ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ: ಅಕ್ರಮ ಮರಳು ಸಾಗಾಣಿಕೆಗೆ ಸಹಕಾರ: ಡಿವೈಎಸ್ಪಿ ಅಮಾನತು

|
Google Oneindia Kannada News

ಚಾಮರಾಜನಗರ, ಸೆಪ್ಟೆಂಬರ್ 3: ಅಕ್ರಮ ಮರಳು ಸಾಗಾಣಿಕೆಗೆ ಸಹಕರಿಸಿ, ಮರಳು ಲಾರಿಯ ಅಪಘಾತ ಪ್ರಕರಣವನ್ನು ತಿರುಚಿ ಕರ್ತವ್ಯಲೋಪ ಎಸಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರದ ಡಿವೈಎಸ್ಪಿ ಮೋಹನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

Recommended Video

Ragini ಹಾಗು Sanjana ಬಗ್ಗೆ ಹೊಸ ಬಾಂಬ್ ಸಿಡಿಸಿದ Prashanth Sambargi | Oneindia Kannada

ಡಿವೈಎಸ್ಪಿ ಜೆ.ಮೋಹನ್ ಅವರನ್ನು ಅಮಾನತುಗೊಳಿಸಲಾಗಿದೆ. ಕೆ.ಎಸ್.ಪಿ(ಡಿಪಿ) ನಿಯಮಗಳ 1965/89ರ ನಿಯಮ 5ರ ಅನ್ವಯ ಶಿಸ್ತು ಕ್ರಮ ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಒಳಾಡಳಿತ ಇಲಾಖೆಯ (ಪೊಲೀಸ್ ಸೇವೆಗಳು) ಅಧೀನ ಕಾರ್ಯದರ್ಶಿ ಬಿ.ಕೆ ಭುವನೇಂದ್ರ ಕುಮಾರ್ ಈ ಆದೇಶ ಹೊರಡಿಸಿದ್ದಾರೆ.

ಬಂಡೀಪುರದಲ್ಲಿ ಆನೆ ಕಾರಿಡಾರ್ ನಿರ್ಮಾಣಕ್ಕೆ ಭೂಸ್ವಾಧೀನ?ಬಂಡೀಪುರದಲ್ಲಿ ಆನೆ ಕಾರಿಡಾರ್ ನಿರ್ಮಾಣಕ್ಕೆ ಭೂಸ್ವಾಧೀನ?

ಮೇ.15 ರಂದು ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಮರಾಜನಗರ ತಾಲೂಕಿನ ಮಾದಾಪುರದ ಬಳಿ ನಿಂತಿತ್ತು. ವಿಷಯ ತಿಳಿದು ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್‍ಸ್ಪೆಕ್ಟರ್ ಮಂಜು ತಮ್ಮ ಜೀಪಿನಲ್ಲಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಪೊಲೀಸ್ ಜೀಪ್ ನೋಡಿದ ಚಾಲಕ, ಟಿಪ್ಪರ್ ಲಾರಿಯಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಎದುರಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ.

DySP Suspended For Being Involved In Illegal Sand Mining In Chamarajanagara

ಅಕ್ರಮ ಮರಳು ಸಾಗಾಣಿಕೆ ವಿಚಾರ ಮೇಲಧಿಕಾರಿಗಳಿಗೆ ತಿಳಿದರೆ ತೊಂದರೆಯಾಗುತ್ತದೆ ಎಂದು ಟಿಪ್ಪರ್ ನಲ್ಲಿದ್ದ ಮರಳನ್ನು ರಸ್ತೆ ಬದಿ ಸುರಿದು ಎಂ.ಸ್ಯಾಂಡ್ ಸಾಗಾಣಿಕೆಯಾಗುತ್ತಿತ್ತು ಎಂದು ಬಿಂಬಿಸಲಾಗಿತ್ತು ಎಂಬ ಆರೋಪ ಪೊಲೀಸರ ಮೇಲೆ ಕೇಳಿ ಬಂದಿತ್ತು.

ಈ ಆರೋಪದ ಮೇರೆಗೆ ಈಗಾಗಲೇ ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್‍ಸ್ಪೆಕ್ಟರ್ ಕೆ.ಎಂ ಮಂಜು, ಪೂರ್ವ ಪೊಲೀಸ್ ಠಾಣೆ ಸಬ್ ಇನ್‍ಸ್ಪೆಕ್ಟರ್ ಎಸ್.ಪಿ ಸುನೀಲ್ ಹಾಗೂ ಹೆಡ್ ಕಾನ್‍ಸ್ಟೆಬಲ್ ನಾಗ ನಾಯಕ ಎಂಬುವವರನ್ನು ಅಮಾನತು ಮಾಡಲಾಗಿದೆ.

ಪೊಲೀಸರು ಯಾರಿಗೋ ಸಹಾಯ ಮಾಡಲು ತನಿಖೆಯನ್ನು ಸರಿಯಾಗಿ ಮಾಡದೆ ಕರ್ತವ್ಯ ಲೋಪ ಎಸಗಿದ್ದರು ಎಂಬ ಬಗ್ಗೆ ಅಲ್ಲಿನ ಸ್ಥಳೀಯರಿಂದ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್ ಮೇ 25 ರಂದು ವರದಿ ಸಲ್ಲಿಸಿದ್ದರು. ಈ ವರದಿ ಅನುಸಾರ ಇದೀಗ ಡಿವೈಎಸ್ಪಿ ಜೆ.ಮೋಹನ್ ಅವರನ್ನು ಅಮಾನತು ಮಾಡಲಾಗಿದೆ.

English summary
The government has ordered the suspension of DYSP Mohan Of Chamarajanagar for his alleged Cooperation in illegal sand trafficking.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X