ಬಂಡೀಪುರದಲ್ಲಿ ಮತ್ತೆ ಬೆಂಕಿ: ನೂರಕ್ಕೂ ಹೆಚ್ಚು ಎಕರೆ ಅರಣ್ಯ ಭಸ್ಮ

ಚಾಮರಾಜನಗರ, ಮಾರ್ಚ್ 24:ಬಂಡೀಪುರದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಕುಂದಕೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಬರುವ ಪ್ರದೇಶಕ್ಕೆ ಕಿಡಿಗೇಡಿಗಳು ಮತ್ತೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದ್ದು, ಪರಿಣಾಮ ನೂರಕ್ಕೂ ಹೆಚ್ಚು ಎಕರೆ ಭಸ್ಮವಾಗಿದೆ.

ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ

ಕುಂದಕೆರೆ ಅರಣ್ಯ ವಲಯದ ಜಕ್ಕಳ್ಳಿ, ಮಂಗಲ, ಕಣಿಯನಪುರ ಅರಣ್ಯಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರಣ್ಯ ಸಿಬ್ಬಂದಿಗಳು ಬೆಂಕಿ ನಂದಿಸಲು ಸತತ ಪ್ರಯತ್ನ ಮಾಡುತ್ತಿದ್ದಾರೆ.

ಇದೀಗ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿಯೋಜನೆಯ ಕುಂದಕೆರೆ ಅರಣ್ಯ ವಲಯಕ್ಕೆ ಒಂದೇ ತಿಂಗಳಲ್ಲೇ ಐದನೇ ಬಾರಿ ಬೆಂಕಿ ಕಾಣಿಸಿಕೊಂಡಂತಾಗಿದೆ ಎಂದು ಮೂಲಗಳು ತಿಳಿಸಿವೆ.

Fire in Bandipur again appeared

ಕೆಲವು ದಿನಗಳ ಹಿಂದೆಯಷ್ಟೇ ಬಂಡೀಪುರ ರಾಷ್ಟ್ರೀಯ ಉದ್ಯಾನವನದ 10 ಸಾವಿರ ಎಕರೆಗೂ ಹೆಚ್ಚು ಅರಣ್ಯ ಸುಟ್ಟು ಕರಕಲಾಗಿದ್ದು, ಸದ್ಯ ಈ ಕಾಳ್ಗಿಚ್ಚು ಬಹುತೇಕ ನಿಯಂತ್ರಣಕ್ಕೆ ಬಂದಿತ್ತು. ಇದರ ಬೆನ್ನಲ್ಲೇ, ಈಗ ಕುಂದಕೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಹಾಗೆ ನೋಡಿದರೆ ಈ ವರ್ಷ ಕುಂದಕೆರೆ ಬಳಿ ಬೆಂಕಿ ಮೊದಲ ಬಾರಿಗೆ ಪತ್ತೆ ಮಾಡಲಾಯಿತು. ನಂತರ ಗೋಪಾಲಸ್ವಾಮಿ ಬೆಟ್ಟ, ಮೇಲುಕಾಮನಹಳ್ಳಿ ಬಳಿ ಕಾಡ್ಗಿಚ್ಚು ಗೋಚರವಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+