ಗುಂಡ್ಲುಪೇಟೆ: ಮುಂಗಾರು ಮಳೆ ಆರ್ಭಟದಿಂದ ಈ ಗ್ರಾಮಸ್ಥರಿಗೆ ದೇವರಕೆರೆ ಒಡೆಯುವ ಭೀತಿ

ಚಾಮರಾಜನಗರ, ಜೂನ್‌, 06: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಚುರುಕು ಪಡೆದಿದ್ದು, ಜಲಮೂಲಗಳಿಗೆ ಜೀವಕಳೆ ಬಂದಂತಾಗಿದೆ. ಹಾಗೆಯೇ ಗುಂಡ್ಲುಪೇಟೆ ತಾಲೂಕಿನ ಹೊನ್ನಶೆಟ್ಟರಹುಂಡಿ ಗ್ರಾಮದಲ್ಲಿ ಮುಂಗಾರು ಮಳೆ ಆರ್ಭಟಕ್ಕೆ ದೇವರಕೆರೆ ಹಾಗೂ ಅಗಸನ ಕಟ್ಟೆ ತುಂಬಿ ಏರಿ ಮೇಲೆ ನೀರು ಹರಿಯುತ್ತಿದೆ.

ಇಂದು (ಜೂನ್‌ 06) ಸುರಿದ ಅಬ್ಬರದ ಮಳೆಗೆ ಕೆರೆ ನೀರಿನ ಪ್ರಮಾಣ ಹೆಚ್ಚಾಗುತ್ತಲೇ ಇದ್ದು, ಕೋಡಿ ಸರಿಯಿಲ್ಲದ ಕಾರಣ ಏರಿ‌ ಮೇಲೆ ನೀರು ಹರಿಯುತ್ತಿದ್ದು, ಕೆರೆಗಳು ಒಡೆಯುವ ಭೀತಿಯಲ್ಲಿ ಗ್ರಾಮಸ್ಥರು ಇದ್ದಾರೆ.

Devarakere Lake full fill in Honnashettarahundi village due to heavy rain

ಒಂದು ವೇಳೆ ಕೆರೆಗಳು ಒಡೆದರೇ ರೈತರು ಬೆಳೆದ ನೂರಾರು ಹೆಕ್ಟೇರ್‌ ಫಸಲು ನಾಶವಾಗುವ ಭೀತಿ ಎದುರಾಗಿದ್ದು, ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಿ ಸೂಕ್ತ ಪರಿಹಾರ ಮಾರ್ಗವನ್ನು ಕಂಡುಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹನೂರಲ್ಲಿ ಮನೆ ಕುಸಿತ: ಗುರುವಾರ (ಜೂನ್‌ 06) ಸಂಜೆ ಸುರಿದ ಭಾರೀ ಮಳೆಗೆ ಹನೂರು ಪಟ್ಟಣದಲ್ಲಿ ಕುಮಾರ್ ಎಂಬುವವರ ಮನೆಯ ಗೋಡೆ ಕುಸಿದು ಬಿದ್ದು, 50,000ಕ್ಕೂ ಹೆಚ್ಚು ಮೌಲ್ಯದ ಸಾಮಗ್ರಿಗಳು ನಾಶವಾಗಿರುವ ಘಟನೆ ನಡೆದಿದೆ.

ಹನೂರು ಪಟ್ಟಣದ ನಿವಾಸಿ ಕುಮಾರ್ ಎಂಬುವವರ ಮನೆಯ ಗೋಡೆ ಕುಸಿದು 10ಕ್ಕೂ ಹೆಚ್ಚು ಶೀಟ್‌ಗಳು ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೊಸದಾಗಿ ಮಳಿಗೆ ಮಾಡಲು ಸಿದ್ಧತೆ ಕೈಗೊಳ್ಳಲಾಗಿತ್ತು. ಏಕಾಏಕಿ ಗೋಡೆ ಕುಸಿದ ಪರಿಣಾಮ ಹತ್ತಕ್ಕೂ ಹೆಚ್ಚು ಶೀಟ್‌ಗಳು, ಪೈಪ್‌ಗಳು ಜಖಂಗೊಂಡಿದೆ. ಇದರಿಂದ ಸುಮಾರು 50,000 ಮೌಲ್ಯದ ವಸ್ತುಗಳು ನಾಶವಾಗಿವೆ ಎಂದು ತಿಳಿದುಬಂದಿದೆ.

ರಸ್ತೆಗಳು, ಜಮೀನು ಜಲಾವೃತ: ಚಾಮರಾಜನಗರ ಜಿಲ್ಲೆಯಲ್ಲಿ ಗುರುವಾರ ಸಂಜೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದು, ಮುಂಗಾರು ಆರ್ಭಟಕ್ಕೆ ಇಲ್ಲಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕು ಭಾಗದಲ್ಲಿ ಜೋರು ಮಳೆಯಾಗಿದ್ದು, ರಸ್ತೆಗಳ ಮೇಲೆ ಹೊಳೆಯಂತೆ ನೀರು ಹರಿದ ಪರಿಣಾಮ ವಾಹನ ಸಂಚಾರವೇ ಅಸ್ತವ್ಯಸ್ತವಾಗಿದೆ. ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಕರ್ನಾಟಕ ಗಡಿಯಾದ ಪುಣಜನೂರು ಗೇಟ್‌ನಲ್ಲೂ ವರುಣ ಆರ್ಭಟಕ್ಕೆ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.

ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿ ಗ್ರಾಮದ ಸೇತುವೆ ಮೇಲೆ ನೀರು ಹರಿದ ಪರಿಣಾಮ ವಡ್ಡರ ಹೊಸಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದ್ದಾಗಿದ್ದು ನೀರಿನ ಹರಿವು ಕಡಿಮೆ ಆಗುವುದನ್ನೇ ಜನರು ಕಾಯುತ್ತಿದ್ದಾರೆ.

ಅಣ್ಣೂರುಕೇರಿ ಗ್ರಾಮದ ಉಪ್ಪಾರ ಸಮುದಾಯ ಭವನಕ್ಕೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದ್ದು, ಅಣ್ಣೂರುಕೇರಿ ಗ್ರಾಮದ ಹಲವು ಬೀದಿಗಳು ಜಲಾವೃತವಾಗಿದೆ.

ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿ ಹಾಗೂ ತೊಂಡವಾಡಿ ಸ‌ಂಪರ್ಕ ರಸ್ತೆಯೇ ಮುಳುಗಡೆಯಾಗಿದ್ದು ವಾಹನ ಸಂಚಾರ ಬಂದ್ದಾಗಿದೆ. ಮೈಸೂರು- ಊಟಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಹಿರಿಕಾಟಿ ಗೇಟ್ ನಲ್ಲಿ ನೀರು ಹರಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಕಷ್ಟಸಾಧ್ಯವಾಗಿತ್ತು

ಗುಂಡ್ಲುಪೇಟೆ ತಾಲೂನಿನ ಬೊಮ್ಮಲಾಪುರ, ಶಿವಪುರ, ನೇನೆಕಟ್ಟೆ, ಮಂಚಹಳ್ಳಿ ಭಾಗಗಳಲ್ಲಿ ಜೋರು ಮಳೆಗೆ ಜಮೀನುಗಳು ಜಲಾವೃತವಾಗಿದ್ದು ಹಲವು ಕಟ್ಟೆಗಳು ತುಂಬಿ ಹರಿಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+