ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ದೂರವುಳಿಸಲು ಎವರ್ ಗ್ರೀನ್ ಚಾಮರಾಜನಗರ ಅಭಿಯಾನ ಆರಂಭ

|
Google Oneindia Kannada News

ಚಾಮರಾಜನಗರ, ಮೇ 21: ರಾಜ್ಯದಲ್ಲಿ ರಾಮನಗರ ಮತ್ತು ಚಾಮರಾಜನಗರ ಹೊರತು ಪಡಿಸಿದರೆ ಉಳಿದ ಎಲ್ಲ ಜಿಲ್ಲೆಗಳು ಕೊರೊನಾ ಸೋಂಕಿನಿಂದ ಬಳಲಿವೆ. ಹೀಗಿರುವಾಗ ಹಸಿರು ವಲಯದಲ್ಲಿರುವ ಚಾಮರಾಜನಗರವನ್ನು ಹೇಗಾದರೂ ಮಾಡಿ ಕೊರೊನಾ ಮುಕ್ತ ಜಿಲ್ಲೆಯಾಗಿಯೇ ಉಳಿಸಿಕೊಳ್ಳಬೇಕೆಂದು ಪಣ ತೊಟ್ಟಿರುವ ಜಿಲ್ಲಾಡಳಿತ ಈ ಸಂಬಂಧ ಅಭಿಯಾನ ಆರಂಭಿಸಿದೆ.

ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರ ಪರಿಕಲ್ಪನೆ ಹಾಗೂ ಮಾರ್ಗದರ್ಶನದಡಿ ಎವರ್ ಗ್ರೀನ್ ಚಾಮರಾಜನಗರ ಅಭಿಯಾನ ಎಂಬ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈಗಾಗಲೇ ಜಿಲ್ಲೆಯು ಕೊರೊನಾ ಮುಕ್ತವಾಗಿದ್ದು, ಇದು ಹೀಗೆಯೇ ಮುಂದುವರೆಯಲು ಕಾರ್ಯ ರೂಪುರೇಷೆಗಳ ಬಗ್ಗೆ ವಿವರವಾಗಿ ಯೋಜನೆ ಸಿದ್ಧಪಡಿಸಿ ಅನುಷ್ಠಾನಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ.

ಕೊರೊನಾ ಕೆಲಸಕ್ಕೆ ಡೋಂಟ್ ಕೇರ್: 14 ಅಧಿಕಾರಿಗಳಿಗೆ ನೋಟಿಸ್ಕೊರೊನಾ ಕೆಲಸಕ್ಕೆ ಡೋಂಟ್ ಕೇರ್: 14 ಅಧಿಕಾರಿಗಳಿಗೆ ನೋಟಿಸ್

 ಸ್ವಯಂ ಘೋಷಿತ ಕೊರೊನಾ ವಾರಿಯರ್

ಸ್ವಯಂ ಘೋಷಿತ ಕೊರೊನಾ ವಾರಿಯರ್

ಹೊರ ರಾಜ್ಯಗಳಿಂದ ಮತ್ತು ರಾಜ್ಯದ ಬೇರೆ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಜಿಲ್ಲೆಗೆ ಆಗಮಿಸುವ ಸಂಭವ ಇರುವುದರಿಂದ ಸಾಮಾಜಿಕ ಅಂತರವೂ ಸಾಮಾಜಿಕ ಹೊಣೆಗಾರಿಕೆಯಾಗಿ ಬದಲಾಗಬೇಕು. ಪ್ರತಿಯೊಬ್ಬರೂ ಸ್ವಯಂ ಘೋಷಿತ ಕೊರೊನಾ ವಾರಿಯರ್ ಗಳಾಗಿ ಕೆಲಸ ಮಾಡಬೇಕು. ಗ್ರಾಮ ಮಟ್ಟದಲ್ಲಿರುವ ಗ್ರಾಮ ಕಾರ್ಯಪಡೆ ಮತ್ತು ಕೊರೊನಾ ಸೈನಿಕರನ್ನು ಕ್ರಿಯಾಶೀಲಗೊಳಿಸಿ ನಗರ ಮತ್ತು ಪಟ್ಟಣಗಳಲ್ಲಿ ಹೊಸದಾಗಿ ಕಾರ್ಯಪಡೆ ರಚಿಸಲು ಜಿಲ್ಲಾಡಳಿತ ಮುಂದಾಗಿದೆ. ಇನ್ನು ಮನೆ ಮನೆ ಭೇಟಿ, ಆರೋಗ್ಯ ವಿಚಾರಣೆ, ಕರ ಪತ್ರಗಳು ಹಾಗೂ ಟಾಂಟಾಂ ಮೂಲಕ ನಿರಂತರ ಜಾಗೃತಿ ಮೂಡಿಸುವುದು. ಶಾಸಕರು, ಸಂಸದರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜನಜಾಗೃತಿ ಕಾರ್ಯಕ್ರಮವೂ ನಡೆಯಲಿದೆ.

 ತಾಲೂಕು ಮಟ್ಟದಲ್ಲಿ ತಂಡ ರಚನೆ

ತಾಲೂಕು ಮಟ್ಟದಲ್ಲಿ ತಂಡ ರಚನೆ

ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿ, ಆರೋಗ್ಯಾಧಿಕಾರಿಗಳು ತಂಡವಾಗಿ ಪ್ರತಿ ತಾಲ್ಲೂಕಿನ ಗ್ರಾಮಗಳಿಗೆ ಭೇಟಿ ನೀಡುವುದು, ಸಾರ್ವಜನಿಕರಲ್ಲಿ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸುವುದು, ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ತಾಲ್ಲೂಕಿನ ಕಾರ್ಯಚಟುವಟಿಕೆಗಳ ಬಗ್ಗೆ ನಿಗಾವಹಿಸುವುದು, ಲಾಕ್‌ಡೌನ್ ಕಾಯ್ದೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಸೆಕ್ಟರ್ ಮ್ಯಾಜಿಸ್ಟ್ರೇಟರ್ ಗಳು ನಗರ, ಗ್ರಾಮೀಣ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಮೊಕದ್ದಮೆಯನ್ನು ದಾಖಲಿಸುವುದು, ಸಾರ್ವಜನಿಕರು ಹಾಗೂ ವಾಹನಗಳ ತಪಾಸಣೆ, ವೈದ್ಯಕೀಯ ಸ್ಕ್ರೀನಿಂಗ್ ಅನ್ನು ಕಟ್ಟುನಿಟ್ಟಾಗಿ ನಿರ್ವಹಿಸುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಸಾಧ್ಯವಾಗುವ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ.

 ಜನರಲ್ಲಿ ಸ್ವಚ್ಛತಾ ಅರಿವು ಮೂಡಿಸುವುದು

ಜನರಲ್ಲಿ ಸ್ವಚ್ಛತಾ ಅರಿವು ಮೂಡಿಸುವುದು

ಇದಲ್ಲದೆ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಸೋಪ್ ‌ಗಳಿಂದ ಕೈಗಳನ್ನು ಸ್ವಚ್ಛಗೊಳಿಸುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಹೊರ ರಾಜ್ಯ, ಜಿಲ್ಲೆಗಳಿಂದ ಆಗಮಿಸುವ ಅಪರಿಚಿತ ವ್ಯಕ್ತಿಗಳನ್ನು ಪತ್ತೆಹಚ್ಚಿ ಸ್ಥಳೀಯ ವೈದ್ಯರಿಗೆ ಮಾಹಿತಿಯನ್ನು ನೀಡುವುದು, ಆರೋಗ್ಯ ಸೇತು, ಆಪ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ತಂಬಾಕು, ಗುಟ್ಕಾ, ಚುಯಿಂಗ್ ‌ಗಂ, ಧೂಮಪಾನ ನಿಷೇಧ. ನಗರ ಪ್ರದೇಶ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಚಿತ್ವದ ಬಗ್ಗೆ ಎಲ್ಲರೂ ಗಮನಹರಿಸುವಂತೆ ಮಾಡುವುದು.

 ವೃದ್ಧರು-ಮಕ್ಕಳು ಮನೆಯಲ್ಲಿರಲು ಮನವರಿಕೆ

ವೃದ್ಧರು-ಮಕ್ಕಳು ಮನೆಯಲ್ಲಿರಲು ಮನವರಿಕೆ

60 ವರ್ಷ ಮೇಲ್ಪಟ್ಟ ಹಿರಿಯರು, ಗರ್ಭಿಣಿಯರು ಹಾಗೂ 10 ವರ್ಷ ಒಳಪಟ್ಟ ಮಕ್ಕಳು ಮನೆಯಲ್ಲಿಯೇ ಇರುವಂತೆ ಮನವರಿಕೆ ಮಾಡುವುದು, ಜ್ವರ, ಶೀತ, ಕೆಮ್ಮು ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಲಕ್ಷಣಗಳಿರುವವರು ಕಂಡುಬಂದಲ್ಲಿ ಸ್ಥಳೀಯ ಆರೋಗ್ಯ ಇಲಾಖೆ ಅಧಿಕಾರಿ ಅಥವಾ ಜಿಲ್ಲಾ ಕಂಟ್ರೋಲ್ ಟೋಲ್ ಫ್ರೀ ಸಂಖ್ಯೆ 1077ಗೆ ಮಾಹಿತಿ ನೀಡುವ ಚಟುವಟಿಕೆಗಳನ್ನು ನಡೆಸಲು ಕಾರ್ಯೋನ್ಮುಖರಾಗುವುದು... ಹೀಗೆ ಹತ್ತಾರು ಕ್ರಮಗಳನ್ನು ಜಿಲ್ಲೆಯಾದ್ಯಂತ ಅಳವಡಿಸಿ, ಸಾರ್ವಜನಿಕರೇ ಸೋಂಕನ್ನು ತಡೆಗಟ್ಟುವಲ್ಲಿ ಸ್ವಯಂ ಪ್ರೇರಿತರಾಗಿ ಮುಂದೆ ಬರುವಂತೆ ಮಾಡುವುದು ಮತ್ತು ಜಿಲ್ಲಾಡಳಿತದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಅವರು ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದು, ಅವರು ಇದರಲ್ಲಿ ಯಶಸ್ಸು ಪಡೆಯಬೇಕಾದರೆ ಹಾಗೂ ಜಿಲ್ಲೆ ಕೊರೊನಾ ಸೋಂಕು ಮುಕ್ತವಾಗಿ ಉಳಿಯಬೇಕಾದರೆ ಜನರು ಅವರೊಂದಿಗೆ ಕೈಜೋಡಿಸುವುದು ಅತ್ಯಗತ್ಯವಾಗಿದೆ.

English summary
Chamarajanagar district administration has started Evergreen chamarajanagar awareness programme to prevent coronavirus,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X