ಚಾಮರಾಜನಗರ: ಇದ್ದಕ್ಕಿದ್ದಂತೆ ಧಗಧಗಿಸಿದ ಇ-ಸ್ಕೂಟರ್.!

ಚಾಮರಾಜನಗರ, ಡಿಸೆಂಬರ್‌, 11: ಇತ್ತೀಚಿನ ದಿನಗಳಲ್ಲಿ ಇ-ಸ್ಕೂಟರ್‌ಗಳತ್ತ ಜನರು ಹೆಚ್ಚು ವಾಲುತ್ತಿದ್ದಾರೆ. ಅದೇ ರೀತಿ, ಕೆಲವಡೆ ಇ-ಸ್ಕೂಟರ್‌ನಿಂದ ಅವಘಡಗಳು ಸಂಭವಿಸುತ್ತಿದ್ದು, ಇದೀಗ ಮನೆ ಮುಂದೆ ನಿಲ್ಲಿಸಿದ್ದ ಇ- ಸ್ಕೂಟರ್ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ಚಾಮರಾಜನಗರದ ಮುಬಾರಕ್ ಮೊಹಲ್ಲಾದಲ್ಲಿ ಭಾನುವಾರ (ಡಿಸೆಂಬರ್‌ 10) ತಡರಾತ್ರಿ ನಡೆದಿದೆ.

ಮುಬಾರಕ್ ಮೊಹಲ್ಲಾ ನಿವಾಸಿ ಅಸಾದುಲ್ಲಾ ಎಂಬವವರು ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಇ-ಸ್ಕೂಟರ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿದೆ. ನೋಡ ನೋಡುತ್ತಿದ್ದಂತೆ ಬೆಂಕಿ ವ್ಯಾಪಿಸಿ ಹೊತ್ತಿ ಉರಿದಿದ್ದು, ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ.

Electric bike caught fire in chamarajanagar

ಕೆಲ ತಿಂಗಳುಗಳ ಹಿಂದೆ ಚಾಮರಾಜನಗರ ತಾಲೂಕಿನ ಅರಕಲವಾಡಿ ಗ್ರಾಮದಲ್ಲಿ ಚಾರ್ಜ್‌ ಮಾಡಿ‌ ನಿಲ್ಲಿಸಿದ್ದ ಇ-ಸ್ಕೂಟರ್‌ವೊಂದು ಹೊತ್ತಿ ಉರಿದು ಅಲ್ಲಿನ ಸುತ್ತಮುತ್ತಲಿನ ಜನರಿಗೆ ಆತಂಕ ಸೃಷ್ಟಿಸಿತ್ತು. ಇನ್ನು ಮುಬಾರಕ್ ಮೊಹಲ್ಲಾದಲ್ಲಿ ಇದೀಗ ನಡೆದ ಘಟನೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.

8 ಮನೆಗಳು ಭಸ್ಮ

ಸಿಲಿಂಡರ್ ಸ್ಫೋಟಗೊಂಡು 8 ಮನೆಗಳು ಭಸ್ಮವಾಗಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ಅನಂತಪುರದ ಬಳಿ ಇತ್ತೀಚೆಗಷ್ಟೇ ನಡೆದಿತ್ತು. ಇನ್ನು ಈ ವೇಳೆ ಒಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಿಲಿಂಡರ್‌ ಸ್ಪೋಟದ ತೀವ್ರತೆಗೆ 8 ಶೀಟ್ ಮನೆಗಳು ಭಸ್ಮವಾಗಿದ್ದು, ಈ ವೇಳೆ ಒಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು. ಇನ್ನು ಸ್ಥಳೀಯರ ಮಾಹಿತಿ ಆಧಾರದ ಮೇಲೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನದಿಸುವ ಕಾರ್ಯವನ್ನು ಮಾಡಿದ್ದರು.

ಬೆಂಗಳೂರಿನ ವಿನಾಯಕ ಸಿನೆಮಾ ಥಿಯೇಟರ್ ಬಳಿ ಈ ದುರ್ಘಟನೆ ನಡೆದಿದ್ದು, ಚಾಮರಾಜಪೇಟೆ ಆನಂದಪುರ ಬಳಿ 8 ಮನೆಗಳ ಶೀಟ್‌ಗಳು ಬೆಂಕಿಯಲ್ಲಿ ಭಸ್ಮವಾಗಿದ್ದವು. ಈ ಅವಘಡದಲ್ಲಿ ಗೋಧಾಮು ಸೇರಿದಂತೆ ಪಕ್ಕದಲ್ಲಿರುವ 8 ಮನೆಗಳಿಗೂ ಬೆಂಕಿ ತಗುಲಿದ್ದು, ಈ ವೇಳೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಕನ್ನಡ ನ್ಯೂಸ್‌ ವರದಿ ಮಾಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+