ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಶಾಸಕರ ಕಚ್ಚಾಟಕ್ಕೆ ಬಿಜೆಪಿಯೇ ಕಾರಣ ಎಂದ ದೇವೇಗೌಡ

|
Google Oneindia Kannada News

Recommended Video

ಕಾಂಗ್ರೆಸ್ ಶಾಸಕರ ಕಚ್ಚಾಟಕ್ಕೆ ಬಿಜೆಪಿಯೇ ಕಾರಣ ಎಂದ ದೇವೇಗೌಡ | Oneindia Kannada

ಚಾಮರಾಜನಗರ, ಜನವರಿ 25: ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಳ್ಳಲು ಪ್ರಮುಖ ಕಾರಣ ಬಿಜೆಪಿಯೇ ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ದೂರಿದ್ದಾರೆ.ಚಾಮರಾಜನಗರದಲ್ಲಿ ಶುಕ್ರವಾರ ಮಾತನಾಡಿದ ಅವರು, ಈಗಲ್‌ ಟನ್ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರ ಮೇಲೆ ಕಂಪ್ಲಿ ಶಾಸಕ ಗಣೇಶ್ ಅವರು ಹಲ್ಲೆ ನಡೆಸಿದ್ದರು. ಇದೆಲ್ಲಕ್ಕೂ ಬಿಜೆಪಿಯೇ ಕುಮ್ಮಕ್ಕೇ ಕಾರಣ ಎಂದು ಹೇಳಿದ್ದಾರೆ.

ಆನಂದ್ ಸಿಂಗ್ ಮೇಲೆ ಹಲ್ಲೆ: ಅಜ್ಞಾತ ಸ್ಥಳದಿಂದ ಶಾಸಕ ಗಣೇಶ್ ಹೇಳಿಕೆ ಬಿಡುಗಡೆ ಆನಂದ್ ಸಿಂಗ್ ಮೇಲೆ ಹಲ್ಲೆ: ಅಜ್ಞಾತ ಸ್ಥಳದಿಂದ ಶಾಸಕ ಗಣೇಶ್ ಹೇಳಿಕೆ ಬಿಡುಗಡೆ

ಕಾಂಗ್ರೆಸ್ ಶಾಸಕರ ಮಧ್ಯೆ ವೈರತ್ವ ಬಿತ್ತುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬಿಜೆಪಿಯು ಆಪರೇಷನ್ ಕಮಲಕ್ಕೆ ಹೊರಟಿದ್ದಾಗ ಗಲಾಟೆಯಾಗಿದೆ. ರಾಜ್ಯ ಬಿಜೆಪಿ ಮುಖಂಡರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ನಾಯಕರು ಶಾಸಕರನ್ನು ಭೇಟಿ ಮಾಡಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಆನಂದ್ ಸಿಂಗ್ ಮೇಲೆ ಹಲ್ಲೆ, ಶಾಸಕ ಗಣೇಶ್ ಬಂಧನ ಸಾಧ್ಯತೆ ಆನಂದ್ ಸಿಂಗ್ ಮೇಲೆ ಹಲ್ಲೆ, ಶಾಸಕ ಗಣೇಶ್ ಬಂಧನ ಸಾಧ್ಯತೆ

ಯಾವುದೇ ಕಾರಣಕ್ಕೂ ಬಿಜೆಪಿ ಪ್ರಯತ್ನ ಫಲಕೊಡುವುದಿಲ್ಲ, ಸಮ್ಮಿಶ್ರ ಸರ್ಕಾರ ಐದು ವರ್ಷವನ್ನು ಪೂರೈಸಲಿದೆ ಎನ್ನುವ ವಿಶ್ವಾಸ ನಮಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೈತ್ರಿ ಸರ್ಕಾರ ಬಂದ ಮೇಲೆ ಒಂದು ವರ್ಷವಾದರೂ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು, ಸರ್ಕಾರ ಎಡವಿದಾಗ, ಬಿದ್ದಾಗ ಬೇಲೆತ್ತುವ ಪ್ರಯತ್ನ ಮಾಡಬೇಕು ಆದರೆ ಬಿದ್ದರೆ ಅವರಿಗೆ ಏಳಲಾಗದ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

Fight between 2 MLAs in Bengaluru, BJP watches in glee

ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ ಸಂದರ್ಭ ಈ ಇಬ್ಬರೂ ಶಾಸಕರ ನಡುವೆ ವಾಗ್ವಾದ ನಡೆದು, ಶಾಸಕ ಗಣೇಶ್ ಅವರು ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದರು. ಆನಂದ್ ಸಿಂಗ್ ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಏಟು ತಿಂದಿರುವ ಶಾಸಕ ಆನಂದ್ ಸಿಂಗ್ ಅವರ ಹೇಳಿಕೆಯನ್ನೂ ಪಡೆದಿದ್ದಾರೆ. 'ಶಾಸಕ ಗಣೇಶ್, ಕೊಲ್ಲುವ ಉದ್ದೇಶದಿಂದ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ' ಎಂದು ಆನಂದ್ ಸಿಂಗ್ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

English summary
Higher Education minister GT Devegowda alleged that Fight between 2 Congress MLAs because of the BJP party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X