ಚಾಮರಾಜನಗರ: ಕಾಡೆಮ್ಮೆಗಳ ಗರ್ಜನೆಗೆ ಹೆದರಿ ಕಾಲ್ಕಿತ್ತ ಗಜಪಡೆ, ವಿಡಿಯೋ ವೈರಲ್
ಚಾಮರಾಜನಗರ, ಜನವರಿ, 09: ವನ್ಯಜೀವಿಗಳು ಅಗಾಗ್ಗೆ ಮುಖಾಮುಖಿ ಆಗುತ್ತಿರುತ್ತವೆ. ಕೆಲವೊಮ್ಮೆ ಕಾಳಗಕ್ಕೆ ಇಳಿದರೇ, ಮತ್ತೊಮ್ಮೆ ಕಾಲ್ಕೀಳುತ್ತವೆ. ಇನ್ನೂ ಕೆಲವು ತಮ್ಮ ಪಾಡಿಗೆ ತಾವು ಹೋಗುತ್ತವೆ.ಇದೀಗ ಅಂಥದ್ದೇ ಒಂದು ಘಟನೆ ಚಾಮರಾಜನಗರದ ಬಿಳಿಗಿರಿರಂಗನಾಥ ಬೆಟ್ಟಕ್ಕೆ ತೆರಳುವ ರಸ್ತೆಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಬೆಟ್ಟಕ್ಕೆ ತೆರಳುವ ರಸ್ತೆಯಲ್ಲಿ ಕಾಡೆಮ್ಮೆ ಹಾಗೂ ಕಾಡಾನೆಗಳ ಹಿಂಡು ಮುಖಾಮುಖಿ ಆಗಿವೆ. ಕಾಡೆಮ್ಮೆ ಹಾಗೂ ಆನೆಗಳು ಕೆಲ ಕ್ಷಣ ದೃಷ್ಟಿ ಯುದ್ಧ ನಡೆಸಿದ ಬಳಿಕ, ಎಮ್ಮೆಗಳ ಸಹವಾಸ ಬೇಡ ಎನ್ನುವ ರೀತಿ ಕಾಡಾನೆಗಳ ಹಿಂಡು ಬೇರೆ ದಾರಿಯತ್ತ ತೆರಳಿರುವ ದೃಶ್ಯ ಇದೀಗ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ.

ಒಟ್ಟಿನಲ್ಲಿ ಹೇಳುವುದಾದರೆ ಮನುಷ್ಯರು ಕಾದಾಡುವಾಗಲೂ, ಕ್ಲೈಮ್ಯಾಕ್ಸ್ ಎನ್ನುವ ರೀತಿಯಲ್ಲಿ ಕೊನೆಯಲ್ಲಿ ಜಗಳ ಬಿಡಿಸಿ ಇದಕ್ಕೆಲ್ಲ ನಾಂದಿಯಾಡುವವರು ಇದ್ದೇ ಇರುತ್ತಾರೆ. ಅದೇ ರೀತಿ ಇಲ್ಲಿ ಕಾಡೆಮ್ಮೆ ಹಾಗೂ ಕಾಡಾನೆಗಳು ಮುಖಾಮುಖಿಯಾಗಿದ್ದು, ಕೊನೆಗೆ ತಾವೇ ಸೋಲೊಪ್ಪಿಕೊಳ್ಳುವ ರೀತಿಯಲ್ಲಿ ಕಾಡಾನೆಗಳು ಹಿಂದೆ ಸರಿದ ಘಟನೆ ನಡೆದಿದೆ.
ಆನೆಯೊಂದಿಗೆ ಸೆಲ್ಫಿಗಾಗಿ ಪ್ರವಾಸಿಗರ ಕ್ಯೂ
ಇತ್ತೀಚೆಗಷ್ಟೇ ಕರ್ನಾಟಕದ ಕಾಶ್ಮೀರ ಅಂತಲೇ ಕರೆಯುವ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟದಲ್ಲಿ ಇಂದು (ಜನವರಿ 04) ಕಾಡಾನೆ ಜೊತೆ ಪ್ರವಾಸಿಗರು ಸೆಲ್ಫಿಗೆ ಮುಗಿಬಿದ್ದ ಘಟನೆ ನಡೆದಿತ್ತು.
ಗೋಪಾಲಸ್ವಾಮಿ ಬೆಟ್ಟದ ದೇಗುಲ ಸಮೀಪ ಆಗಾಗ್ಗೆ ಕಾಡಾನೆಯೊಂದು ಎಂಟ್ರಿ ಕೊಡಲಿದ್ದು, ಇಂದು (ಜನವರಿ 04) ಅದೇ ರೀತಿ ಕಾಡಾನೆ ಎಂಟ್ರಿ ಕೊಟ್ಟಿದೆ. ಕಾಡಾನೆ ಕಂಡೊಡನೆ ರೋಮಾಂಚಿತರಾದ ಪ್ರವಾಸಿಗರು ಹುಚ್ಚಾಟ ಮೆರೆದಿದ್ದು, ಆನೆ ಸಮೀಪಕ್ಕೆ ತೆರಳಿ ಫೋಟೋ, ವೀಡಿಯೋ ಮಾಡಿದ್ದರು.
ಕೆಲವು ವರ್ಷಗಳಿಂದ ಕಾಡಾನೆಯೊಂದು ದೇವಾಲಯದ ಸಮೀಪ ಆಗಾಗ್ಗೆ ಕಾಣಿಸಿಕೊಳ್ಳಲಿದ್ದು, ಅದೃಷ್ಟವಶಾತ್ ಇಲ್ಲಿಯ ತನಕ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಇನ್ನು ಬೆಂಗಳೂರಿನಿಂದ ಆಗಮಿಸಿದ್ದ ಮಹಾದೇವಸ್ವಾಮಿ ಎಂಬವರು ಈ ಬಗ್ಗೆ ಮಾತನಾಡಿ, ಎಷ್ಟೇ ಆದರೂ ಅದು ಕಾಡುಪ್ರಾಣಿ. ಕೆಲವರು ತೀರ ಸಮೀಪವೇ ಹೋಗಿ ಫೋಟೋ ಕ್ಲಿಕ್ಕಿಸಿಕೊಂಡರು. ಏನೇ ಆದರೂ ಸುರಕ್ಷತೆ ಮುಖ್ಯ, ಅವು ಸುರಕ್ಷಿತವಾಗಿರಬೇಕು, ನಾವು ಸುರಕ್ಷಿತವಾಗಿರಬೇಕು ಎಂದು ಹೇಳಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications