ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡೋಲಿ ಮೂಲಕ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆತಂದ ಜನ: ಇದು ಸರ್ಕಾರ ತಲೆತಗ್ಗಿಸುವ ಘಟನೆ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜು. 1: ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ಕಾಣಿಸಿಕೊಂಡಿದ್ದರಿಂದ ಡೋಲಿ ಕಟ್ಟಿ 8 ಕಿಮೀ ಹೊತ್ತು ಆಸ್ಪತ್ರೆಗೆ ಸಾಗಿಸಿರುವ ಘಟನೆ ಹನೂರು ತಾಲೂಕಿನ ದೊಡ್ಡಾಣೆ ಗ್ರಾಮದಲ್ಲಿ ನಡೆದಿದೆ.

ದೊಡ್ಡಾಣೆ ಗ್ರಾಮದ ಶಾಂತಲಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಯಾವುದೇ ಸಾರಿಗೆ ಸಂಪರ್ಕ ಲಭಿಸದೇ 8 ಕಿಮೀ ದೂರದ ಮಾರ್ಟಳ್ಳಿ ಆಸ್ಪತ್ರೆಗೆ ಡೋಲಿಯಲ್ಲಿ ಸಾಗಿಸಿದ್ದು ಸದ್ಯ ಶಾಂತಲಾ ಅವರ ಚೊಚ್ಚಲ ಹೆರಿಗೆಯಲ್ಲಿ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದು ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

ಚಾಮರಾಜನಗರ; ಈ ಶಾಲೆಯಲ್ಲಿ ಪಾಠದ ಜೊತೆ ಬಿಲ್ಲು, ಕತ್ತಿವರಸೆ ತರಬೇತಿ!ಚಾಮರಾಜನಗರ; ಈ ಶಾಲೆಯಲ್ಲಿ ಪಾಠದ ಜೊತೆ ಬಿಲ್ಲು, ಕತ್ತಿವರಸೆ ತರಬೇತಿ!

ಕಾಡಿನೊಳಗೆ ಇರುವ ಗ್ರಾಮಗಳ ಸಂಪರ್ಕಕ್ಕಾಗಿ ಜನವನ ಸಾರಿಗೆ ಎಂದು ಜೀಪ್ ಗಳನ್ನು ಒದಗಿಸಲಾಗಿದೆ. ಆದರೆ, ಜೀಪ್ ಚಾಲಕ, ಆಂಬುಲೆನ್ಸ್ ಚಾಲಕನಿಗೆ ಮತ್ತು ಅಧಿಕಾರಿಗಳಿಗೆ ಕರೆ ಮಾಡಿದಾಗ ಸ್ವಿಚ್ಡ್ ಆಫ್ ಬಂದಿದ್ದರಿಂದ ಡೋಲಿ ಮೂಲಕ ಹೊತ್ತು ಸಾಗಿಸಿದ್ದಾರೆ.

Chamarajanagar: Doddane villageers carried the pregnant woman to the hospital on dolly

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು, ಸ್ಥಳೀಯರು ಆಕ್ರೋಶ

ಮಲೆ ಮಹದೇಶ್ವರಬೆಟ್ಟ ತಪ್ಪಲಿನ ಅರಣ್ಯ ಗ್ರಾಮಸ್ಥರ ಅನುಕೂಲಕ್ಕಾಗಿ ಜನವನ ಸಾರಿಗೆ ವ್ಯವಸ್ಥೆ ಜಾರಿಗೆ ತಂದಿರುವ ಅರಣ್ಯ ಇಲಾಖೆ ಗರ್ಭಿರ್ಣಿಯರು, ಅನಾರೋಗ್ಯ ಪೀಡಿತರು, ಶಾಲಾ ವಿದ್ಯಾರ್ಥಿಗಳು ಹಾಗು ಗ್ರಾಮಸ್ಥರ ತುರ್ತು ಬಳಕೆಗೆ ಜಾರಿಗೆ ತಂದಿರುವ ಜನವನ ಸಾರಿಗೆ ಸೌಲಭ್ಯ ಇದ್ದೂ ಇಲ್ಲದಂತಾಗಿದೆ. ಅಧಿಕಾರಿಗಳ ಈ ದಿವ್ಯ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶ- ರಾಜ್ಯ‌ ಪ್ರತಿದಿನವೂ ಹೊಸಹೊಸ ತಂತ್ರಜ್ಞಾನಗಳಿಗೆ ತೆರೆದುಕೊಳ್ಳುತ್ತಿದ್ದರೇ ಈ ಗ್ರಾಮಗಳು ಸರಿಯಾದ ರಸ್ತೆ ಸಂಪರ್ಕವೇ ಇಲ್ಲದೇ ಅನಾರೋಗ್ಯಕ್ಕೆ ತುತ್ತಾದರೆ ಡೋಲಿ ಹೊತ್ತು ಸಾಗಿಸಬೇಕಾದ ದುಸ್ಥಿತಿಯಲ್ಲೇ ಇದ್ದಾರೆ.

ರೋಗಿಗಳನ್ನು ಡೋಲಿಯಲ್ಲಿ ಹೊತ್ತು ಸಾಗಬೇಕಿದೆ

ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ಪಡಿಸಲನತ್ತ , ದೊಡ್ಡಾಣೆ ಗ್ರಾಮಕ್ಕೆ ಕಚ್ಚಾ ರಸ್ತೆಯೂ ಇಲ್ಲದಿರುವುದರಿಂದ ಅನಾರೋಗ್ಯಕ್ಕೀಡಾದರೇ ರೋಗಿಗಳನ್ನು ಡೋಲಿಯಲ್ಲಿ ಹೊತ್ತು ಸಾಗಬೇಕಿದೆ.

ಆಸ್ಪತ್ರೆಗೆ ಹೋಗಬೇಕಾದರೆ ಡೋಲಿ- ಪಡಿತರ ತರಬೇಕಾದರೇ ಹೆಗಲೇ ಗತಿ ಎಂಬ ಪರಿಸ್ಥಿತಿ ಇರುವ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಜನರಿಗೆ 24×7 ವಾಹನ ವ್ಯವಸ್ಥೆ ಎಂದು ಕೆಲ ದಿನಗಳ ಹಿಂದೆ ಅರಣ್ಯ ಇಲಾಖೆ ವಾಹನಗಳನ್ನು ನಿಯೋಜಿಸಿತ್ತು. ಆದರೆ, ಚಾಲಕರು, ಅಧಿಕಾರಿಗಳು ಫೋನ್ ಸ್ವಿಚ್ ಆಪ್ಡ್ ಆಗಿದ್ದರಿಂದ ಜನವನ ಸಾರಿಗೆಯಿಂದ ಶಾಂತಲಾ ಕುಟುಂಬಕ್ಕೆ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಕಡಿದಾದ ರಸ್ತೆಗಳಲ್ಲೂ ಸಂಚರಿಸುವ ಸಾಮರ್ಥ್ಯವಿರುವ 4x4x4 ವೀಲ್ ಡ್ರೈವ್‌ನ ಫೋರ್ಸ್‌ ಕಂಪನಿಯ ಗೂರ್ಖಾ ವಾಹನಗಳಿದ್ದರೂ ಡೋಲಿಯೇ ಗಟ್ಟಿಯಾಗಿದ್ದು ವ್ಯವಸ್ಥೆಯ ಮತ್ತೊಂದು ಮುಖಕ್ಕೆ ನಿದರ್ಶನವಾಗಿದೆ.

English summary
Chamarajanagar: Hanur taluku Doddane villagers carried pregnant women to hospital on dolly. Walk 8 KM at night time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X