Heavy Rain: ರಣಭೀಕರ ಮಳೆ ನಡುವೆಯೂ ಮಲೆ ಮಾದಪ್ಪನಿಗೆ ಉರುಳುಸೇವೆ
ಚಾಮರಾಜನಗರ, ಡಿಸೆಂಬರ್, 01: ಇದೀಗ ಭೀಕರ ಚಳಿಯ ನಡುವೆಯೂ ಫೆಂಗಲ್ ಚಂಡಮಾರುತದ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಚಾಮರಾಜನಗರ ಜಿಲ್ಲೆಗೆ ಹವಾಮಾನ ಇಲಾಖೆಯು ಸೋಮವಾರಕ್ಕೆ ಅಂದರೆ ಡಿಸೆಂಬರ್ 2ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಚಾಮರಾಜನಗರ ಜಿಲ್ಲಾದ್ಯಂತ ಸದ್ಯ ಮೋಡ ಕವಿದ ವಾತಾವರಣ ಇದ್ದು, ಅಗಾಗ್ಗೆ ತುಂತುರು ಮಳೆಯಾಗುತ್ತಿದೆ. ಇಂದು ಬಹುತೇಕ ಕಡೆ ತುಂತುರು ಮಳೆಯಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದ್ದು, ಅಲ್ಲಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಚಂಡಮಾರುತದ ಸಮಯದಲ್ಲಿ ಗಾಳಿ ವೇಗವು ಹೆಚ್ಚಾಗಿರುವುದರಿಂದ ಮರಗಳು, ದೂರವಾಣಿ ಅಥವಾ ವಿದ್ಯುತ್ ತಂತಿಗಳ ಕೆಳಗೆ ನಿಲ್ಲುವುದು ಅಪಾಯ. ತಗ್ಗು ಪ್ರದೇಶದಿಂದ ಎತ್ತರದ ಪ್ರದೇಶಕ್ಕೆ ಹೋಗುವುದು ಉತ್ತಮ, ಶಿಥಿಲಗೊಂಡಿರುವ ಕಟ್ಟಡಗಳಲ್ಲಿ ಇರುವುದು ಅಪಾಯ, ಜಾನುವಾರುಗಳನ್ನು ಎತ್ತರದ ಮತ್ತು ಸುರಕ್ಷಿತ ಕಟ್ಟಡಗಳಲ್ಲಿ ಇರಿಸಬೇಕು ಎಂದು ಸೂಚನೆ ನೀಡಲಾಗಿದೆ.
ಮಾದಪ್ಪನ ಬೆಟ್ಟದಲ್ಲಿ ಜೋರು ಮಳೆ: ಪ್ರಸಿದ್ಧ ಯಾತ್ರ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭರ್ಜರಿ ಮಳೆಯಾಗಿದೆ. ಅಮವಾಸ್ಯೆ ಮತ್ತು ಭಾನುವಾರ ಹಿನ್ನೆಲೆ ಭಕ್ತಸಾಗರವೇ ದೇವಾಲಯಕ್ಕೆ ಹರಿದು ಬಂದಿದೆ. ಮಳೆ ನಡುವೆಯೂ ಅಮಾವಾಸ್ಯೆ ಪೂಜೆಗೆ ಸಹಸ್ರಾರು ಮಂದಿ ಭಕ್ತರು ಆಗಮಿಸಿದ್ದು, ಮಳೆ ನಡುವೆಯೇ ಉರುಳುಸೇವೆ ಮಾಡಿ ಮಾದಪ್ಪನಿಗೆ ಭಕ್ತರು ಹರಕೆ ತೀರಿಸುತ್ತಿರುವುದು ಕಂಡುಬಂದಿತು.
ಈ ತಾಣಗಳಿಗೆ ಭೇಟಿ ನೀಡುವುದನ್ನು ಮರೆಯದಿರಿ: ದಕ್ಷಿಣ ಭಾರತದ ಪ್ರಮುಖ ಯಾತ್ರಸ್ಥಳಗಳಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕೂಡ ಒಂದಾಗಿದೆ. ಇಲ್ಲಿದೆ ವಾರಾಂತ್ಯ, ಸೋಮವಾರ ಹಾಗೂ ಅಮಾವಾಸ್ಯೆ ದಿನಗಳಂದು ಅಪಾದ ಸಂಖ್ಯೆಯಲ್ಲಿ ಭಕ್ತರ ದಂಡೇ ಹರಿದುಬರುತ್ತದೆ. ಒಂದು ವೇಳೆ ನೀವು ಇಲ್ಲಿಗೆ ಪ್ರವಾಸದ ಯೋಜನೆ ಕೈಗೊಂಡಿದ್ದರೆ, ಮಾದಪ್ಪನ ದರ್ಶನದ ಜೊತೆಗೆ ಈ ಹಲವು ಪ್ರಸಿದ್ಧ ತಾಣಗಳನ್ನು ಕೂಡ ನೋಡಬಹುದಾಗಿದೆ.
ಮಲೆ ಮಹದೇಶ್ವರ ಕೇಳಿದ್ದನ್ನು ಶೀಘ್ರವಾಗಿ ದಯಪಾಲಿಸುವ ಕರುಣಾಮಯಿ ಅಂಥಲೇ ನಂಬಿಕೆ ಇದ್ದು, ಅದೇ ರೀತಿ ಭಕ್ತರ ಇಷ್ಟಾರ್ಥಗಳು ಈಡೇರುತ್ತವೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದ ಬಳಿಕ ಕೆಲವೊಂದು ಸ್ಥಳಗಳಿಗೂ ನೀವು ಹೋಗಿ ನಿಮ್ಮ ಪ್ರವಾಸವನ್ನು ಮತ್ತಷ್ಟು ಮೆಮೊರಬಲ್ ಮಾಡಬಹುದಾಗಿದೆ.
ಹೊಗೆನಕಲ್ ಜಲಪಾತ: ಭಾರತದ ನಯಾಗರ ಅಂಥಲೇ ಕರೆಯುವ ಹೊಗೆನಕಲ್ ಜಲಪಾತವು ಕರ್ನಾಟಕ ಮತ್ತು ತಮಿಳುನಾಡಿನ ಗಡಿಯಲ್ಲಿದೆ. ಕಲ್ಲುಗಳ ನಡುವೆ ರಭಸದಿಂದ ಧುಮ್ಮಿಕ್ಕುವ, ಮರಳಿನ ನಡುಗಡ್ಡೆಯಲ್ಲಿ ಕುಳಿತು ಕಾವೇರಿ ವಿಶಾಲ ಹರಿವನ್ನು ಕಾಣುವುದೇ ರುದ್ರ ರಮಣೀತವಾಗಿದೆ. ಇಲ್ಲಿ ತೆಪ್ಪ ಸವಾರಿ ಮೂಲಕ ತಮಿಳುನಾಡಿನ ಭಾಗದ ಜಲಪಾತಕ್ಕೂ ಹೋಗಬಹುದಾಗಿದ್ದು, ಚೆಂದನೆಯ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. ಮೀನಿನ ಊಟ, ಮಸಾಜ್, ಆಟೋಟಗಳು ಕೂಡ ಇಲ್ಲಿ ಜನಪ್ರಿಯ.
ಹಿಮವದ್ ಗೋಪಾಲಸ್ವಾಮಿ ಬೆಟ್ಟ: ಜಿಲ್ಲೆಯ ಪುರಾಣ ಪ್ರಸಿದ್ಧ ಕ್ಷೇತ್ರವಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹಾಗೂ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಸ್ವಾಮಿ ಬೆಟ್ಟವಂತೂ ಹಸಿರಿನ ಜೊತೆ ಮಂಜಿನ ಹೊದಿಕೆ ಹೊದ್ದಿರುತ್ತದೆ. ಬೆಳಗ್ಗೆ 9 ಗಂಟೆ ಆದರೂ ಮಂಜು ಮುಸುಕಿದ ವಾತಾವರಣ ಇರುತ್ತದೆ. ಇಲ್ಲಿನ ಈ ಅದ್ಭುತ ವಾತಾವರಣ ಮನಸಿಗೆ ಇಂಪು ನೀಡುತ್ತಲೇ ಇರುತ್ತದೆ. ಇದು ಬೆಂಗಳೂರಿನಿಂದ ಸುಮಾರು 220 ಕಿ.ಮೀ. ಆದರೆ ಮೈಸೂರಿನಿಂದ 80 ಕಿಲೋ ಮೀಟರ್ ದೂರದಲ್ಲಿದೆ.
ಗೋಪಾಲಸ್ವಾಮಿ ಬೆಟ್ಟದ ವಿಶೇಷತೆ ಏನು?: ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಬಂಡೀಪುರ ರಾಷ್ಟ್ರೀಯ ಉದ್ಯಾನದ ಅತೀ ಎತ್ತರದ ಶಿಖರವಾಗಿದೆ. ಗುಂಡ್ಲುಪೇಟೆ ಬಳಿಯಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ವೇಣುಗೋಪಾಲಸ್ವಾಮಿ ದೇವಾಲಯ ಮತ್ತು ಹಚ್ಚ ಹಸಿರಿನಿಂದ ಕೂಡಿದ ನೈಸರ್ಗಿಕ ಪರಿಸರದಿಂದಾಗಿ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಲೇ ಇದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications