ಚಾಮರಾಜನಗರ: ಆಸ್ಪತ್ರೆ, ಇಂದಿರಾ ಕ್ಯಾಂಟೀನ್, ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ
ಚಾಮರಾಜನಗರ, ಆಗಸ್ಟ್, 02: ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪನಾಗ್ ಅವರು ಚಾಮರಾಜನಗರದ ಇಂದಿರಾ ಕ್ಯಾಂಟೀನ್, ಆಸ್ಪತ್ರೆ, ಹಾಸ್ಟೆಲ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೊದಲು ಜಿಲ್ಲಾಧಿಕಾರಿ ಕಚೇರಿಯ ಗೇಟ್ ಬಳಿ ಪಕ್ಕದ ಇಂದಿರಾ ಕ್ಯಾಂಟೀನ್‌ಗೆ ಅನಿರೀಕ್ಷಿತ ಭೇಟಿ ನೀಡಿ ಅಡುಗೆ ಸಾಮಾಗ್ರಿಗಳು, ದಿನಸಿ ದಾಸ್ತಾನು ವೀಕ್ಷಣೆ ಮಾಡಿದರು. ನಂತರ ಶುಚಿತ್ವ, ಆಹಾರ ವಿತರಣೆ, ಮೆನು, ರಾತ್ರಿ ಗ್ರಾಹಕರಿಗೆ ವಿತರಿಸಲು ಸಿದ್ಧಪಡಿಸಲಾಗಿದ್ದ ರೈಸ್ ಬಾತ್ ಅನ್ನು ಸೇವಿಸಿ ಗುಣಮಟ್ಟ ಪರಿಶೀಲಿಸಿದರು.

ಇನ್ನು ಈ ಬಗ್ಗೆ ಮಾತನಾಡಿದ ಅವರು, ಪ್ರತಿದಿನ ಟೋಕನ್ ವಿತರಿಸಬೇಕು. ಆ ಪ್ರಕಾರವೇ ಆಹಾರ ನೀಡಬೇಕು. ಆಹಾರದಲ್ಲಿ ಗುಣಮಟ್ಟ, ನಿಗದಿತ ಪ್ರಮಾಣ, ಶುಚಿತ್ವ ಕಾಪಾಡಿಕೊಳ್ಳಬೇಕು. ಎಲ್ಲಿಯೂ ಲೋಪಗಳಾಗಾದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಹಾಗೆಯೇ ಕ್ಯಾಂಟೀನ್‌ಗೆ ಸಿ.ಸಿ.ಕ್ಯಾಮೆರಾವನ್ನು ಅಳವಡಿಸಬೇಕು. ಪ್ರತಿನಿತ್ಯ ಎಷ್ಟು ಮಂದಿಗೆ ಆಹಾರ ವಿತರಿಸಲಾಗಿದೆ ಎಂಬ ಪೂರ್ಣ ವರದಿ ಲೆಕ್ಕಪತ್ರ ಸಲ್ಲಿಸುವಂತೆ ಕ್ಯಾಂಟೀನ್ ನಿರ್ವಾಹಕರಿಗೆ ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು.
ಬಳಿಕ ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಇರುವ ತಾಯಿ-ಮಕ್ಕಳ ಆಸ್ಪತ್ರೆ ಹಾಗೂ ತುರ್ತು ನಿಗಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದೆ ವೇಳೆ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯರ ಆರೋಗ್ಯ ವಿಚಾರಿಸಿದರು. ಚಿಕಿತ್ಸೆ ಹೇಗೆ ನೀಡಲಾಗುತ್ತಿದೆ? ವೈದ್ಯಕೀಯ ಸೇವೆ ಸರಿಯಾಗಿ ಸಿಗುತ್ತಿದೆಯೇ ಎಂದು ಪ್ರಶ್ನಿಸಿದರು.
ತೀವ್ರತರ ಮಕ್ಕಳ ನಿಘಾ ಘಟಕ, ಅಪೌಷ್ಟಿಕತೆ ಮಕ್ಕಳ ನಿರ್ವಹಣೆ ವಿಭಾಗಕ್ಕೂ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಅಪೌಷ್ಟಿಕತೆ ನಿವಾರಣೆಗೆ ಅನುಸರಿಸಲಾಗುತ್ತಿರುವ ವಿಧಾನಗಳ ಬಗ್ಗೆ ಮಾಹಿತಿ ಪಡೆದರು. ಈ ಸಂಬಂಧಿಸಿದಂತೆ ಅಗತ್ಯವಾದ ಸೂಚನೆ ನೀಡಿದರು. ನಂತರ ನಗರದ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ಹಾಸ್ಟೆಲ್‌ಗೆ ಭೇಟಿ ನೀಡಿ ಮೂಲ ಸೌಕರ್ಯಗಳು, ಆಹಾರ ಪದಾರ್ಥಗಳ ದಾಸ್ತಾನು ವೀಕ್ಷಿಸಿದರು. ಹಾಗೆಯೇ ವಿದ್ಯಾರ್ಥಿನಿಯರಿಗೆ ಸಿದ್ದ ಮಾಡಿದ್ದ ಊಟದ ರುಚಿ ನೋಡಿ ಗುಣಮಟ್ಟ ಪರಿಶೀಲಿಸಿ ವಿದ್ಯಾರ್ಥಿನಿಯರ ಅಹವಾಲಗಳನ್ನು ಆಲಿಸಿದರು.












Click it and Unblock the Notifications