ಚಾಮರಾಜನಗರ: ಸ್ಟಾರ್ಟ್ ಮಾಡುವಾಗಲೇ ಧಗಧಗ ಹೊತ್ತಿ ಉರಿದ ಇ- ಬೈಕ್
ಚಾಮರಾಜನಗರ, ಆಗಸ್ಟ್, 06: ಚಾರ್ಜ್ ಮಾಡಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಸ್ಟಾರ್ಟ್ ಮಾಡಿದ ವೇಳೆ ಧಗಧಗನೇ ಹೊತ್ತಿ ಉರಿದಿರುವ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ.
ಕೊತ್ತಲವಾಡಿ ಗ್ರಾಮದ ಬಸವರಾಜಪ್ಪ ಎಂಬುವವರಿಗೆ ಸೇರಿದ ಬೈಕ್ ಇದಾಗಿದೆ. ಚಾರ್ಜ್ ಮಾಡಿ ಬೈಕನ್ನು ಸ್ಟಾರ್ಟ್ ಮಾಡಿದ ವೇಳೆ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಆತಂಕಗೊಂಡು ಹಿಂದೆ ಸರಿದ ವೇಳೆ ದಿಢೀರನೇ ಬೆಂಕಿ ಜ್ವಾಲೆ ಕಾಣಿಸಿಕೊಂಡು ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಪಕ್ಕದಲ್ಲಿದ್ದ ಮತ್ತೊಂದು ಬೈಕ್‌ಗೆ ಹಾಗೂ ಮನೆಗೆ ಬೆಂಕಿ ವ್ಯಾಪಿಸಿಲ್ಲ. ಹಾಗೆಯೇ ಯಾವುದೇ ಜೀವಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಕೂಡಲೇ ಕೆಲ ಯುವಕರು ಸೇರಿ ಉರಿಯುತ್ತಿದ್ದ ಬೈಕ್‌ಗೆ ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ಬೆಳ್ಳಂಬೆಳಗ್ಗೆ ನಡೆದಿದ್ದು, ಇದರಿಂದ ಇ-ಬೈಕ್ ಸವಾರ ಭಯಬೀತನಾಗಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತಗಳ ಸಂಖ್ಯೆ ಇಳಿಮುಖ
ಅಪಘಾತಗಳ ಹೆದ್ದಾರಿ ಎಂಬ ಕುಖ್ಯಾತಿ ಪಡೆದಿದ್ದ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೋಲಿಸ್ ಇಲಾಖೆ ಕೈಗೊಂಡ ಕಠಿಣ ಕ್ರಮಗಳಿಂದ ಇದೀಗ ಅಪಘಾತ ಸಂಖ್ಯೆ ಇಳಿಮುಖವಾಗಿದೆ. ಈ ಸಂಬಂದ ಎಡಿಜಿಪಿ ಅಲೋಕ್ ಕುಮಾರ್ ಅವರು ಟ್ವೀಟ್ ಮಾಡುವ ಮೂಲಕ ಪೊಲೀಸ್ ಸಿಬ್ಬಂದಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಡಿಸಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಸಾಂಸ್ಕೃತಿಕ ನಗರ ಮೈಸೂರು ಎರಡು ನಗರಗಳನ್ನು ತ್ವರಿತವಾಗಿ ಸಂಪರ್ಕಿಸುವ ನಿಟ್ಟಿನಲ್ಲಿ ದಶಪಥ ಹೆದ್ದಾರಿ ನಿರ್ಮಾಣವಾಗಿತ್ತು. ಆದರೆ ಎಕ್ಸ್‌ಪ್ರೆಸ್ ಹೈವೇ ಉದ್ಘಾಟನೆಯ ನಂತರದಲ್ಲಿ ದಿನ ದಿಂದ ದಿನಕ್ಕೆ ಅಪಘಾತ ಸಂಖ್ಯೆ ಹೆಚ್ಚಾಗಿ ಅಪಘಾತಗಳಲ್ಲಿ ನೂರಾರು ಮಂದಿ ತಮ್ಮ ಪ್ರಾಣ ಕಳೆದುಕೊಂಡ ಹಿನ್ನಲೆಯಲ್ಲಿ ಅಪಘಾತಗಳ ಹೆದ್ದಾರಿ ಎಂದು ಹಣೆಪಟ್ಟಿ ಪಡೆದುಕೊಂಡಿತ್ತು.
ಮೈಸೂರು ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಅಖಾಡಕ್ಕಿಳಿದ ಪೊಲೀಸ್ ಇಲಾಖೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳಿಗೆ ಕಾರಣವಾದ ಅಂಶಗಳ ಬಗ್ಗೆ ತಜ್ಞರೊಂದಿಗೆ ಹೆದ್ದಾರಿ ಪರಿಶೀಲನೆ ನಡೆಸಿ ಅಪಘಾತ ವಲಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವರದಿ ನೀಡಿತು.












Click it and Unblock the Notifications