ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗುಂಡ್ಲುಪೇಟೆ ಎಸ್‍ಐ ಸಂದೀಪ್ ಕುಮಾರ್ ವರ್ಗಾವಣೆ

ಗುಂಡ್ಲುಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಆಗಿದ್ದ ಬಿ.ಎನ್.ಸಂದೀಪ್ ಕುಮಾರ್ ಅವರ ವಿರುದ್ಧ ಲಾಠಿಚಾರ್ಜ್ ಗೆ ಸಂಬಂಧಿಸಿದಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಅವರನ್ನು ವರ್ಗಾವಣೆ ಮಾ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ ಮಾರ್ಚ್ 23: ಏಪ್ರಿಲ್ 9 ಭಾನುವಾರದಂದು ನಡೆಯಲಿರುವ ಗುಂಡ್ಲುಪೇಟೆ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಯ ದಿನದಂದು ನಡೆದ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣೆಗೆ ಮುನ್ನವೇ ಪಿಎಸ್ಐ ಬಿ.ಎನ್.ಸಂದೀಪ್ ಕುಮಾರ್ ಅವರ ತಲೆದಂಡವಾಗಿದೆ.

ಗುಂಡ್ಲುಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಆಗಿದ್ದ ಬಿ.ಎನ್.ಸಂದೀಪ್ ಕುಮಾರ್ ಅವರ ವಿರುದ್ಧ ಲಾಠಿಚಾರ್ಜ್ ಗೆ ಸಂಬಂಧಿಸಿದಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಅವರನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ.[ನಾಮಪತ್ರ ಸಲ್ಲಿಕೆ ವೇಳೆ ಮಾತಿನ ಚಕಮಕಿ-ಲಘುಲಾಠಿ ಪ್ರಹಾರ]

EC transfers Gundlupet SI Sandeep Kumar

ಎಸ್‍ಐ ಸಂದೀಪ್ ಕುಮಾರ್ ಕಳೆದ ಆರು ವರ್ಷಗಳಿಂದ ಜಿಲ್ಲೆಯ ಕೊಳ್ಳೇಗಾಲ, ಬೇಗೂರು ಹಾಗೂ ಪಟ್ಟಣ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಜನಮೆಚ್ಚುಗೆಗಳಿಸಿದ್ದರು. ಸಂಚಾರ ನಿಯಮ ಉಲ್ಲಂಘನೆ ಮಾಡುವವರು ಹಾಗೂ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದವರ ಪಾಲಿಗೆ ದುಃಸ್ವಪ್ನವಾಗಿದ್ದರು. ಆದರೆ ಪ್ರತಿಭಟನೆಯ ಸಂದರ್ಭದಲ್ಲಿ ಇವರ ಕಾರ್ಯಗಳು ರೈತ ಸಂಘ ಹಾಗೂ ಬಿಜೆಪಿಯವರ ಕೆಂಗಣ್ಣಿಗೆ ಗುರಿಯಾಗಿದ್ದವು.[ನಾಮಪತ್ರ ಸಲ್ಲಿಕೆ: ಚಿತ್ರಗಳಲ್ಲಿ ಉಪಚುನಾವಣೆ ರಂಗು]

ಇದೀಗ ಚುನಾವಣಾ ಆಯೋಗವು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣಾ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗಕ್ಕೆ ವರ್ಗಾಯಿಸಿದೆ ಎನ್ನಲಾಗಿದೆ.

English summary
Election Commission transfered Gundlupet SI Sandeep Kumar with regard to lathi charge took place on 20th March.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X