ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ.12 ರಿಂದ 14ರವರೆಗೆ ಮಲೆ ಮಹದೇಶ್ವರನ ದರ್ಶನವಿಲ್ಲ

|
Google Oneindia Kannada News

ಚಾಮರಾಜನಗರ, ಡಿಸೆಂಬರ್ 08: ಪವಾಡ ಪುರುಷನ ನೆಲೆಯಾಗಿರುವ ಜಿಲ್ಲೆಯ ಹನೂರು ತಾಲೂಕಿನ ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಕಡೇ ಕಾರ್ತಿಕ ಸೋಮವಾರ ಮತ್ತು ಅಮಾವಾಸ್ಯೆ ಹಿನ್ನೆಲೆಯಲ್ಲಿ ಡಿ. 12ರಿಂದ 14ರವರೆಗೆ 3 ದಿನಗಳ ಕಾಲ ಭಕ್ತಾದಿಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಈ ಆದೇಶ ಹೊರಡಿಸಿದ್ದಾರೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷದಂತೆ ವಾರಾಂತ್ಯ ಎಣ್ಣೆಮಜ್ಜನ ಸೇವೆ, ಅಮಾವಾಸ್ಯೆ ಪೂಜಾ ಕೈಂಕರ್ಯ, ಐದನೇ ಕಾರ್ತಿಕ ಸೋಮವಾರ ಮತ್ತು ತೆಪ್ಪೋತ್ಸವ ನಡೆಯುತ್ತಿದೆ. ಆದರೆ ಈ ಬಾರಿ ಧಾರ್ಮಿಕ ಕೈಂಕರ್ಯ ಮತ್ತು ಪೂಜಾ ಕಾರ್ಯಗಳು ನಡೆಯುತ್ತವೆಯಾದರೂ ಈ ಪೂಜಾ ಕಾರ್ಯಗಳಲ್ಲಿ ಭಾಗವಹಿಸಲು ಹಾಗೂ ಮಾದಪ್ಪನ ದರ್ಶನಕ್ಕೆ ಯಾವುದೇ ಅವಕಾಶವಿಲ್ಲ. ಹೀಗಾಗಿ ಭಕ್ತರು ದೇವಾಲಯದತ್ತ ಬಾರದಂತೆ ಸೂಚಿಸಲಾಗಿದೆ.

ಮಲೆಮಹದೇಶ್ವರ ಬೆಟ್ಟದಲ್ಲಿ 2 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹಮಲೆಮಹದೇಶ್ವರ ಬೆಟ್ಟದಲ್ಲಿ 2 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹ

ಭಕ್ತರು ಆಗಮಿಸಿದರೆ ಕೋವಿಡ್-19 ನಿಯಮಾವಳಿ ಪಾಲನೆ ಮಾಡಲು ಕಷ್ಟವಾಗುತ್ತದೆ. ಹೀಗಾಗಿ ಭಕ್ತಾದಿಗಳ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೂರು ದಿನಗಳ ಕಾಲ ಭಕ್ತಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸುವಂತೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಮನವಿ ಪತ್ರ ಸಲ್ಲಿಸಿದ್ದರು.

Chamarajanagar: Entry Restricted For Devotees To Male Mahadeshwara Temple Dec 12 To 14

Recommended Video

Team India ಕಡೇ ಟಿ20 ಸೋಲಲು ಈ ಆಟಗಾರರೇ ಕಾರಣ | Oneindia Kannada

ಈ ಹಿನ್ನೆಲೆ ಡಿಸೆಂಬರ್ 12 ರಿಂದ 14 (ಶನಿವಾರ, ಭಾನುವಾರ ಮತ್ತು ಸೋಮವಾರ) ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ. ಆದರೆ ಆ ದಿನಗಳಂದು ಸರ್ಕಾರಿ ಕೆಲಸ ನಿಮಿತ್ತ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಜನಪ್ರತಿನಿಧಿಗಳು ಮತ್ತು ಅಧಿಕಾರಿ, ಸಿಬ್ಬಂದಿ ವರ್ಗದವರಿಗೆ ಯಾವುದೇ ರೀತಿಯ ಅಡ್ಡಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

English summary
Entry restricted for devotees to male mahadeshwara temple in chamarajanagar on dec 12 to 14 ahead of karthika somavara and amavasye
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X