ಲಸಿಕೆ ಪಡೆದಿದ್ದ ಚಾಮರಾಜನಗರ ಡಿಸಿಗೆ ಕೋವಿಡ್
ಚಾಮರಾಜನಗರ, ಏಪ್ರಿಲ್ 5; ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಜಿಲ್ಲಾಧಿಕಾರಿಗಳು 2 ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿದ್ದರು.
ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರಿಗೆ ಎರಡು ದಿನಗಳಿಂದ ನೆಗಡಿ, ಗಂಟಲು ನೋವು ಕಾಣಿಸಿಕೊಂಡಿತ್ತು. ಶನಿವಾರ ಅವರ ಗಂಟಲು ದ್ರಮ ಮಾದರಿ ಪರೀಕ್ಷೆಯನ್ನು ಮಾಡಲಾಗಿತ್ತು. ಭಾನುವಾರ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ.
ಜಿಲ್ಲಾಧಿಕಾರಿಗಳು ಹೋಂ ಐಸೋಲೇಷನ್‌ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳು ಎರಡು ಡೋಸ್‌ನ ಕೋವಿಶೀಲ್ಡ್ ಲಸಿಕೆಯನ್ನು ಪಡೆದಿದ್ದರು.

ಡಾ. ಎಂ. ಆರ್. ರವಿ ಫೆಬ್ರವರಿ 8ರಂದು ಮೊದಲ ಡೋಸ್, ಮಾರ್ಚ್ 8ರಂದು ಎರಡನೇ ಡೋಸ್ ಲಸಿಕೆಯನ್ನು ಪಡೆದಿದ್ದರು. ಎರಡನೇ ಡೋಸ್ ಲಸಿಕೆ ಪಡೆದ 27 ದಿನಗಳ ನಂತರ ಸೋಂಕು ತಗುಲಿದೆ.
ಭಾನುವಾರ ಚಾಮರಾಜನಗರ ಜಿಲ್ಲೆಯಲ್ಲಿ 15 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 7141ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳು 75.
ಕರ್ನಾಟಕದಲ್ಲಿ ಏಪ್ರಿಲ್ 1ರಿಂದ ಕೋವಿಡ್ ಲಸಿಕಾ ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.
45 ವರ್ಷ ಮೇಲ್ಪಟ್ಟ ಎಲ್ಲರೂ ಸಹ ಕೋವಿಡ್ ಲಸಿಕೆಯನ್ನು ಹತ್ತಿರದ ಸರ್ಕಾರಿ/ ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯಬಹುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಉಚಿತವಾಗಿದೆ.












Click it and Unblock the Notifications