ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಬಸ್ ಡಿಕ್ಕಿಯಾಗಿ ವೃದ್ಧ ಸ್ಥಳದಲ್ಲೇ ಸಾವು
ಚಾಮರಾಜನಗರ, ನವೆಂಬರ್, 04: ರಸ್ತೆ ದಾಟುತಿದ್ದ ಪಾದಚಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ರಾಘವಪುರ ಗೇಟ್‌ನ ಬಳಿ ನಡೆದಿದೆ. ಹಾಗಾದರೆ ಈ ಘಟನೆ ನಡೆದಿದ್ದು ಹೇಗೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನಂಜನಗೂಡು ತಾಲೂಕಿನ ಹುರ ಗ್ರಾಮದ ಗೋಪಾಲಕೃಷ್ಣ ಎಂಬುವವರು ರಾಘವಪುರ ಗ್ರಾಮದ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ರಾಘವಾಪುರ ಗ್ರಾಮದ ಬಳಿ ಇರುವ ಹೋಟೆಲ್ ಒಂದರಲ್ಲಿ ಟೀ ಕುಡಿದು ರಸ್ತೆ ದಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಕಡೆಯಿಂದ ಬಂದ ಕೇರಳದ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವಿಗಿಡಾಗಿದ್ದಾರೆ.

ಬೇಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ವೃದ್ಧನಿಗೆ ಬಸ್ ಡಿಕ್ಕಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನಿಟ್ಟುಕೊಂಡು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.
ಇಬ್ಬರು ಸ್ಥಳದಲ್ಲೇ ಸಾವು: ದಿನದಿಂದ ದಿನಕ್ಕೆ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಇದೀಗ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ಸಮೀಪ ಅಕ್ಟೋಬರ್ 20ರಂದು ನಡೆದಿದೆ.
ಚೌಡಹಳ್ಳಿ ಗ್ರಾಮದ ಶಿವಯ್ಯ(56) ಹಾಗೂ ಹುಂಡಿಪುರ ಗ್ರಾಮದ ಅಜೀತ್(22) ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಚೌಡಹಳ್ಳಿ ಗ್ರಾಮದ ಚಂದು ಎಂಬಾತನಿಗೆ ತೀವ್ರ ಗಾಯಗಳಾದ ಹಿನ್ನೆಲೆ ಆಸ್ಪತ್ರೆಗೆ ರವಾನಿಸಲಾಗಿದೆ.
ಚೌಡಹಳ್ಳಿ ಗ್ರಾಮದ ತಿರುವಿನಲ್ಲಿ ಎರಡು ಬೈಕ್‌ಗಳು ವೇಗವಾಗಿ ಚಲಿಸುತ್ತಿದ್ದ ಪರಿಣಾಮ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಮೃತ ದೇಹಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬಳಿಕ ಎರಡು ಬೈಕ್‌ಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ಇನ್ನೂ ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿತ್ತು.
ಸಾರಿಗೆ ಬಸ್ ಪಲ್ಟಿ: ರಾಜ್ಯದ ಹಲವೆಡೆ ಕೆಎಸ್‌ಆರ್‌ಟಿಸಿ ಬಸ್ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇನ್ನು ಸೆಪ್ಟೆಂಬರ್ 30ರಂದು ಮತ್ತೆ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ (KSRTC) ಬಸ್ ಪಲ್ಟಿಯಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಓಬಳಾಪುರ ತಾಂಡಾ ಬಳಿ ಸೋಮವಾರ ಬೆಳಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಬಸ್‌ನಲ್ಲಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು. ಹಿರಿಯೂರು ಕಡೆ ಬರುವಾಗ ಓಬಳಾಪುರ ತಾಂಡಾ ಬಳಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಸದ್ಯ ಈ ವೇಳೆ ಯಾವುದೇ ಪ್ರಾಣಾಪಾಯ ಸಂಬವಿಸಿಲ್ಲ. ಕೆಲವು ವಿದ್ಯಾರ್ಥಿಗಳಿಗೆ ಕೈ, ಕಾಲು, ಕಣ್ಣು ಇನ್ನೀತರ ಭಾಗಗಳಲ್ಲಿ ಗಾಯಗಳಾಗಿವೆ. ಈ ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಸ್ಥಳೀಯ ವಾಹನ ಹಾಗೂ ಅಂಬುಲೆನ್ಸ್‌ಗಳಲ್ಲಿ ಸಾಗಿಸಿ ಸ್ಥಳೀಯ ಮತ್ತು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಇನ್ನು ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣದ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ












Click it and Unblock the Notifications