Basangouda Patil Yatnal: ಡಿಸೆಂಬರ್‌ನಲ್ಲಿ ರಾಜ್ಯ ಸರ್ಕಾರ ದಿವಾಳಿ, ಆರೋಗ್ಯ ಸರಿಯಾದ ಬಳಿಕ ಡಿಕೆಶಿಗೆ ಜೈಲೂಟ ಫಿಕ್ಸ್‌

ಚಾಮರಾಜನಗರ, ನವೆಂಬರ್‌, 06: ಡಿಸೆಂಬರ್‌ನಲ್ಲಿ ರಾಜ್ಯ ಸರ್ಕಾರ ದಿವಾಳಿ ಆಗಲಿದೆ ಹಾಗೂ ಆರೋಗ್ಯ ಸರಿಯಾದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಜೈಲೂಟ ಫಿಕ್ಸ್‌ ಎಂದು ಶಾಸಕ ಬಸವನಗೌಡ ಯತ್ನಾಳ್ ಚಾಮರಾಜನಗರದಲ್ಲಿ ಭವಿಷ್ಯ ನುಡಿದಿದ್ದಾರೆ.

ಚಾಮರಾಜನಗರದಲ್ಲಿ ಬರ ಅಧ್ಯಯನ ನಡೆಸಿ ಮಾಧ್ಯಮವರೊಟ್ಟಿಗೆ ಮಾತನಾಡಿದ ಅವರು, ಡಿಸೆಂಬರ್ ವೇಳೆಗೆ ರಾಜ್ಯ ಸರ್ಕಾರ ದಿವಾಳಿ ಆಗುತ್ತದೆ. ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ, ಮತ್ತೊಬ್ಬರು ಸಿಎಂ ಆಗುತ್ತೇನೆ ಎಂಬ ಕನಸಿನಲ್ಲಿದ್ದಾರೆ ಎಂದು ಲೇವಡಿ ಮಾಡಿದರು.

DK Shivakumar will go to jail after health improves: Basangouda Patil Yatnal Prediction

ಹೈಬಿಪಿ ಹೈ ಶುಗರ್‌ನಿಂದಾಗಿ ಜಾಮೀನು ಪಡೆದು ಡಿ.ಕೆ.ಶಿವಕುಮಾರ್ ಹೊರಗಿದ್ದಾರೆ. ಆರೋಗ್ಯ ಸರಿಹೋದ ಕೂಡಲೇ ಮತ್ತೆ ಜೈಲಿಗೆ ಹೋಗುತ್ತಾರೆ, ಆ ನಿಟ್ಟಿನಲ್ಲಿ ವಕೀಲರ ತಂಡ ದೆಹಲಿಗೆ ಹೋಗಿದೆ. ವಕೀಲರ ತಂಡ ಯಾವ ಫ್ಲೈಟ್‌ನಲ್ಲಿ ಹೋಗಿದ್ದಾರೆ ಎಂಬುದನ್ನು ಡಿಸಿಎಂ ಹೇಳಬೇಕು ಎಂದು ಡಿ.ಕೆ.ಶಿವಕುಮಾರ್‌ ವಿರುದ್ಧ ಹೊಸ ಬಾಂಬ್ ಸಿಡಿಸಿದರು.

ರಾಜ್ಯ ಸರ್ಕಾರ ಇದುವರೆಗೆ ಬರದ ಬಗ್ಗೆ ಸರಿಯಾಗಿ ಮಾಹಿತಿ ಸಂಗ್ರಹಿಸಿಲ್ಲ, ಒಂದೊಂದು ಬಾರಿ ಒಂದೊಂದು ವರದಿ ಕೊಡುತ್ತಿದ್ದಾರೆ. ರಾಜ್ಯಕ್ಕೆ ಬರಗಾಲ ಸಿಎಂ ಸಿದ್ದರಾಮಯ್ಯ ಅವರ ಕೊಡುಗೆ, ಸಿದ್ದರಾಮಯ್ಯ ಅವರ ಕಾಲ್ಗುಣದಿಂದ ರಾಜ್ಯಕ್ಕೆ ಬರ ಬಂದಿದೆ ಎಂದು ಟೀಕಿಸಿದರು.

ನಾವು ಇಂದು ಚಾಮರಾಜನಗರ ಜಿಲ್ಲೆಯಲ್ಲಿ ಬರ ಅಧ್ಯಯನ ಆರಂಭಿಸಿದ್ದೇವೆ, ನಾವು ಬಂದ ಮೇಲೆ ನಮ್ಮ ಕಾಲ್ಗುಣದಿಂದ ಈಗ ಮಳೆ ಬಂದಿದೆ, ನಾಳೆ ಮೈಸೂರಿನಲ್ಲಿ ಅಧ್ಯಯನ ಮಾಡುತ್ತೇವೆ, ಈಗಾಗಲೇ ಬೆಳೆ ನಷ್ಟ ಅನುಭವಿಸಿರುವ ರೈತರ ಹೊಲಗಳಿಗೆ ಭೇಟಿ ನೀಡಿದ್ದೇವೆ. ಸಾಕಷ್ಟು ಕಡೆ ಬೆಳೆ ನಷ್ಟ ಆಗಿದೆ. ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ ಎಂದರು.

ಬರ ಪರಿಸ್ಥಿತಿಯಲ್ಲಿ ನೊಂದ ರೈತರ ನೆರವಿಗೆ ಸರ್ಕಾರ ಮುಂದಾಗಿಲ್ಲ, ಎಸ್ಸಿಪಿ/ಟಿಎಸ್ಪಿ ಸೇರಿದಂತೆ ಎಲ್ಲಾ ಹಣವನ್ನು ಗ್ಯಾರೆಂಟಿ ಯೋಜನೆಗೆ ಬಳಸಿಕೊಂಡಿದ್ದಾರೆ ಎಂದು ಕಿಡಿಕಾರಿದರು.

ಸಾಣೆಹಳ್ಳಿ ಶ್ರೀ ವಿರುದ್ಧ ಆಕ್ರೋಶ

ಗಣಪತಿ ಪೂಜೆ ವಿಚಾರದಲ್ಲಿ ಪಂಡಿತಾರಾದ್ಯ ಶ್ರೀಗಳ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯಿಸಿ, ಅವರು ಕಮ್ಯೂನಿಸ್ಟ್ ಅಥವಾ ನಕ್ಸಲೈಟ್ ಆಗಬೇಕಿತ್ತು. ಪ್ರಶಸ್ತಿಗಾಗಿ ಕೆಲವು ಮಠಾಧೀಶರು ಹಿಂದೂ ವಿರೋಧಿ ಹೇಳಿಕೆ ಕೊಡುತ್ತಾರೆ. ಕೋಟಿ ಕೋಟಿ ಅನುದಾನಕ್ಕಾಗಿ ಈ ರೀತಿ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದರು‌.

25 ಜನ ಸಂಸದರು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಮಾತನಾಡಿ, ಬರ ಪರಿಸ್ಥಿತಿ ವಿಚಾರವಾಗಿ ಅವರು ಸಭೆ ಕರೆಯಲಿಲ್ಲ. ಸಂಸದರ ಸಭೆ ಕರೆದು ಬರದ ಬಗ್ಗೆ ಚರ್ಚೆ ನಡೆಸಿಲ್ಲ, ಸಂಸದರ ಬಗ್ಗೆ ಮಾತನಾಡುವ ನೈತಿಕತೆ ಸಿಎಂ ಸಿದ್ದರಾಮಯ್ಯಗೆ ಇಲ್ಲ ಎಂದು ಆಕ್ರೋಶ ಹೊರಹಾಕಿದರು‌.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+