KRS & Kabin Dam: ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ; ಕೊಳ್ಳೆಗಾಲದಲ್ಲಿ ಪ್ರವಾಹ ಆತಂಕ
ಕೆಆರ್ ಎಸ್ ಮತ್ತು ಕಬಿನಿ ಜಲಾಶಯದ ಹೊರಹರಿವಿನಿಂದ ಕಾವೇರಿ ಆರ್ಭಟಿಸುತ್ತಿದ್ದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ನದಿ ಪಾತ್ರದ ಜನರಲ್ಲಿ ಪ್ರವಾಹ ಆತಂಕ ಎದುರಾಗಿದೆ.
ಕೊಳ್ಳೇಗಾಲದ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಆತಂಕ ಸೃಷ್ಟಿಯಾಗಿದ್ದು ಹಳೇ ಹಂಪಾಪುರ, ದಾಸನಪುರ, ಸರಗೂರು, ಅಣಗಳ್ಳಿ ಗ್ರಾಮಗಳು ಜಲಾವೃತವಾಗುವ ಭೀತಿ ಎದುರಾಗಿದೆ. ಈಗಾಗಲೇ ಹಳೇ ಹಂಪಾಪುರದ ಹತ್ತಾರು ಎಕರೆ ಜಮೀನು ಈಗಾಗಲೇ ಜಲಾವೃತಗೊಂಡಿದ್ದು ನೀರಿನ ಹರಿವು ಮತ್ತಷ್ಟು ಹೆಚ್ಚಾದರೇ ಜನ-ಜಾನುವಾರುಗಳಿಗೆ ಸಂಕಷ್ಠ ಎದುರಾಗಲಿದೆ.

ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ದಿನವೀಡಿ ನಿಗಾ ಇರಿಸಿದ್ದು ತುರ್ತು ಸಂದರ್ಭದಲ್ಲಿ ಕಾಳಜಿ ಕೇಂದ್ರಕ್ಕೆ ಜನರನ್ನು ಕರೆದೊಯ್ಯಲು ಸಿದ್ಧತೆ ನಡೆಸಲಾಗಿದೆ.
ನದಿ ತೀರದ ಗ್ರಾಮಗಳ ಮೇಲೆ ನಿಗಾ
ಕಾವೇರಿ ಹೊರಹರಿವು ಹೆಚ್ಚಾದ ಹಿನ್ನೆಲೆ ಕೊಳ್ಳೇಗಾಲ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಅಗತ್ಯ ಎಚ್ಚರಿಕೆ ಕೊಡಲಾಗಿದೆ ಎಂದು ಉಪ ವಿಭಾಗಾಧಿಕಾರಿ ಮಹೇಶ್ ಹೇಳಿದರು.
ಕೊಳ್ಳೇಗಾಲದ ಹಳೇ ಹಂಪಾಪುರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ನದಿ ತೀರದ ಗ್ರಾಮಗಳಲ್ಲಿ ದಿನವಿಡೀ ನಿಗಾ ಇರಿಸಲಾಗಿದೆ. ನದಿ ಪಾತ್ರದ ಜನರಿಗೆ ಅಗತ್ಯ ತಿಳುವಳಿಕೆ ನೀಡಲಾಗಿದೆ. ವೈಯಕ್ತಿಕ ರಕ್ಷಣೆ, ಜಾನುವಾರು ರಕ್ಷಣೆಗಾಗಿ ತುರ್ತು ಸಂದರ್ಭದಲ್ಲಿ ಕಂಟ್ರೋಲ್ ರೂಂ ನ್ನು ಸಂಪರ್ಕಿಸುವಂತೆ ಅವರು ಜನರಲ್ಲಿ ಮನವಿ ಮಾಡಿದ್ದಾರೆ.
ಜಲಾಶಯದಿಂದ ಭಾರಿ ನೀರು
ಕಾವೇರಿ ಜಲಾಶಯದಿಂದ 1,00,000 ಕ್ಯೂಸೆಕ್ಸ್ ನೀರು ಹೊರಬಿಡಲಾಗಿದ್ದು, ಕಬಿನಿ ಜಲಾಶಯದಿಂದ 30,000 ಕ್ಯೂಸೆಕ್ಸ್ ನೀರು ಹೊರಬಿಡಲಾಗುತ್ತಿದೆ. ಕಾವೇರಿ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಟ್ಟಿರುವ ಕಾರಣ ತಗ್ಗು ಪ್ರದೇಶಗಳಿಗೆ ಪ್ರವಾಹದ ಮುನ್ಸೂಚನೆ ಕೊಡಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಕೂಡ ಅಧಿಕಾರಿಗಳು ಕೆಆರ್ ಎಸ್ ಜಲಾಶಯದಿಂದ ನೀರು ಬಿಡುವ ಮುನ್ನವೇ, ಪ್ರವಾಹ ಭೀತಿ ಇರುವ ಹಳ್ಳಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications