ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂಡೀಪುರ ರಾಷ್ಟ್ರೀಯ ಹೆದ್ದಾರಿಗೆ ಪರ್ಯಾಯ ಐದು ಮಾರ್ಗ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ನವೆಂಬರ್ 19: ಕೇರಳ ಸರ್ಕಾರ ಕರ್ನಾಟಕ ಮತ್ತು ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾಡಿರುವ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವಂತೆ ಒತ್ತಡ ತರುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಹೆದ್ದಾರಿಯನ್ನು ಶಾಶ್ವತವಾಗಿ ಬಂದ್ ಮಾಡಿ ಅದಕ್ಕೆ ಪರ್ಯಾಯವಾಗಿ ಐದು ಮಾರ್ಗಗಳನ್ನು ಬಳಸಿಕೊಳ್ಳಲು ಮುಂದಾಗಿದೆ ಎನ್ನಲಾಗಿದೆ.

ಈ ಸಂಬಂಧ ಕೇಂದ್ರ ಸರ್ಕಾರ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶವಾದ ಅಭಯಾರಣ್ಯದಲ್ಲಿ ಹಾದು ಹೋಗುವ ಕರ್ನಾಟಕ ಕೇರಳ ರಾಜ್ಯ ಸಂಪರ್ಕ ಹೊಂದುವ ರಾಷ್ಟ್ರೀಯ ಹೆದ್ದಾರಿ 766 (ಹಿಂದೆ 212) ಯನ್ನು ಶಾಶ್ವತವಾಗಿ ಮುಚ್ಚಿ ಅದಕ್ಕೆ ಪರ್ಯಾಯವಾಗಿ ರಾಜ್ಯ ಹೆದ್ದಾರಿ-90, ರಾಜ್ಯ ಹೆದ್ದಾರಿ- 89, ರಾಜ್ಯ ಹೆದ್ದಾರಿ- 59 ಮತ್ತು ಪ್ರಮುಖ ಜಿಲ್ಲಾ ರಸ್ತೆಗಳಾದ 002,001 ಅನ್ನು ಬಳಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿರುವುದಾಗಿ ತಿಳಿದು ಬಂದಿದೆ.

ಬಂಡೀಪುರ ರಸ್ತೆಯಲ್ಲಿ ಸಂಚಾರ ನಿಷೇಧ ತೆರವಿನ ಹಿಂದೆ ರಾಜಕೀಯ ದುರುದ್ದೇಶಬಂಡೀಪುರ ರಸ್ತೆಯಲ್ಲಿ ಸಂಚಾರ ನಿಷೇಧ ತೆರವಿನ ಹಿಂದೆ ರಾಜಕೀಯ ದುರುದ್ದೇಶ

ಕರ್ನಾಟಕ ಸರ್ಕಾರ ಬಂಡೀಪುರ ಅಭಯಾರಣ್ಯದೊಳಗೆ ರಾತ್ರಿ ಸಂಚಾರ ನಿಷೇಧಿಸಿರುವುದನ್ನು ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ ಕರ್ನಾಟಕದ ಕ್ರಮವನ್ನು ಎತ್ತಿ ಹಿಡಿದಿದ್ದ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಹೆದ್ದಾರಿಯನ್ನು ಸಂಪೂರ್ಣವಾಗಿ ಮುಚ್ಚುವ ನಿಟ್ಟಿನಲ್ಲಿ ಯೋಚನೆ ಮಾಡುವಂತೆಯೂ, ಪರ್ಯಾಯ ರಸ್ತೆ ಹುಡುಕುವಂತೆಯೂ ಆ.7ರಂದು ಸೂಚಿಸಿ ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಸಮಯ ನೀಡಿತ್ತು. ಅದರಂತೆ ಕೇಂದ್ರ ಸರ್ಕಾರದ ಸಾರಿಗೆ ಸಚಿವಾಲಯದ ಮುಖ್ಯ ಇಂಜಿನಿಯರ್ ಸುಪ್ರೀಂಕೋರ್ಟ್ ‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ.

Five Alternative Roads For Bandipur National Park

ರಾಜ್ಯ ಹೆದ್ದಾರಿ 90, ರಾಜ್ಯ ಹೆದ್ದಾರಿ 89 ಕರ್ನಾಟಕದಲ್ಲಿದ್ದು, ರಾಜ್ಯ ಹೆದ್ದಾರಿ 59 ಮತ್ತು ಪ್ರಮುಖ ಜಿಲ್ಲಾ ರಸ್ತೆಗಳಾದ 002, 001 ಕೇರಳದಲ್ಲಿವೆ. ಕೇರಳ ತನ್ನ ಜಿಲ್ಲಾ ರಸ್ತೆಗಳನ್ನು ರಾಜ್ಯ ಹೆದ್ದಾರಿಯನ್ನಾಗಿ ತಾಂತ್ರಿಕವಾಗಿ ಮತ್ತು ಜಾಗದ ಅಗತ್ಯಗಳಿಗೆ ಅನುಗುಣವಾಗಿ ಮೇಲ್ದರ್ಜೆಗೇರಿಸಬೇಕು. ಈ ರಸ್ತೆಗಳನ್ನು ದ್ವಿಪಥಗೊಳಿಸಿ ರಸ್ತೆ ಬದಿಯಲ್ಲಿ ನಿರ್ದಿಷ್ಟ ಪ್ರಮಾಣದ ಜಾಗ ನೀಡುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ನಿರ್ವಹಿಸಬೇಕು. ರಾಜ್ಯ ಹೆದ್ದಾರಿಗಳ ಮಾನದಂಡವನ್ನು ಈ ರಸ್ತೆಗಳು ಪೂರೈಸಿದರೆ ಬಳಿಕ ಆ ಪರ್ಯಾಯ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿಗಣಿಸಲು ಚಿಂತಿಸಲಾಗುವುದು ಎಂದು ಅಫಿಡವಿಟ್ ‌ನಲ್ಲಿ ಸೂಚಿಸಲಾಗಿದೆ.

ಬಂಡೀಪುರದಲ್ಲಿ ರಾತ್ರಿ ಸಂಚಾರ ಬೇಕೇ? ವನ್ಯಪ್ರಾಣಿಗಳ ಸಾವು ರಾಹುಲ್ ಗಾಂಧಿಗೆ ಕಾಣಿಸುತ್ತಿಲ್ಲವೇ?ಬಂಡೀಪುರದಲ್ಲಿ ರಾತ್ರಿ ಸಂಚಾರ ಬೇಕೇ? ವನ್ಯಪ್ರಾಣಿಗಳ ಸಾವು ರಾಹುಲ್ ಗಾಂಧಿಗೆ ಕಾಣಿಸುತ್ತಿಲ್ಲವೇ?

ಈಗಾಗಲೇ ಕೇರಳದ ಕೋಯಿಕ್ಕೋಡ್ ಅನ್ನು ಕರ್ನಾಟಕದ ಕೊಳ್ಳೇಗಾಲದೊಂದಿಗೆ ಬೆಸೆಯುವ 272 ಕಿ.ಮೀ.ಗಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಬಂಡೀಪುರ ಅಭಯಾರಣ್ಯದೊಳಗೆ ರಾತ್ರಿ 9 ರಿಂದ ಬೆಳಗ್ಗೆ 6ರವರೆಗೆ ವಾಹನ ಸಂಚಾರ ನಿಷೇಧಿರುವುದನ್ನು ನೆನಪಿಸಿಕೊಳ್ಳಬಹುದು.

English summary
Central government has planned to close highway of bandipur national park permanently and suggested five alternative roads. It has submitted affidavit to supreme court regarding this issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X