾಗೂ ಸಿಆರ್‌ಪಿ ಮುನಿರಾಜು ಅವರನ್ನು ವಶಕ್ಕೆ ಪಡೆದು ಹಣವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರೆಸಿದ್ದು, ಇನ್ನು ಈ ಪ್ರಕರಣ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+