ಚಾಮರಾಜನಗರ: ಹಣಕಾಸಿನ ವಿಚಾರಕ್ಕೆ ಅಳಿಯನನನ್ನೇ ಕೊಂದ ಮಾವ
ಚಾಮರಾಜನಗರ, ಫೆಬ್ರವರಿ, 23: ಬಾವ-ಮೈದುನನ ಗಲಾಟೆ ಓರ್ವನ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ.
ಸಾಗಡೆ ಗ್ರಾಮದ ನಾಗೇಂದ್ರ ಮೃತ ವ್ಯಕ್ತಿಯಾಗಿದ್ದು, ರಾಜು ಎಂಬಾತ ಚಾಕುವಿನಿಂದ ಇರಿದ ಈತನ ಬಾವನಾಗಿದ್ದಾನೆ. ಹಣಕಾಸಿನ ವಿಚಾರಕ್ಕೆ ಜಗಳ ಆರಂಭವಾಗಿ ಕಣ್ಣಿಗೆ ಕಾರದ ಪುಡಿ ಎರಚಿ ಚಾಕುವಿನಿಂದ ಇರಿದು ಮೈದುನನನ್ನೇ ಬಾವ ಕೊಂದಿದ್ದಾನೆ. ಇನ್ನು ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಳಿಯನನ್ನೇ ಕೊಂದ ಮಾವ: ಚಾಮರಾಜನಗರ ತಾಲೂಕಿನ ಜನ್ನೂರು ಗ್ರಾಮದಲ್ಲಿ ಮಗಳಿಗೆ ಕಾಟ ಕೊಡುತ್ತಾನೆಂದು ಅಳಿಯನನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಪ್ರೀತಿಸಿ ಮದುವೆಯಾಗಿದ್ದ ಹುಬ್ಬಳಿ ಮೂಲದ ಉಮೇಶ್ (28) ಮೃತ ವ್ಯಕ್ತಿ. ಕೊಲೆ ಮಾಡಿದ ಮಾವ ನಂಜುಂಡಯ್ಯನನ್ನು ಕುದೇರು ಅವರನ್ನು ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಿತ್ಯ ಕುಡಿದು ಬಂದು ರಂಪಾಟ ಮಾಡುತ್ತಿದ್ದರಿಂದ ಬೇಸತ್ತ ಮಾವ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಯುವಕನ ಅಪರಾಧ ಸಾಬೀತಾದ ಹಿನ್ನೆಲೆ ಚಾಮರಾಜನಗರದ ಅಧಿಕ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ ವಿಶೇಷ ಫೊಕ್ಸೋ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಶುಕ್ರವಾರ (ಫೆಬ್ರವರಿ 23) ಆದೇಶಿಸಿದ್ದಾರೆ.
ಕೊಳ್ಳೇಗಾಲ ತಾಲೂಕಿನ ಕೆ.ಎಸ್.ದೊಡ್ಡಿ ಗ್ರಾಮದ ರಾಜಪ್ಪ(26) ಎಂಬಾತ ಶಿಕ್ಷೆಗೊಳಗಾದ ಅಪರಾಧಿ. 16 ವರ್ಷ ವಯಸ್ಸಿನ ಅಪ್ರಾಪ್ತೆಯನ್ನು ಈತ ಪುಸಲಾಯಸಿ ತಮಿಳುನಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.
ಸಾಕ್ಷ್ಯಾಧಾರಗಳಿಂದ ಯುವಕನ ಕೃತ್ಯ ಸಾಬೀತಾದ ಹಿನ್ನೆಲೆ ಅಧಿಕ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ ವಿಶೇಷ ಫೊಕ್ಸೋ ನ್ಯಾಯಾಧೀಶರಾದ ಎನ್.ಆರ್.ಲೋಕಪ್ಪ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಜೊತೆಗೆ ನೊಂದ ಬಾಲಕಿಗೆ 4 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಯೋಗೇಶ್ ವಾದ ಮಂಡಿಸಿದ್ದರು.
ಲೈಂಗಿಕ ದೌರ್ಜನ್ಯ ಎಸಗಿದವನಿಗೆ 3 ವರ್ಷ ಜೈಲು: ಅಪ್ರಾಪ್ರೆಗೆ ಲೈಂಗಿಕ ದೌರ್ಜನ್ಯ ನೀಡಿದ ಯುವಕನ ಅಪರಾಧ ಸಾಬೀತಾದ ಹಿನ್ನೆಲೆ ಚಾಮರಾಜನಗರದ ಅಧಿಕ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ ವಿಶೇಷ ಫೊಕ್ಸೋ ನ್ಯಾಯಾಲಯವು 3 ವರ್ಷ ಶಿಕ್ಷೆ ನೀಡಿ ಆದೇಶಿಸಿದೆ.
ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದ ಪ್ರದೀಪ್ ಶಿಕ್ಷೆಗೊಳಗಾದ ಅಪರಾಧಿ. 16 ವರ್ಷ ವಯಸ್ಸಿನ ಅಪ್ರಾಪ್ತೆಯನ್ನು ಈತ ಪುಸಲಾಯಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನೀಡಿದ್ದ. ಈ ಸಂಬಂಧ ಕುದೇರು ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.
ಸಾಕ್ಷ್ಯಾಧಾರಗಳಿಂದ ಯುವಕನ ಕೃತ್ಯ ಸಾಬೀತಾದ ಹಿನ್ನೆಲೆ ಅಧಿಕ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ ವಿಶೇಷ ಫೊಕ್ಸೋ ನ್ಯಾಯಾಧೀಶರಾದ ಎನ್.ಆರ್.ಲೋಕಪ್ಪ ಯುವಕನಿಗೆ 3 ವರ್ಷ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಜೊತೆಗೆ ನೊಂದ ಬಾಲಕಿಗೆ 1 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ.












Click it and Unblock the Notifications