ನಿಜಗುಣ ಮಠದಲ್ಲಿ ಉಚಿತ ಆಯುರ್ವೇದ ತಪಾಸಣಾ ಶಿಬಿರ: ಏನಿದರ ವಿಶೇಷ?
ಚಾಮರಾಜನಗರ, ಅಕ್ಟೋಬರ್ 21: ಶ್ರೀ ನಿಜಗುಣ ಫೌಂಡೇಶನ್, ಗೋ ಸೇವಾ ಕರ್ನಾಟಕದ ದಕ್ಷಿಣ ಪ್ರಾಂತ, ಯೂಥ್ ಫಾರ್ ಸೇವಾ ಹಾಗೂ ಆಯುಷ್ ಇಲಾಖೆ ಚಾಮರಾಜನಗರ ಇವರ ಸಹಯೋಗದೊಂದಿಗೆ ಕೊಳ್ಳೇಗಾಲ ತಾಲೂಕಿನ ಚಿಲಕವಾಡಿ ಶ್ರೀಶಂಭುಲಿಂಗೇಶ್ವರ ಬೆಟ್ಟದ ನಿಜಗುಣ ಮಠದಲ್ಲಿ ಉಚಿತ ಆಯುರ್ವೇದ ತಪಾಸಣಾ ಶಿಬಿರವನ್ನು ಆಯೋಜಿಸುವ ಮೂಲಕ ಆಯುರ್ವೇದ ಔಷಧಿಯ ಮಹತ್ವವನ್ನು ಸಾರಲಾಯಿತು.
ಈ ವಿಶೇಷ ತಪಾಸಣಾ ಶಿಬಿರಕ್ಕೆ ಗೋವಿನ ಪೂಜೆ ಮೂಲಕ ಚಾಲನೆ ನೀಡಲಾಯಿತು. ಶಿಬಿರದ ಬಗ್ಗೆ ಮಠದ ಶ್ರೀ ಬಾಲಷಡಕ್ಷರ ಸ್ವಾಮೀಜಿ ಮಾತನಾಡಿದರು. ಶ್ರೀಮಠದಿಂದ ಈ ಭಾಗದ ಜನರಿಗೆ ಅಗತ್ಯವಿರುವ ಮಂಡಿ ನೋವು, ಬಿಪಿ, ಶುಗರ್ ಅಸ್ತಮಾ, ಕಿಡ್ನಿ ಸ್ಟೋನ್, ಮುಖ್ಯವಾಗಿ ಕ್ಯಾನ್ಸರ್ ನಿಂದ ಬಳಲುತ್ತಿರುವ ರೋಗಿಗಳಿಗೆ ನಾಟಿ ಗೋ ಆಧಾರಿತ ಆಯುರ್ವೇದ ಔಷಧೀಯ ಚಿಕಿತ್ಸೆ ಮೂಲಕ ಸೂಕ್ತ ಪರಿಹಾರ ನೀಡುವುದಕ್ಕಾಗಿ ಪ್ರತಿ ತಿಂಗಳು 5 ನೇ ತಾರೀಕು ಮಠದ ವತಿಯಿಂದ ಹಾಗೂ ಇತರೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿರುವ ಸಂಸ್ಥೆಗಳ ಸಹಕಾರದೊಂದಿಗೆ ನಡೆಸಲಾಗುವುದೆಂದು ತಿಳಿಸಿದರು.

ಕ್ಯಾನ್ಸರ್ ತಜ್ಞ ಡಾ. ಡಿ . ಪಿ ರಮೇಶ್ ಮಾತನಾಡಿ, ಆಯುರ್ವೇದ ನಿಂತಿರುವುದೇ ನಾಟಿ ಗೋವಿನ ಹಾಲು, ಮೊಸರು, ಬೆಣ್ಣೆ, ತುಪ್ಪ , ಗೋಮೂತ್ರ, ಗೋಮಯ, ಇವುಗಳ ಆಧಾರಿತವಾಗಿಯೇ ಆಯುರ್ವೇದ ಚಿಕಿತ್ಸೆ ಇದೆ. ಯಾವುದೇ ಕಾಯಿಲೆಯ ತ್ರಿದೋಷಗಳನ್ನು ಸಾಮಾನ್ಯ ಸ್ಥಿತಿಗೆ ತಂದು ಚಿಕಿತ್ಸೆ ನೀಡಿದರೆ ಅದಕ್ಕೆ ಪರಿಹಾರ ಸಾಧ್ಯ, ಕ್ಯಾನ್ಸರ್ ಕಾಯಿಲೆಗೆ ಲಕ್ಷಾಂತರ ರೂಪಾಯಿಗಳನ್ನು ಕೊಟ್ಟು ಕಿಮೋಥೆರಪಿ, ರೇಡಿಯೋಥೆರಪಿ ಚಿಕಿತ್ಸೆ ಮಾಡಿಸಿದರೂ ಸುಧಾರಣೆ ಸಾಧ್ಯವಿಲ್ಲ ಅಲ್ಲದೇ ಯಾವುದೇ ಕಾಯಿಲೆಗೆ ಇಂಗ್ಲಿಷ್ ಮೆಡಿಸನ್ಸ್ ತೆಗೆದುಕೊಂಡರೆ ಮತ್ತೊಂದು ಕಾಯಿಲೆ ಉಚಿತವಾಗಿ ದೊರೆಯುತ್ತದೆ ಎಂದರು.
ಇನ್ನು ನಮ್ಮ ಆಯುರ್ವೇದ ಪಂಚಗವ್ಯ ಚಿಕಿತ್ಸಾ ಪದ್ಧತಿ ಮೂಲಕ ಸಂಪೂರ್ಣ ಸುಧಾರಣೆ ಸಾಧ್ಯವಿದೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ನಾವು ಉಪಯೋಗಿಸುವ ಆಹಾರ ಪದ್ಧತಿ ಯಿಂದಲೇ ಕ್ಯಾನ್ಸರ್ ಕಾರಣವಾಗಿದೆ. ದಿನಚರ್ಯ, ಋತುಚಾರ್ಯ ಮತ್ತು ಮಾನಸಿಕ ಸ್ಥಿತಿಯನ್ನು ಸರಿಯಾಗಿ ಅಳವಡಿಸಿಕೊಳ್ಳುವುದರಿಂದ ಕ್ಯಾನ್ಸರ್ ತಡೆಗಟ್ಟಬಹುದು ಎಂದು ತಿಳಿಸಿದರು.
ಮಾಜಿ ಸಚಿವ ಎನ್. ಮಹೇಶ್ ಮಾತನಾಡಿ, ಆಯುರ್ವೇದ ಎಂದರೆ ಆಯಸ್ಸನ್ನು ವೃದ್ಧಿಗೊಳಿಸಿಕೊಳ್ಳುವುದು ಆಯೂರ್ ಪ್ಲಸ್ ವೇದ ಆರೋಗ್ಯವನ್ನ ಕಾಪಾಡಿಕೊಳ್ಳುವ ವಿದ್ಯೆಯೇ ಆಯುರ್ವೇದ, ನಮ್ಮ ಪರಿಸರದಲ್ಲಿ ಇರುವಂತಹ ಗಿಡಮೂಲಿಕೆಗಳಿಂದಲೇ ಅನೇಕ ರೋಗಗಳಿಗೆ ಔಷಧಿ ದೊರೆಯುತ್ತದೆ. ಆದರೆ ಅದರ ಬಳಕೆ ನಮಗೆ ಗೊತ್ತಿರುವುದಿಲ್ಲ, ಹಾಗಾಗಿ ನಮ್ಮ ಇಂದಿನವರು ಹಿತ್ತಲು ಗಿಡ ಮದ್ದಲ್ಲ ಎಂದಿದ್ದಾರೆ. ಆದರೆ ಇಂದು ಹಿತ್ತಲ ಗಿಡ ಮದ್ದು ಎಂದು ತೋರಿಸುವ ಕೆಲಸವನ್ನು ಕೈಗೆತ್ತಿಕೊಂಡಿರುವ ಮಠದ ಶ್ರೀಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಇತರ ಸಂಸ್ಥೆಗಳು ಕೈಜೋಡಿಸಿರುವುದು ತುಂಬಾ ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.
ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ನೂರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು ಎಲ್ಲರಿಗೂ ಮಠದ ವತಿಯಿಂದ ಉಪಹಾರದ ವ್ಯವಸ್ಥೆ ಮಾಡಿ, ಆಯುಸ್ ಇಲಾಖೆ ವತಿಯಿಂದ ಉಚಿತ ಔಷಧಿ ವಿತರಣೆ ಮಾಡಲಾಯಿತು. ಅಲ್ಲದೇ ಚಂದ್ರಶೇಖರ್ ಪಂಡಿತ್ ಅವರು ಉಚಿತವಾಗಿ ಕಣ್ಣಿನ ದೋಷಕ್ಕೆ ಔಷಧಿಯನ್ನು ನೀಡಿದರು. ನಂಜನಗೂಡಿನ ಪಾರಂಪರಿಕ ವೈದ್ಯರಾದ ಈಶ್ವರ್, ಆಯುಷ್ ಇಲಾಖೆಯ ಡಾ. ಸುಧಾ ಡಾ. ಕುಸುಮ ಆರ್ ಎಸ್ ಎಸ್ ನ ಸ್ವಯಂಸೇವಕರಾದ , ಬೆಂಡರಹಳ್ಳಿ ಶಿವಕುಮಾರ್, ಸುರೇಶ್, ಅರುಣ್ ಕುಮಾರ್ ವಕೀಲರಾದ ಮಧುಸೂದನ್ ಮುಡಿಗುಂಡ ಉದಯ ಕುಮಾರ್, ತೇರಂಬಳ್ಳಿ ನಾಗಭೂಷಣ್, ಕುಂತೂರು ಗ್ರಾಮ ಪಂಚಾಯಿತಿ ಸದಸ್ಯರಾದ ರವಿಕುಮಾರ್, ಗೋ ಸೇವಾ ಘಟಕದ ಮಹಲಿಂಗ, ನೈಸರ್ಗಿಕ ಕೃಷಿಕ ರೇಚಣ್ಣ, ಸತ್ತೆಗಾಲ ರವಿಶಂಕರ್, ಇನ್ನು ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.
-
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications