ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೇಕೆದಾಟು ಪ್ರದೇಶ ವೀಕ್ಷಿಸಿದ ಚಾಮರಾಜನಗರ ಡಿಸಿ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜೂ 22: ಚಾಮರಾಜನಗರ ಹಾಗೂ ರಾಮನಗರದ ನಡುವೆ ಇರುವ ಮೇಕೆದಾಟು ಪ್ರದೇಶಕ್ಕೆ ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಭೇಟಿ ನೀಡಿ ಅಲ್ಲಿನ ಪ್ರದೇಶ ವೀಕ್ಷಿಸಿದರು.

ಚಾಮರಾಜನಗರ ಹಾಗೂ ರಾಮನಗರ ಗಡಿ ಕಾವೇರಿ ನದಿ ಆಗಿದ್ದು ಮೇಕೆದಾಟಿಗೆ ಭೇಟಿ ಕೊಟ್ಟು ಜಿಲ್ಲೆಯ ಗಡಿ, ಸಂಗಮ, ಪಾಲಾರ್, ಹೊಗನೇಕಲ್ ಜಲಪಾತದ ಸ್ಥಳಗಳನ್ನು ಭೂಪಟದಲ್ಲಿ ನೋಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮಾಧ್ಯಮ ದೂರವಿಟ್ಟು ಕಾಡು ಸುತ್ತಿದ ಅರಣ್ಯ ಸಚಿವ ಉಮೇಶ್ ಕತ್ತಿಮಾಧ್ಯಮ ದೂರವಿಟ್ಟು ಕಾಡು ಸುತ್ತಿದ ಅರಣ್ಯ ಸಚಿವ ಉಮೇಶ್ ಕತ್ತಿ

ಕಾವೇರಿ ವನ್ಯಜೀವಿಧಾಮದ ಎಸಿಎಫ್ ಅಂಕರಾಜು ಮಾಹಿತಿ ಪಡೆದರು. ಮೇಕೆದಾಟು ಅಣೆಕಟ್ಟು ಯೋಜನೆ ಸಂಬಂಧ ಜಿಲ್ಲಾಧಿಕಾರಿ ಭೇಟಿ ನೀಡಿರಲಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು. ಹನೂರು ತಾಲೂಕಿನ ಗಾಣಿಗಮಂಗಲಕ್ಕೆ ಭೇಟಿ ಕೊಟ್ಟಿದ್ದ ಜಿಲ್ಲಾಧಿಕಾರಿಗಳು ಗಡಿಭಾಗವನ್ನು ನೋಡಲು ಮೇಕೆದಾಟುವಿಗೆ ಬಂದಿದ್ದರು.

Deputy Commissioner Charulata Somal Visits Mekedatu Area

ಬೆಂಗಳೂರು ನಗರಕ್ಕಿಂತ ಸುಮಾರು 90 ಕಿ. ಮೀ. ದೂರದಲ್ಲಿರುವ ರಾಮನಗರದ ಜಿಲ್ಲೆಯ ಹನೂರು ಅರಣ್ಯ ವಲಯದ ಗುಡ್ಡೆಯ ನಡುವೆ ಒಂಟಿಗುಂಡು ಸ್ಥಳದಲ್ಲಿ ಹರಿಯುವ ಕಾವೇರಿ ನದಿ ಪ್ರದೇಶಕ್ಕೆ ಮೇಕೆದಾಟು ಎಂಬ ಹೆಸರು ಇದೆ.

ವಿನೂತನ ಪ್ರಯತ್ನ; ಹಾಡಿಯ ಜನರಿಗೆ 24×7 ಸಾರಿಗೆ ವಾಹನವಿನೂತನ ಪ್ರಯತ್ನ; ಹಾಡಿಯ ಜನರಿಗೆ 24×7 ಸಾರಿಗೆ ವಾಹನ

ಕಾವೇರಿ ನದಿಯು ಅತ್ಯಂತ ರಭಸದಿಂದ ಹರಿದು ಬಂಡೆಗಳನ್ನು ಕೊರೆದು ವಿಚಿತ್ರ ಆಕೃತಿಗಳನ್ನು ಮೂಡಿಸಿದೆ. ಈ ಸ್ಥಳದಲ್ಲಿ ಆಹಾರ ತಿನ್ನಲು ಬರುವ ಮೇಕೆಗಳು ದಾಟುವ ಕಾರಣಕ್ಕಾಗಿ ಈ ಪ್ರದೇಶ ಹೆಸರು ಮೇಕೆದಾಟು ಎಂದು ಕರೆಯಲಾಗುತ್ತಿದೆ.

ಜನರ ಸಮಸ್ಯೆ ಪರಿಹರಿಸಲು ಸೂಚನೆ; ಮೇಕೆದಾಟುವಿಗೂ ಮುನ್ನ ಜಿಲ್ಲಾಧಿಕಾರಿಗಳು ಗಾಣಿಗ ಮಂಗಲದಲ್ಲಿ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ದೊರೆಯುವ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಜನರ ಸಮಸ್ಯೆಗಳನ್ನು ಶೀಘ್ರ ಪರಿಹರಿಸಬೇಕು ಎಂದು ಸೂಚಿಸಿದರು.

Deputy Commissioner Charulata Somal Visits Mekedatu Area

ಸರ್ಕಾರದ ವತಿಯಿಂದ ಮೂಲ ಸೌಕರ್ಯ ಕಲ್ಪಿಸುವ ಸಂಬಂಧ 1 ಕೋಟಿ ರೂ‌. ಅನುದಾನ ದೊರಕಿದ್ದು, ಕಾಮಗಾರಿಯ ಜವಾಬ್ದಾರಿಯನ್ನು ಕೆಆರ್ ಐಡಿಎಲ್ ಗೆ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಹೇಳಿದರು.

ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಮೇಕೆದಾಟು ಪರಿಸರದಲ್ಲಿ ಜಲಾಶಯ ನಿರ್ಮಾಣ ಮಾಡಿ, ಮಳೆಗಾಲದ ಸಂದರ್ಭದಲ್ಲಿ ಸಮುದ್ರ ಪಾಲಾಗುವ ಅಂದಾಜು 65-66 ಟಿಎಂಸಿ ಹೆಚ್ಚುವರಿ ನೀರನ್ನು ಸಂಗ್ರಹಿಸಬೇಕು ಎಂಬುದು ರಾಜ್ಯದ ಉದ್ದೇಶ. ಅಷ್ಟೇ ಅಲ್ಲದೆ ರಾಜ್ಯಕ್ಕೆ ಅಗತ್ಯವಿರುವ ವಿದ್ಯುತ್‌ ಉತ್ಪಾದನೆಗೂ ಈ ಯೋಜನೆಯಿಂದ ಅನುಕೂಲವಾಗಲಿದೆ.

Recommended Video

ಮಹಾಸರ್ಕಾರಕ್ಕೆ ಸಿಡಿಲು ಬಡಿದಿರುವಾಗ್ಲೇ CM Uddhav Thackeray ಗೆ ಕೊರೊನಾ | *Politics | OneIndia Kannada

English summary
Chamarajanagar deputy commissioner Charulatha Soma visited Mekedatu area and inspect the spot. Area in between Ramanagara and Chamarajanagar district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X