ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ: ಕೊರೊನಾ ಸೋಂಕಿಗೆ ಮಾಜಿ ಶಾಸಕ ಪಿ.ಗುರುಸ್ವಾಮಿ ಸಾವು

By Lekhaka
|
Google Oneindia Kannada News

ಚಾಮರಾಜನಗರ, ಆಗಸ್ಟ್ 19: ಕೊರೊನಾ ವೈರಸ್ ತನ್ನ ಆರ್ಭಟವನ್ನು ದಿನದಿಂದ ದಿನಕ್ಕೆ ಮುಂದುವರೆಸಿದ್ದು, ಕೇವಲ ಜನಸಾಮಾನ್ಯರಲ್ಲದೆ ಅಧಿಕಾರಿಗಳು, ಕೊರೊನಾ ವಾರಿಯರ್ಸ್ ಗಳು, ಜನಪ್ರತಿನಿಧಿಗಳು ಹಾಗೂ ರಾಜಕಾರಣಿಗಳಿಗೂ ಸಹ ಕೊರೊನಾ ರೋಗ ಪತ್ತೆಯಾಗುತ್ತಿದೆ.

Recommended Video

Vedkrishi-ರೈತರಿಗೆ ಉಪಯೋಗವಾಗುತ್ತೆ ಈ ಅಪ್ಲಿಕೇಶನ್ | Oneindia Kannada

ಈ ಮಹಾಮಾರಿ ಕೊರೊನಾ ಸೋಂಕಿಗೆ ಚಾಮರಾಜನಗರ ಮಾಜಿ ಶಾಸಕ ಪಿ.ಗುರುಸ್ವಾಮಿ ಅವರು ಸಾವನ್ನಪ್ಪಿದ್ದಾರೆ. ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿತ್ತು.

ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಗೆ ಕೊರೊನಾ ವೈರಸ್ ಪಾಸಿಟಿವ್ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಗೆ ಕೊರೊನಾ ವೈರಸ್ ಪಾಸಿಟಿವ್

ಕೊರೊನಾ ಸೋಂಕು ತಗುಲಿರುವುದು ಖಚಿತವಾಗುತ್ತಿದ್ದಂತೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಾಜಿ ಶಾಸಕರು ನಿಧನ ಹೊಂದಿದ್ದಾರೆ.

Chamarajanagar: Former MLA P Guruswamy Died From Coronavirus Infection

ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಏಕೈಕ ಬಿಜೆಪಿ ಶಾಸಕರಾಗಿದ್ದರು. 1999 ರಲ್ಲಿ ನಡೆದ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಗುರುಸ್ವಾಮಿ ಕಣಕ್ಕಿಳಿದಿದ್ದರು. ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲದ ಬಾವುಟ ಹಾರಿಸಿದ್ದರು.

English summary
P. Guruswamy, Former MLA of Chamarajanagar, has died of coronavirus infection. A few days ago, He was confirmed of the coronavirus positive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X