ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿವೃತ್ತಿ ಘೋಷಣೆ: ರಾಜ್ಯ ಬಿಜೆಪಿಯಲ್ಲಿ ವಿಚಿತ್ರ ಬೆಳವಣಿಗೆಗಳು
ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Elections 2023 ) ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ( BJP ) ನಾಯಕರು ಪಕ್ಷ ತೊರೆದು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುತ್ತಿದ್ದಾರೆ. ಈ ಮಧ್ಯೆ, ಕೇಂದ್ರದ ಮಾಜಿ ಸಚಿವ, ಚಾಮರಾಜನಗರದ ( Chamarajanagara ) ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ( Srinivas Prasad ) ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ತಮ್ಮ ಸಂಸದರ ಅವಧಿ 2024 ರಲ್ಲಿ ಕೊನೆಗೊಂಡ ನಂತರ ಸಕ್ರಿಯ ರಾಜಕೀಯದಿಂದ ಹೊರನಡೆಯುವುದಾಗಿ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಬುಧವಾರ ಬಿಜೆಪಿ ಪಕ್ಷದ ಅಭ್ಯರ್ಥಿ ಸಿ ಎಸ್ ನಿರಂಜನ್‌ಕುಮಾರ್ ಪರ ಪ್ರಚಾರ ನಡೆಸಿದ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.

2013ರ ವಿಧಾನಸಭೆ ಚುನಾವಣೆ ತಮ್ಮ ಕೊನೆಯ ಚುನಾವಣೆ ಎಂದು ಶ್ರೀನಿವಾಸ್ ಪ್ರಸಾದ್ ಈ ಹಿಂದೆಯೇ ಘೋಷಿಸಿದ್ದರು. ಆದರೆ 2016 ರಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ಅವರು ಕಂದಾಯ ಸಚಿವ ಸ್ಥಾನದಿಂದ ಕೈಬಿಟ್ಟಾಗ ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್‌ಗೆ ವಿದಾಯ ಹೇಳಿ ಬಿಜೆಪಿ ಸೇರಿದರು.
ಅವರು ನಂಜನಗೂಡು ಉಪಚುನಾವಣೆಯಲ್ಲಿ ಸ್ಪರ್ಧಿಸಿ 2017 ರಲ್ಲಿ ಸೋತರು. ನಂತರ, 2019 ರಲ್ಲಿ ನಡೆದ ಚಾಮರಾಜನಗರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಪಡೆದರು. ಕಳೆದ ವರ್ಷ ತಮ್ಮ 75 ನೇ ಹುಟ್ಟುಹಬ್ಬವನ್ನು ತಮ್ಮ ನಿವಾಸದಲ್ಲಿ ಆಚರಿಸುತ್ತಿದ್ದಾಗ, ಪ್ರಸಾದ್ ಅವರು ರಾಜಕೀಯದಿಂದ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ.

ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ರಾಜೀನಾಮೆ
ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಮುನ್ನ ಈಶ್ವರಪ್ಪ ಮಂಗಳವಾರ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರವನ್ನು ಪ್ರತಿನಿಧಿಸುವ ಈಶ್ವರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದು, ಯಾವುದೇ ಕ್ಷೇತ್ರದಿಂದ ಉಮೇದುವಾರಿಕೆಗೆ ತಮ್ಮನ್ನು ಪರಿಗಣಿಸದಂತೆ ಮನವಿ ಮಾಡಿದ್ದಾರೆ.
ಸಚಿವ ಅಂಗಾರ ರಾಜೀನಾಮೆ
ಸುಳ್ಯ ಮೀಸಲು ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿದ್ದ ಮೀನುಗಾರಿಕಾ ಸಚಿವ ಎಸ್ ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷವು ಟಿಕೆಟ್ ನೀಡದಿದ್ದಕ್ಕೆ ನಿರಾಶೆಗೊಂಡಿಲ್ಲ ಎಂದು ತಿಳಿಸಿದ್ದಾರೆ.

'ನಾನು ಇಷ್ಟು ವರ್ಷ ಪ್ರಾಮಾಣಿಕವಾಗಿ ಮತ್ತು ಅತ್ಯಂತ ಸಮರ್ಪಣಾಭಾವದಿಂದ ಕೆಲಸ ಮಾಡಿದ್ದೇನೆ. ನಾನು ಟಿಕೆಟ್‌ಗಾಗಿ ಲಾಬಿಯಲ್ಲಿ ತೊಡಗಿಲ್ಲ. ನಾನು ಇನ್ನು ಮುಂದೆ ರಾಜಕೀಯದಲ್ಲಿ ಇರುವುದಿಲ್ಲ. ನಾನು ಪ್ರಚಾರದ ಭಾಗವಾಗುವುದಿಲ್ಲ' ಎಂದು ಅವರು ಹೇಳಿದ್ದಾರೆ.
ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾಂಗ್ರೆಸ್‌ಗೆ ?
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ನೀಡದಿದ್ದಕ್ಕಾಗಿ ಅಸಮಾಧಾನಗೊಂಡಿರುವ ಬಿಜೆಪಿ ಮುಖಂಡ ಲಕ್ಷ್ಮಣ್ ಸವದಿ ಅವರು ಕೇಸರಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬುಧವಾರ ಘೋಷಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಹಾಲಿ ಶಾಸಕ ಮಹೇಶ ಕುಮಠಳ್ಳಿ ಅವರಿಗೆ ಟಿಕೆಟ್ ನೀಡಲಾಗಿದೆ. ಸವದಿ ಅಥಣಿಯಿಂದ ಮೂರು ಬಾರಿ ಶಾಸಕರಾಗಿದ್ದರು, ಆದರೆ ಅವರು 2018 ರ ಚುನಾವಣೆಯಲ್ಲಿ ಕುಮಠಳ್ಳಿ ವಿರುದ್ಧ (ಆಗ ಕಾಂಗ್ರೆಸ್‌ನಲ್ಲಿದ್ದರು) ಸೋತರು.
'ನಾನು ಖಂಡಿತವಾಗಿಯೂ ನಿರ್ಧಾರ ತೆಗೆದುಕೊಂಡಿದ್ದೇನೆ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ' ಎಂದು ಸವದಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications